23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಸರ್ಕಾರಿ ಮಾದರಿ ಹಿ.ಪ್ರಾ. ಶಾಲೆಯಲ್ಲಿ ಕೊಠಡಿಗಳ ಉದ್ಘಾಟನಾ ಕಾರ್ಯಕ್ರಮ

ಬೆಳ್ತಂಗಡಿ : ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಬೆಳ್ತಂಗಡಿ ಇಲ್ಲಿ ವಿವೇಕ ಶಾಲಾ ಯೋಜನೆಯ ಅಡಿಯಲ್ಲಿ 2022-23ರಲ್ಲಿ ಮಂಜೂರಾದ ಆರು ಕೊಠಡಿಗಳ ಉದ್ಘಾಟನಾ ಕಾರ್ಯಕ್ರಮ ನ. 6 ರಂದು ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರಿಂದ ನೆರವೇರಿಸಿ ಮಾತನಾಡಿ ಬೆಳ್ತಂಗಡಿಯ ಹೃದಯ ಭಾಗದಲ್ಲಿರುವ ಈ ಮಾದರಿ ಶಾಲೆಯನ್ನು ಅಭಿವೃದ್ಧಿಪಡಿಸುವಲ್ಲಿ ಹಿಂದಿನಂತೆಯೆ ಮುಂದೆಯೂ ಸಹ ತಮ್ಮ ಸಹಕಾರ ಯಾವಾಗಲೂ ಇರುವುದಾಗಿ ಭರವಸೆಯನ್ನು ನೀಡಿದರು.

ವೇದಿಕೆಯಲ್ಲಿ ಬೆಳ್ತಂಗಡಿಯ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀಮತಿ ತಾರಕೇಸರಿರವರು, ಕ್ಷೇತ್ರ ಸಮನ್ವಯಾಧಿಕಾರಿಗಳಾದ ಮೋಹನ್ ಕುಮಾರ್, ಸಮೂಹ ಸಂಪನ್ಮೂಲ ವ್ಯಕ್ತಿ ಶ್ರೀಮತಿ ವಾರಿಜಾ, ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ನೀನಾ ಕುಮಾರ್, ಮುಖ್ಯ ಶಿಕ್ಷಕರಾದ ಸೂರ್ಯನಾರಾಯಣ ಪುತ್ತೂರಾಯರು, ಕಟ್ಟಡದ ಕಂಟ್ರಾಕ್ಟರ್ ಅಬ್ದುಲ್ ರಜಾಕ್ ರವರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಕಟ್ಟಡ ಮಂಜೂರಾತಿಯಲ್ಲಿ ಶಾಸಕರ ನೆರವನ್ನು ನೆನೆದು ಅವರಿಗೆ ಕಿರು ಸನ್ಮಾನವನ್ನು ಮಾಡಲಾಯಿತು. ಹಾಗೆ ಕ್ಲಪ್ತ ವೇಳೆಯಲ್ಲಿ ಕಟ್ಟಡವನ್ನು ಪೂರ್ಣಗೊಳಿಸಿದ ಕಂಟ್ರಾಕ್ಟರ್ ಅವರಿಗೂ ಕಿರು ಕಾಣಿಕೆಯನ್ನು ನೀಡಲಾಯಿತು.

ಈ ಸಮಯದಲ್ಲಿ ವಿಶೇಷ ಚೇತನವುಳ್ಳ ಮಕ್ಕಳಿಗೆ ಇಲಾಖಾ ವತಿಯಿಂದ ಕೊಡ ಮಾಡಲ್ಪಡುವ ಸಾಧಾರಣ ಸಲಕರಣೆಗಳನ್ನು ಶಾಸಕರು ವಿತರಿಸಿದರು. BIERT ಜಗದೀಶ್ ರವರು ಈ ಮಕ್ಕಳಿಗೆ ಸಿಗುವ ಸೌಲತ್ತುಗಳ ಬಗ್ಗೆ ವಿವರಿಸಿದರು. ಇಲಾಖಾ ಪರವಾಗಿ ಶ್ರೀಮತಿ ತಾರಕೇಸರಿರವರು ಶುಭವನ್ನು ಹಾರೈಸಿದರು.

ಶಾಲಾ ಮುಖ್ಯ ಶಿಕ್ಷಕರು ಸ್ವಾಗತಿಸಿ, ಶಿಕ್ಷಕಿ ವಿದ್ಯಾ ಶೆಣೈ ವಂದನಾರ್ಪಣೆ ಮಾಡಿ ಶಿಕ್ಷಕಿ ಶುಭಾರವರು ನಿರೂಪಿಸಿದರು.

Related posts

ಬೆಳ್ತಂಗಡಿ: ತಾಲೂಕು ಯುವಬಿಲ್ಲವ ವೇದಿಕೆಯ ವತಿಯಿಂದ ವೀಲ್ ಚೇರ್ ವಿತರಣೆ

Suddi Udaya

ಕಳೆಂಜ ಎಸ್ ಟಿ ಮೋರ್ಚಾದ ಅಧ್ಯಕ್ಷ ರಾಜೇಶ್ ಎಂ.ಕೆ. ಪೋಕ್ಸೋ ಪ್ರಕರಣ: ಸರಿಯಾದ ತನಿಖೆಯನ್ನು ಮಾಡಿ ಸತ್ಯಾಂಶವನ್ನು ಹೊರ ತರುವ ಕೆಲಸವನ್ನು ಗೃಹ ಇಲಾಖೆ ಮಾಡಬೇಕು: ಕಳೆಂಜ ಗ್ರಾ.ಪಂ. ಮಾಜಿ ಅಧ್ಯಕ್ಷ ಪ್ರಸನ್ನ

Suddi Udaya

ಇಂದಬೆಟ್ಟು ಗ್ರಾ.ಪಂ. ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು 15 ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆ

Suddi Udaya

ಮಚ್ಚಿನ: ಅನುಮತಿ ಇಲ್ಲದೆ ಮರ ಕಡಿದು ಮೂರು ವಿದ್ಯುತ್ ಕಂಬಕ್ಕೆ ಹಾನಿ; ಮೆಸ್ಕಾಂ ಸಹಾಯವಾಣಿಗೆ ದೂರು ನೀಡಿದ್ದಕ್ಕೆ ದಂಪತಿಗಳಿಗೆ ಹಲ್ಲೆ

Suddi Udaya

ಹೊಚ್ಚ ಹೊಸ ಸಂಗ್ರಹದೊಂದಿಗೆ ಬೆಳ್ತಂಗಡಿ ಮಾತೃಶ್ರೀ ಟೆಕ್ಸ್‌ಟೈಲ್ಸ್‌ನಲ್ಲಿ ದೀಪಾವಳಿ ಪ್ರಯುಕ್ತ ಪ್ಲ್ಯಾಟ್ 10% ಡಿಸ್ಕೌಂಟ್ ಸೇಲ್

Suddi Udaya

ಧರ್ಮಸ್ಥಳ ಯಕ್ಷಗಾನ ಮೇಳ: ಸೇವೆ ಬಯಲಾಟ ಪ್ರದರ್ಶನ

Suddi Udaya
error: Content is protected !!