37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಮಾದರಿ ಶಾಲೆಗೆ ಲಯನ್ಸ್ ಕ್ಲಬ್ ನಿಂದ ಶುದ್ಧನೀರು ಯಂತ್ರ ಕೊಡುಗೆ

ಬೆಳ್ತಂಗಡಿ: ಲಯನ್ಸ್ ಕ್ಲಬ್ ಬೆಳ್ತಂಗಡಿ ಇದರ ಸುವರ್ಣ ಮಹೋತ್ಸವ ವರ್ಷದ ಸೇವಾ ಚಟುವಟಿಕೆ ವಿಸ್ತರಣೆಯ ಅಂಗವಾಗಿ ಲಯನ್ಸ್ ಜಿಲ್ಲಾ ರಾಜ್ಯಪಾಲರ ಅಧಿಕೃತ ಭೇಟಿ ಕಾರ್ಯಕ್ರಮ ದಂದು ಬೆಳ್ತಂಗಡಿ ಮಾದರಿ ಶಾಲೆಗೆ ಶುದ್ಧ ನೀರು ಯಂತ್ರವನ್ನು ಕೊಡುಗೆಯಾಗಿ ‌ನೀಡಲಾಯಿತು.


ಬೆಳ್ತಂಗಡಿ ಲಯನ್ಸ್ ಸ್ಥಾಪಕ ಸದಸ್ಯ, ಆರ್ಯಭಟ ಪ್ರಶಸ್ತಿ ಪುರಸ್ಕೃತ ವಿ.ಆರ್ ನಾಯ್ಕ್ ಅವರ ಪ್ರಾಯೋಜಕತ್ವ ದಲ್ಲಿ ಈ ಯಂತ್ರವನ್ನು ಜಿಲ್ಲಾ ರಾಜ್ಯಪಾಲ ಡಾ.ಮೆಲ್ವಿನ್ ಡಿಸೋಜಾ ಮತ್ತು ಲಯನ್ಸ್ ಜಿಲ್ಲೆಯ ಪ್ರಥಮ ಮಹಿಳೆ ಸ್ಮಿತಾ‌ ಡಿಸೋಜಾ ಶಾಲೆಗೆ ಹಸ್ತಾಂತರಿಸಿದರು.


ಕೊಡಗೆ ಸ್ವೀಕರಿಸಿದ ಶಾಲಾ ಮುಖ್ಯೋಪಾಧ್ಯಾಯ ಸೂರ್ಯನಾರಾಯಣ ಭಟ್ ಅವರು ಕೃತಜ್ಞತೆ ಸಲ್ಲಿಸಿದರು.
ಲಯನ್ಸ್ ಕ್ಲಬ್ ಅಧ್ಯಕ್ಷ ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಸಂಪುಟ ಕಾರ್ಯದರ್ಶಿ ಓಸ್ವಾಲ್ಡ್ ಡಿಸೋಜಾ, ‌ಲಿಯೋ ವಿಭಾಗದ ಅಧ್ಯಕ್ಷೆ ಡಾ. ಕಾವು ರಂಜಿತಾ ಶೆಟ್ಟಿ, ಪ್ರಮುಖರಾದ ವಿ.ಆರ್ ನಾಯ್ಕ್,
ಲಯನ್ಸ್ ಕ್ಲಬ್ ಕಾರ್ಯದರ್ಶಿ ಅನಂತಕೃಷ್ಣ, ‌ಕೋಶಾಧಿಕಾರಿ ಶುಭಾಷಿಣಿ, ಪ್ರಮುಖರಾದ ಬಿ‌.ಪಿ ಅಶೋಕ್ ಕುಮಾರ್, ಅಶ್ರಫ್ ಆಲಿಕುಂಞಿ, ಮೇದಿನಿ ಡಿ ಗೌಡ, ದತ್ತಾತ್ರೇಯ ಗೊಲ್ಲ, ಜಯರಾಂ ಭಂಡಾರಿ, ಜಗನ್ನಾಥ ಶೆಟ್ಟಿ, ಶಾಲಾ
ಶಿಕ್ಷಕವೃಂದದವರಾದ ರೇಣುಕಾ, ಅಕ್ಷತಾ, ಸವಿತಾ, ಜಯಶ್ರೀ, ಚಿತ್ರಾ, ಪ್ರಶಿಕ್ಷಣಾರ್ಥಿ ಪ್ರಮೀಳಾ ಉಪಸ್ಥಿತರಿದ್ದರು.

ಧರಣೇಂದ್ರ ಕೆ ಜೈನ್ ಕಾರ್ಯಕ್ರಮ ಸಂಯೋಜಿಸಿದರು. ಸುರೇಶ್ ಶೆಟ್ಟಿ ಲಾಯಿಲ ವಂದಿಸಿದರು.

Related posts

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಪ್ರಾಯೋಜಕತ್ವ ಹಾಗೂ ಶಾಸಕರ ಅನುದಾನದಡಿಯಲ್ಲಿ ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಸಭಾಭವನ ನಿರ್ಮಾಣದ ಶಿಲಾನ್ಯಾಸ

Suddi Udaya

ಡಿ.8-12: ಧರ್ಮಸ್ಥಳ ಲಕ್ಷದೀಪೋತ್ಸವ: ಸರ್ವಧರ್ಮ ಸಮ್ಮೇಳನ ಮತ್ತು ಸಾಹಿತ್ಯ ಸಮ್ಮೇಳನ

Suddi Udaya

ಎಸ್ ಡಿ ಎಮ್ ಬೆಳ್ತಂಗಡಿ ಶಾಲೆಗೆ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಸಂಘಟನಾ ಆಯುಕ್ತರ ಭೇಟಿ

Suddi Udaya

“ರಾಷ್ಟ್ರೀಯ ವಿಚಾರ ಸಂಕಿರಣ ಮತ್ತು ಉತ್ಸವ – ಸಂಭ್ರಮ: ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ಧರ್ಮಸ್ಥಳ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಉರುವಾಲು: ಗ್ರಾಮ ದೈವಗಳಿಗೆ ಹಾಗೂ ಪರಿವಾರ ದೈವಗಳಿಗೆ ನೇಮೋತ್ಸವ

Suddi Udaya
error: Content is protected !!