25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ವಿದ್ಯಾ ಸಂಸ್ಥೆಯಲ್ಲಿ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಕಲೋತ್ಸವ

ಮಡಂತ್ಯಾರು: ಪ್ರತಿಯೊಂದು ಮಗುವಿನಲ್ಲಿ ಒಂದೊಂದು ಪ್ರತಿಭೆ ಇದ್ದೇ ಇರುತ್ತದೆ, ಸರಿಯಾದ ಅವಕಾಶ ಸಿಕ್ಕಾಗ ಅದು ಹೊರಹೊಮ್ಮಲು ಸಾಧ್ಯವಾಗುತ್ತದೆ. ಪ್ರತಿಭಾ ಕಾರಂಜಿ ವಿದ್ಯಾರ್ಥಿಗಳಲ್ಲಿರುವ ಸುಪ್ತ ಪ್ರತಿಭಾ ಅನಾವರಣಕ್ಕೊಂದು ಸೂಕ್ತ ವೇದಿಕೆಯಾಗಿದೆ ಎಂದು ಮಡಂತ್ಯಾರು ಗ್ರಾಮಪಂಚಾಯತ್ ಅಧ್ಯಕ್ಷೆ ರೂಪಾ ನವೀನ್ ಹೇಳಿದರು.


ಅವರು ನ.4 ಶನಿವಾರದಂದು ಮಡಂತ್ಯಾರ್ ಸೇಕ್ರೆಡ್ ಹಾರ್ಟ್ ಸಭಾ ಭವನದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ,ಕ್ಷೇತ್ರ ಸಂಪನ್ಮೂಲ ಕೇಂದ್ರ ಬೆಳ್ತಂಗಡಿ ಹಾಗೂ ಸೇಕ್ರೆಡ್ ಹಾರ್ಟ್ ವಿದ್ಯಾಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಜರುಗಿದ ಬೆಳ್ತಂಗಡಿ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಕಲೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.


ಸ್ಪರ್ಧೆಗಳಲ್ಲಿ ಸೋಲು ಗೆಲುವು ಸಾಮಾನ್ಯ. ಸೋತಾಗ ಕುಗ್ಗುವುದು ಗೆದ್ದಾಗ ಹಿಗ್ಗುವುದು ಬೇಡ. ಸೋಲು ಗೆಲುವು ಎರಡನ್ನು ಸಕಾರಾತ್ಮಕವಾಗಿ ಸ್ವೀಕರಿಸಬೇಕು ಎಂದು ಅವರು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಮುಖ್ಯ ಅತಿಥಿಗಳಾಗಿ ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ, ತಾಲೂಕು ಪ್ರಭಾರ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಸುಜಯ, ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ಮೋಹನ್ ಕುಮಾರ್, ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷೆ ಹಾಗೂ ಹಾಲಿ ಸದಸ್ಯೆ ಸಂಗೀತಾ ಶೆಟ್ಟಿ, ಗ್ರಾಮ ಪಂಚಾಯತ್ ಸದಸ್ಯ ಕಿಶೋರ್ ಶೆಟ್ಟಿ, ಬೆಳ್ತಂಗಡಿ ಪ್ರತಿಭಾ ಕಾರಂಜಿ ನೋಡಲ್ ಅಧಿಕಾರಿ ಚೇತನಾಕ್ಷಿ ಎಂ, ಪ್ರೌಢಶಾಲಾ ವಿಭಾಗದ ಶಿಕ್ಷಣ ಸಂಯೋಜಕ ಸಿದ್ದಲಿಂಗ ಸ್ವಾಮಿ, ಪುಂಜಾಲಕಟ್ಟೆ ಸಿ.ಆರ್‌.ಪಿ ಚೇತನ, ಸೇಕ್ರೆಡ್ ಹಾರ್ಟ್ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವಂ|ಜೆರೊಮ್ ಡಿಸೋಜ,ಸೇಕ್ರೆಡ್ ಹಾರ್ಟ್ ಅನುದಾನಿತ ಪ್ರೌಢಶಾಲೆ ಮಡಂತ್ಯಾರು ಇಲ್ಲಿಯ ಮುಖ್ಯ ಶಿಕ್ಷಕರಾದ ಮೋಹನ್ ನಾಯಕ್,ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕರಾದ ವಂ|ದೀಪಕ್ ಲಿಯೋ ಡೇಸಾ , ಗಾರ್ಡಿಯನ್ ಏಂಜಲ್ಸ್ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಹೆಲೆನ್ ಮೋನಿಕಾ ಲೋಬೊ,
ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷರಾದ ಕಿಶೋರ್ ಕುಮಾರ್, ಜಿಲ್ಲಾ ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮಹಮ್ಮದ್ ರಿಯಾಜ್, ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಕಾರ್ಯದರ್ಶಿ ನಿರಂಜನ್, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಸುರೇಶ್, ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷರಾದ ವೆಂಕಟೇಶ ತುಳುಪುಳೆ,ಟಿ.ಜಿ.ಟಿ ಸಂಘದ ಅಧ್ಯಕ್ಷ ಸುರೇಶ್ ಶೆಟ್ಟಿ, ಪದವೀಧರ ಪ್ರಾಥಮಿಕ ಶಾಲಾ ಸಂಘದ ಅಧ್ಯಕ್ಷ ಯೋಗೇಶ್,ಚಿತ್ರಕಲಾ ಸಂಘದ ಅಧ್ಯಕ್ಷ ತೋಮಸ್, ಎನ್ ಪಿಎಸ್ ಸಂಘದ ಅಧ್ಯಕ್ಷ ಸುರೇಶ್ ಮಾಚಾರ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಖಜಾಂಚಿ ರಾಜೇಶ್, ಸರ್ಕಾರಿ ನೌಕರರ ಸಂಘದ ಗಂಗರಾಣಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.


ಪ್ರಭಾರ ಶಿಕ್ಷಣಾಧಿಕಾರಿ ತಾರಕೇಸರಿ ಸ್ವಾಗತಿಸಿದರು, ಪ್ರತಿಭಾಕಾರಂಜಿ ನೋಡಲ್ ಅಧಿಕಾರಿ ಚೇತನಾಕ್ಷಿ ಎಂ ಪ್ರಾಸ್ತಾವಿಕವಾಗಿ ಮಾತನಾಡಿದರು.ಸೇಕ್ರೆಡ್ ಹಾರ್ಟ್ ವಿದ್ಯಾ ಸಂಸ್ಥೆಗಳ ಸಂಚಾಲಕರಾದ ವಂ|ಸ್ಟ್ಯಾನಿ ಗೋವಿಯಸ್ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು. ಸೇಕ್ರೆಡ್ ಹಾರ್ಟ್ ಪ್ರೌಢಶಾಲಾ ಮುಖ್ಯ ಶಿಕ್ಷಕ ಮೋಹನ್ ನಾಯಕ್ ಸಂದೇಶ ವಾಚನಗೈದರು,ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ವಂ| ಜೆರೊಮ್ ಡಿಸೋಜ ವಂದಿಸಿದರು, ಉಪನ್ಯಾಸಕ ವಸಂತ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Related posts

ಮುಗೇರಡ್ಕ ಮೂವರು ದೈವಗಳ ದೈವಸ್ಥಾನದ ವಾರ್ಷಿಕ ನೇಮೋತ್ಸವ

Suddi Udaya

ಪುತ್ತೂರು ಗೇರು ಸಂಶೋಧನ ಕೇಂದ್ರದ ಎರಡು ತಳಿ ಪ್ರಧಾನಿಯಿಂದ ಬಿಡುಗಡೆ

Suddi Udaya

ಕರಾಟೆ ಸ್ಪರ್ಧೆ: ಬೆಳ್ತಂಗಡಿ ಶ್ರೀ ಧ.ಮಂ. ಆಂ. ಮಾ. ಶಾಲೆಯ ವಿದ್ಯಾರ್ಥಿ ಯಶಸ್ವಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ವಾಟ್ಸಾಪ್ನಲ್ಲಿ ಸ್ಟೇಟಸ್ ಹಾಕಿದ ವಿಚಾರದಲ್ಲಿ ಜಾತಿ ನಿಂದನೆ ಆರೋಪ: ನ್ಯಾಯಾಂಗ ಬಂಧನದಲ್ಲಿದ್ದ ಇಬ್ಬರಿಗೆ ಜಾಮೀನು

Suddi Udaya

ಕಾಜೂರು ಉರೂಸ್ ಪ್ರಯುಕ್ತ ಪ್ರತಿದಿನ ಉಪನ್ಯಾಸ ಮಾಲಿಕೆ; ಪ್ರಮುಖ ವಿದ್ವಾಂಸರಿಂದ ಧರ್ಮ ಸಂದೇಶ, ಬರ್ದಾ ಸಂಗಮ

Suddi Udaya

ಧರ್ಮಸ್ಥಳ ಶ್ರೀ ಮಂ. ಸ್ವಾ. ಅ. ಹಿ. ಪ್ರಾ. ಶಾಲಾ ಅಧ್ಯಾಪಕ ವೃಂದದವರಿಂದ ಡಾ. ಡಿ ಹೆಗ್ಗಡೆಯವರ ಭೇಟಿ: ಅಭಿನಂದನೆ

Suddi Udaya
error: Content is protected !!