22.2 C
ಪುತ್ತೂರು, ಬೆಳ್ತಂಗಡಿ
November 24, 2024
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನಲ್ಲಿ ಬೆಳ್ತಂಗಡಿ ತಾ| ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ

ಮಡಂತ್ಯಾರು: ಪದವಿ ಪೂರ್ವ ಶಿಕ್ಷಣ ಇಲಾಖೆ ಮಂಗಳೂರು ದ.ಕ ಹಾಗೂ ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜು ಮಡಂತ್ಯಾರು ಇದರ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಬಾಲಕ-ಬಾಲಕಿಯರ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟವು ಮಡಂತ್ಯಾರ್ ಸೇಕ್ರೆಡ್ ಹಾರ್ಟ್ ಕಾಲೇಜಿನ ಒಳಾಂಗಣ ಕ್ರೀಡಾಂಗಣದಲ್ಲಿ ಜರಗಿತು.


ಸೇಕ್ರೆಡ್ ಹಾರ್ಟ್ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಅಲೆಕ್ಸ್ ಐವನ್ ಸಿಕ್ವೇರಾ ಪಂದ್ಯಾಟವನ್ನು ಉದ್ಘಾಟಿಸಿದರು. ವಿದ್ಯಾರ್ಥಿಗಳು ಅವಕಾಶ ಸಿಕ್ಕಾಗ ಅದನ್ನು ಸದುಪಯೋಗ ಪಡಿಸಿಕೊಳ್ಳಬೇಕು. ಶಟಲ್ ಬ್ಯಾಡ್ಮಿಂಟನ್ ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ನೀಡುವಂತಹ ಕ್ರೀಡೆ. ಕ್ರೀಡಾಪಟುಗಳು ತೀರ್ಪುಗಾರು ನೀಡುವ ತೀರ್ಪನ್ನು ಸಮಾನಮನಸ್ಕರಾಗಿ ಸ್ವೀಕರಿಸುವಂತಗಾಬೇಕು ಎಂದು ಅವರು ಹೇಳಿದರು.


ಸೇಕ್ರೆಡ್ ಹಾರ್ಟ್ ವಿದ್ಯಾಸಂಸ್ಥೆಯ ಸಂಚಾಲಕರಾದ ವಂ| ಸ್ಟ್ಯಾನಿ ಗೋವಿಯಸ್ ಅಧ್ಯಕ್ಷತೆ ವಹಿಸಿದ್ದರು. ಕ್ರೀಡೆಯಲ್ಲಿ ಸೋಲು ಗೆಲುವು ಸಾಮಾನ್ಯ. ಎರಡನ್ನು ಸ್ವೀಕರಿಸುವ ಮನೋಭಾವವನ್ನು ಕ್ರೀಡಾ ಪಟುಗಳು ಬೆಳೆಸಿಕೊಳ್ಳಬೇಕು. ಸೋತಾಗ ನಿರಾಶರಾಗುವುದು, ಗೆದ್ದಾಗ ಗರ್ವಪಡುವುದು ಆಗಬಾರದು ಎಂದು ಸಂದೇಶ ನೀಡಿದರು.
ಸೇಕ್ರೆಡ್ ಹಾರ್ಟ್ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ|ಪ್ರಕಾಶ್ ಡಿಸೋಜ ಮುಖ್ಯ ಅತಿಥಿಗಳಾಗಿ ಕಾರ್ಯಕ್ರಮಕ್ಕೆ ಶುಭ ಕೋರಿದರು.
ಕಾಲೇಜಿನ ಪ್ರಾಂಶುಪಾಲರಾದ ವಂ|ಜೆರೋಮ್ ಡಿಸೋಜ ಸ್ವಾಗತಿಸಿ, ಉಪನ್ಯಾಸಕರಾದ ವಸಂತ್ ಶೆಟ್ಟಿ ವಂದಿಸಿ,ಕಾರ್ಯಕ್ರಮ ನಿರೂಪಿಸಿದರು.


ಫಲಿತಾಂಶ: ಬಾಲಕರ ವಿಭಾಗದಲ್ಲಿ ಎಸ್.ಡಿ.ಎಎಸ್.ಡಿ.ಎಂ ಪ.ಪೂ ಕಾಲೇಜು ಪ್ರಥಮ , ವಾಣಿ ಪ.ಪೂ ಕಾಲೇಜು ದ್ವಿತೀಯ , ಬಾಲಕಿಯರ ವಿಭಾಗದಲ್ಲಿ ವಾಣಿ ಪ.ಪೂ ಕಾಲೇಜು ಪ್ರಥಮ ಹಾಗೂ ಗುರುದೇವ ಪದವಿಪೂರ್ವ ಕಾಲೇಜು ದ್ವಿತೀಯ ಸ್ಥಾನ ಪಡೆಯಿತು.ಸಮಾರೋಪ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ವಂ|ಜೆರೋಮ್ ಡಿಸೋಜ ಬಹುಮಾನ ವಿತರಿಸಿದರು.ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಡೆನ್ನಿಸ್ ಫೆರ್ನಾಂಡಿಸ್ ಪಂದ್ಯಾಟದ ಯಶಸ್ಸಿಗೆ ಸಹಕರಿಸಿದರು.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಉಜಿರೆ: ಮಂಗಳೂರು ವಿ.ವಿ. ಅಂತರ ಕಾಲೇಜು ವಾಲಿಬಾಲ್ ಟೂರ್ನಿ

Suddi Udaya

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಓಡಿಲ್ನಾಳ ಮತ್ತು ಕುವೆಟ್ಟು ಗ್ರಾಮ ಸಮಿತಿಯ ತ್ರೈಮಾಸಿಕ ಸಭೆ ಹಾಗೂ ವನಮಹೋತ್ಸವ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಮತ್ತು ಲಯನ್ಸ್ ಕ್ಲಬ್ ಬೆಳ್ತಂಗಡಿಯ ವತಿಯಿಂದ ದೀಪಾವಳಿ ಸಂಭ್ರಮ

Suddi Udaya

ಮೇ 18: ವಿದ್ಯುತ್ ನಿಲುಗಡೆ

Suddi Udaya

ಬೆಳ್ತಂಗಡಿ 45ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವಕ್ಕೆ ಚಾಲನೆ

Suddi Udaya
error: Content is protected !!