25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಉಜಿರೆ ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ರವರಿಗೆ ‘ಮಹಾತ್ಮ ಗಾಂಧಿ ಸದ್ಭಾವನಾ ಅಂತರಾಷ್ಟ್ರೀಯ ಪ್ರಶಸ್ತಿ’ ಪ್ರದಾನ

ಉಜಿರೆ: ಸ್ಪೇಸ್ ಮೀಡಿಯಾ, ಅದನಿ ಗ್ರೂಪ್ ಆಫ್ ಕಂಪನಿ ಅರ್ಪಿಸುವ ಗಾಂಧಿ ಸ್ಮೃತಿ, ನಮ್ಮ ನಡೆ ಗಾಂಧಿ‌ ತತ್ವದೆಡೆ ಕಾರ್ಯಕ್ರಮದಲ್ಲಿ ಉಜಿರೆ ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ರವರು ಮಹಾತ್ಮ ಗಾಂಧಿ ಸದ್ಭಾವನಾ ಅಂತರಾಷ್ಟ್ರೀಯ ಪ್ರಶಸ್ತಿ- 2023 ಬೆಂಗಳೂರು ಗಾಂಧಿ ಭವನದಲ್ಲಿ ಇಂದು ನ.6 ರಂದು ಪ್ರಶಸ್ತಿ ಪ್ರದಾನ ಮಾಡಲಾಯಿತು.


ಕರ್ನಾಟಕ ಸರಕಾರದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಶಸ್ತಿ ಪ್ರದಾನ ಮಾಡಿದರು.

ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದಲ್ಲಿ ಮಹತ್ತರ ಸೇವೆ ಸಲ್ಲಿಸುತ್ತಿದ್ದು, ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕರಾಗಿ ಹಲವಾರು ಉಪಯುಕ್ತ ಸೇವೆ ಸಲ್ಲಿಸಿದರ ಫಲವಾಗಿ ಈ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಈ ಸಂದರ್ಭದಲ್ಲಿ ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರು ಯು.ಟಿ ಖಾದರ್, ಎಸ್.ಡಿ.ಎಂ ಶೈಕ್ಷಣಿಕ ಸಮೂಹ ಸಂಸ್ಥೆಗಳ ಉಪಾಧ್ಯಕ್ಷರು ಸುರೇಂದ್ರ ಕುಮಾರ್ ಧರ್ಮಸ್ಥಳ, ದಾವಣಗೆರೆ ಮಹಾರಾಜಸೋಪ್ಸ್ ಆಂಡ್ ಡಿರ್ಟಜೆಂಟ್ ಪ್ರೈವೇಟ್ ಲಿ. ಮಾನೇಂಜಿಗ್ ಡೈರೆಕ್ಟರ್ ಡಾ. ಎಂ. ಇ ರವಿರಾಜ, ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ, ಕಾರ್ಯಕ್ರಮ ನಿರ್ವಹಣಾ ಸಮಿತಿಯ ಅಧ್ಯಕ್ಷ ಕೆ. ಕೇಶ ಶಯನ, ರಾಷ್ಟ್ರೀಯ ಮಳೆಯಾಶ್ರಿತ ಪ್ರದೇಶ ಪ್ರಾಧೀಕಾರದ ಸಿಇಒ ಡಾ| ಅಶೋಕ್ ದಾಳವಾಯಿ, ಉಜಿರೆ ಸಂಧ್ಯಾ ಟ್ರೇಡರ್‍ಸ್ ಮಾಲಕ ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ರಾಜೇಶ್ ಪೈ, ಇತರರು ಉಪಸ್ಥಿತರಿದ್ದರು.

Related posts

ಭಾರಿ ಗಾಳಿ ಮಳೆ: ಉಜಿರೆ ಪೆರ್ಲ ನಿವಾಸಿ ಹೇಮಾವತಿರವರ ಮನೆಗೆ ತೆಂಗಿನ ಮರ ಬಿದ್ದು ಹಾನಿ: ಗ್ರಾ.ಪಂ. ನಿಂದ ನೆರವು

Suddi Udaya

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆಯ ರಾಜ್ಯ ಸಮಿತಿ ಸದಸ್ಯರಾಗಿ ಉಮಾ ಸುನಿಲ್ ಆಯ್ಕೆ

Suddi Udaya

ಮಂಗಳೂರು ವಿ. ವಿ. ಅಂತರ್ ಕಾಲೇಜು ಪುರುಷರ ಕ್ರಿಕೆಟ್: ಸೇಕ್ರೆಡ್ ಹಾರ್ಟ್ ಕಾಲೇಜು ಮಡಂತ್ಯಾರು ಸತತ ಮೂರನೇ ಬಾರಿಗೆ ಚಾಂಪಿಯನ್

Suddi Udaya

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಬಂಧ ಬ್ರಹ್ಮಕಲಶೋತ್ಸವ: ನೂತನ ಸಭಾಭವನದ ಉದ್ಘಾಟನೆ

Suddi Udaya

ಗುರುವಾಯನಕೆರೆ: ಶ್ರೀ ವೇದವ್ಯಾಸ ಶಿಶುಮಂದಿರದ ಪುಟಾಣಿ ಮಕ್ಕಳಿಗೆ ಶಿಶು ಶಿಕ್ಷಣ ಪ್ರಮಾಣ ಪತ್ರ

Suddi Udaya

ಪರ್ಸ್ ಹಿಂದಿರುಗಿಸಿ ಕೊಟ್ಟು ಮಾನವೀಯತೆ ಮೆರೆದ ಕೆಎಸ್.ಆರ್.ಟಿ.ಸಿ ಬಸ್ಸು ಸಿಬ್ಬಂದಿ

Suddi Udaya
error: Content is protected !!