37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸಾಧಕರು

ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್ ಜನಾರ್ದನ್ ರವರಿಗೆ ಮಹಾತ್ಮ ಗಾಂಧಿ ಸದ್ಭಾವನಾ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ

ಉಜಿರೆ: ಸ್ಪೇಸ್ ಮೀಡಿಯಾ, ಅದನಿ ಗ್ರೂಪ್ ಆಫ್ ಕಂಪನಿ ಅರ್ಪಿಸುವ ಗಾಂಧಿ ಸ್ಮೃತಿ, ನಮ್ಮ ನಡೆ ಗಾಂಧಿ‌ ತತ್ವದೆಡೆ ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ ಮುನ್ನಡೆಯುತ್ತಿರುವ ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್ ಜನಾರ್ದನ ರವರಿಗೆ ಮಹಾತ್ಮ ಗಾಂಧಿ ಸದ್ಭಾವನಾ ಅಂತರಾಷ್ಟ್ರೀಯ ಪ್ರಶಸ್ತಿ- 2023 ಬೆಂಗಳೂರು ಗಾಂಧಿ ಭವನದಲ್ಲಿ ಇಂದು ನ.6 ರಂದು ಪ್ರಶಸ್ತಿ ಪ್ರದಾನ ಮಾಡಲಾಯಿತು.


ಕರ್ನಾಟಕ ಸರಕಾರದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಶಸ್ತಿ ಪ್ರದಾನ ಮಾಡಿದರು.

ಸಿರಿ ಸಂಸ್ಥೆಯಲ್ಲಿ ಮಹತ್ತರ ಸೇವೆ ಸಲ್ಲಿಸುತ್ತಿದ್ದು, ಈ ಪ್ರಶಸ್ತಿಗೆ ಭಾಜನಾರಾಗಿದ್ದಾರೆ.

ಈ ಸಂದರ್ಭದಲ್ಲಿ ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರು ಯು.ಟಿ ಖಾದರ್, ಎಸ್.ಡಿ.ಎಂ ಶೈಕ್ಷಣಿಕ ಸಮೂಹ ಸಂಸ್ಥೆಗಳ ಉಪಾಧ್ಯಕ್ಷರು ಸುರೇಂದ್ರ ಕುಮಾರ್ ಧರ್ಮಸ್ಥಳ, ದಾವಣಗೆರೆ ಮಹಾರಾಜ ಸೋಪ್ಸ್ ಆಂಡ್ ಡಿರ್ಟಜೆಂಟ್ ಪ್ರೈವೇಟ್ ಲಿ. ಮ್ಯಾನೇಜಿಂಗ್ ಡೈರೆಕ್ಟರ್ ಡಾ. ಎಂ. ಇ ರವಿರಾಜ, ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ, ಕಾರ್ಯಕ್ರಮ ನಿರ್ವಹಣಾ ಸಮಿತಿಯ ಅಧ್ಯಕ್ಷ ಕೆ. ಕೇಶ ಶಯನ, ರಾಷ್ಟ್ರೀಯ ಮಳೆಯಾಶ್ರಿತ ಪ್ರದೇಶ ಪ್ರಾಧೀಕಾರದ ಸಿಇಒ ಡಾ| ಅಶೋಕ್ ದಾಳವಾಯಿ, ಉಜಿರೆ ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್, ಉಜಿರೆ ಸಂಧ್ಯಾ ಟ್ರೇಡರ್‍ಸ್ ಮಾಲಕ ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ರಾಜೇಶ್ ಪೈ, ಸಂಧ್ಯಾ ಪ್ರೆಶ್ ಉತ್ಪಾದನಾ ಮತ್ತು ಪ್ಯಾಕೇಜಿಂಗ್ ಘಟಕದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಅರ್ಚನಾ ರಾಜೇಶ್ ಪೈ ಇತರರು ಉಪಸ್ಥಿತರಿದ್ದರು.

Related posts

ಮುಂಡಾಜೆ ಕಾಲೇಜಿನ ಎನ್ ಎಸ್ ಎಸ್ ಶಿಬಿರ ಉದ್ಘಾಟನೆ

Suddi Udaya

ಚಿಕ್ಕಮಂಗಳೂರು ಮತ್ತು ದ. ಕ ಜಿಲ್ಲೆ ಚಾರ್ಮಾಡಿ ಘಾಟ್ ಒಂಬತ್ತನೇ ತಿರುವಿನಲ್ಲಿ ಮರ ಮತ್ತು ಮಣ್ಣು ಕುಸಿದು ವಾಹನ ಸಂಚಾರ ಸ್ವಗೀತ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್‌ನಿಂದ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya

ಬೆಳ್ತಂಗಡಿ: ಸಂತೆಕಟ್ಟೆಯಲ್ಲಿ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ

Suddi Udaya

ಕಲ್ಮಂಜ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಧ್ಯಾನ ಕಾರ್ಯಕ್ರಮ

Suddi Udaya

ಕಳೆಂಜ ಗ್ರಾಮ ಪಂಚಾಯತ್ ನ ಗ್ರಾಮ ಸಭೆ

Suddi Udaya
error: Content is protected !!