24.5 C
ಪುತ್ತೂರು, ಬೆಳ್ತಂಗಡಿ
April 5, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಹೋಗುವ ಹಾಗೂ ಬರುವ ಎಲ್ಲಾ ಸರ್ಕಾರಿ ಬಸ್ಸುಗಳು ಸೌತಡ್ಕ ಮಾರ್ಗವಾಗಿ ಚಲಿಸಲು: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ವ್ಯವಸ್ಥಾಪನಾ ಸಮಿತಿಯಿಂದ ಪುತ್ತೂರು ಕ.ರಾ.ರ.ಸಾ.ನಿಗಮದ ನಿಯಂತ್ರಣಾಧಿಕಾರಿಯವರಿಗೆ ಮನವಿ

ಕೊಕ್ಕಡ: ಸೌತಡ್ಕ ಮಹಾಗಣಪತಿ ಕ್ಷೇತ್ರಕ್ಕೆ ಭೇಟಿ ನೀಡುವ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಹೋಗುವ ಹಾಗೂ ಸುಬ್ರಹ್ಮಣ್ಯ ನಿಂದ ಧರ್ಮಸ್ಥಳಕ್ಕೆ ಆಗಮಿಸುವ ಎಲ್ಲಾ ಸರ್ಕಾರಿ ಬಸ್ಸುಗಳು ಸೌತಡ್ಕ ಮಾರ್ಗವಾಗಿ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಬರುವ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಕ.ರಾ.ರ.ಸಾ.ನಿಗಮ ಪುತ್ತೂರು ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿಯವರಿಗೆ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ವ್ಯವಸ್ಥಾಪನಾ ಸಮಿತಿಯಿಂದ ನ.5 ರಂದು ಮನವಿ ಮಾಡಲಾಯಿತು.

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರವು ಹಿಂದೂ ಧಾರ್ಮಿಕ ದತ್ತಿ ಇಲಾಖಾ ವ್ಯಾಪ್ತಿಗೊಳಪಟ್ಟ ಪ್ರವರ್ಗ “ಎ”ಗೆ ಸೇರಿದ ಅಧಿಸೂಚಿತ ದೇವಾಲಯವಾಗಿದೆ. ಪ್ರಸಕ್ತ ಸರ್ಕಾರದಿಂದ ಜಾರಿಯಾಗಿರುವ ನೂತನ ಯೋಜನೆಯಾದ “ಶಕ್ತಿ ಯೋಜನೆಯ ಫಲವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಅಧಿಕ ಭಕ್ತಾದಿಗಳು ಆಗಮಿಸುತ್ತಿದ್ದಾರೆ. ಶ್ರೀ ದೇವಳವು ದಿನೇ ದಿನೇ ಅಭಿವೃದ್ಧಿ ಹೊಂದುತ್ತಿದ್ದು, ಖಾಸಗಿ ವಾಹನಗಳಲ್ಲಿ ಧರ್ಮಸ್ಥಳ ಹಾಗೂ ಕುಕ್ಕೇ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡುವ ಬಹುತೇಕ ಭಕ್ತರು ಶ್ರೀ ಕ್ಷೇತ್ರಕ್ಕೆ ಭೇಟಿ ನೀಡುತ್ತಿದ್ದು, ಸರ್ಕಾರಿ ಬಸ್ಸುಗಳಲ್ಲಿ ಆಗಮಿಸುವ ಭಕ್ತಾದಿಗಳಿಗೂ ಸುಲಭವಾಗಿ ಸೌತಡ್ಕ ಮಹಾಗಣಪತಿ ಕ್ಷೇತ್ರಕ್ಕೆ ಭೇಟಿ ನೀಡುವ ಅವಕಾಶ ಕಲ್ಪಿಸುವಂತೆ ಮನವಿ ಮಾಡಿದರು.

Related posts

ಬೆಳ್ತಂಗಡಿ ಕಾಂಗ್ರೆಸ್ ಪಕ್ಷದ ಜಿಲ್ಲಾ ಪಂಚಾಯತ್ ತಾಲೂಕು ಪಂಚಾಯತ್ ಕ್ಷೇತ್ರದ ಉಸ್ತುವಾರಿಗಳ ಸಭೆ

Suddi Udaya

ತಾಲೂಕು ಮಟ್ಟದ ಕರಾಟೆ ಪಂದ್ಯಾಟ: ಪಿಲ್ಯ ಗುಡ್ ಫ್ಯೂಚರ್ ಚೈಲ್ಡ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ವಾಣಿ ಶಿಕ್ಷಣ ಸಂಸ್ಥೆಯಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ

Suddi Udaya

ಸಾರ್ವಜನಿಕ ಗಣೇಶೋತ್ಸವವನ್ನು ಆಚರಿಸುವ ಉದ್ದೇಶ ಹಾಗೂ ಆದರ್ಶ ಗಣೇಶೋತ್ಸವದ ಆಚರಣೆ ಬಗ್ಗೆ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಮಾಹಿತಿ

Suddi Udaya

ಮಚ್ಚಿನದಲ್ಲಿ ಗ್ರಾಮಮಟ್ಟದ ಬಾಲ ಮೇಳ ಕಾರ್ಯಕ್ರಮ

Suddi Udaya

ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವಕ್ಕೆ ಚಾಲನೆ

Suddi Udaya
error: Content is protected !!