April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನ.13: ಬೆಳ್ತಂಗಡಿಯಲ್ಲಿ ಬಿಜೆಪಿ ಯುವ ಮೋರ್ಚಾದಿಂದ ದೀಪಾವಳಿ ದೋಸೆ ಹಬ್ಬ ಕಾರ್ಯಕ್ರಮ

ಬೆಳ್ತಂಗಡಿ: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪ್ರತಿವರ್ಷ ಬಿಜೆಪಿ ಯುವಮೋರ್ಚಾದ ವತಿಯಿಂದ ನಡೆಯುವ ದೀಪಾವಳಿ ದೋಸೆ ಹಬ್ಬವು ಈ ಬಾರಿ ನ.13 ರಂದು ಬೆಳಿಗ್ಗೆಯಿಂದ ಸಂಜೆಯ ತನಕ ನಡೆಯಲಿದೆ.

ಬೆಳಗ್ಗೆ ತಾಲೂಕಿನ ವಿವಿಧ ಭಜನಾ ಮಂಡಳಿಗಳಿಂದ ಕುಣಿತ ಭಜನೆ ನಡೆಯಲಿದೆ. ಬೆಳ್ತಂಗಡಿ ನಗರದಾದ್ಯಂತ ದೀಪಾಲಂಕಾರ, ಸಂಜೆ ಗೋಪೂಜೆ, ಹಣತೆಗಳ ಸಾಲು, ಸಾಂಸ್ಕೃತಿಕ ಕಾರ್ಯಕ್ರಮ, ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ.

ಸಂಜೆ ಆರ್ಯಭಟ ಪ್ರಶಸ್ತಿ ವಿಜೇತ ಜಗದೀಶ್ ಆಚಾರ್ಯ ಪುತ್ತೂರು ಇವರಿಂದ ಭಕ್ತಿ ಸಂಗೀತ ಕಾರ್ಯಕ್ರಮ ನಡೆಯಲಿದೆ. ರಾತ್ರಿ ಸಮಾರೋಪ ಕಾರ್ಯಕ್ರಮದ ಬಳಿಕ ಮಂಗಳೂರಿನ ವಿಜಯ ಕುಮಾರ್ ಕೊಡಿಯಾಲ್ ಬೈಲ್ ಅವರ ತಂಡದಿಂದ ಮೈತಿದಿ ಎಂಬ ತುಳು ಹಾಸ್ಯಮಯ ನಾಟಕ ಪ್ರದರ್ಶನಗೊಳ್ಳಲಿದೆ.

ದೀಪಾವಳಿ ದೋಸೆ ಹಬ್ಬದ ಕಾರ್ಯಕ್ರಮದ ಅಂಗವಾಗಿ ಪೂರ್ವಭಾವಿ ಸಭೆಯನ್ನು ನಡೆಸಲಾಯಿತು‌.

ಈ ಸಂದರ್ಭದಲ್ಲಿ ಶಾಸಕರಾದ ಹರೀಶ್ ಪೂಂಜ,ಬಿಜೆಪಿ ಬೆಳ್ತಂಗಡಿ ಮಂಡಲದ ಅಧ್ಯಕ್ಷರಾದ ಜಯಂತ್ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿಗಳಾದ ಶ್ರೀನಿವಾಸ್ ರಾವ್, ಗಣೇಶ್ ಗೌಡ, ಯುವ ಮೋರ್ಚಾ ಅಧ್ಯಕ್ಷರಾದ ಯಶವಂತ್ ಗೌಡ ಬೆಳಾಲು, ಪ್ರಧಾನ ಕಾರ್ಯದರ್ಶಿಗಳಾದ ಉಮೇಶ್ ಕುಲಾಲ್, ವಿನೀತ್ ಕೋಟ್ಯಾನ್ ಉಪಸ್ಥಿತರಿದ್ದರು.

Related posts

ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಕಿಲ್ಲೂರಿನ ಶಾಲೆಯಲ್ಲಿ ಶೈಕ್ಷಣಿಕ ಕಾರ್ಯಕ್ರಮಗಳ ಆಯೋಜನೆ

Suddi Udaya

ಮಂಗಳೂರು ವಿಭಾಗೀಯ ರೈಲ್ವೇ ಸಮಸ್ಯೆಗಳ ಬಗ್ಗೆ ಚರ್ಚೆ ಹಾಗೂ ಶೀಘ್ರದಲ್ಲಿ ವಂದೇ ಭಾರತ್ ರೈಲು ಮಂಗಳೂರಿಗೆ : ರಾಜೇಶ್ ಪುದುಶೇರಿ

Suddi Udaya

ಜೆಸಿಐ ಭಾರತದ ವಲಯ 15ರ ಉಪಾಧ್ಯಕ್ಷರಾಗಿ ಬೆಳ್ತಂಗಡಿ ಘಟಕಾಧ್ಯಕ್ಷ ಶಂಕರ್ ರಾವ್ ಆಯ್ಕೆ

Suddi Udaya

ಸ್ಟಾರ್ ಲೈನ್ ಆಂ.ಮಾ. ಶಾಲೆ ರಝ ಗಾರ್ಡನ್ ಮಂಜೊಟ್ಟಿಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟ

Suddi Udaya

ಬೆಳ್ತಂಗಡಿ ಸ್ಟೇಟ್ ಬ್ಯಾಂಕ್ ಆಪ್ ಇಂಡಿಯಾದಲ್ಲಿ 50 ನೇ ವರ್ಷದ ಸಂಭ್ರಮಾಚರಣೆ

Suddi Udaya
error: Content is protected !!