24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ: ನೇರ್ತನೆ ಪ್ರದೇಶದಲ್ಲಿ ಕಾಡಾನೆ ದಾಳಿ

ಧರ್ಮಸ್ಥಳ : ಇಲ್ಲಿಯ ನೇರ್ತನೆ ಪ್ರದೇಶದಲ್ಲಿ ನ.6 ರಂದು ರಾತ್ರಿ ಕಾಡಾನೆಗಳು ದಾಳಿ ನಡೆಸಿದ್ದು ಕೃಷಿಗೆ ಹಾನಿಯುಂಟು ಮಾಡಿದೆ.


ಇಲ್ಲಿನ ನಿವಾಸಿ ಶ್ರೀನಿವಾಸ ಎಂಬವರ ತೋಟಕ್ಕೆ ನುಗ್ಗಿದ ಆನೆಗಳ ಹಿಂಡು ಐದು ತೆಂಗಿನ ಮರಗಳನ್ನು ಬುಡಸಮೇತ ಉರುಳಿಸಿದೆ. ಬಾಳೆಗಿಡಗಳನ್ನು ನಾಶಗೊಳಿಸಿದೆ. ಇಲ್ಲಿಯೇ ಸಮೀಪದ ಸ್ಟಾನಿ, ವಿಲ್ಸನ್ ಎಂಬವರ ತೋಟಗಳಿಗೂ ಆನೆಗಳ ಹಿಂಡು ನುಗ್ಗಿದೆ ಕಾಡಾನೆಗಳು ತೋಟಗಳಿಗೆ ನುಗ್ಗಿರುವುದನ್ನು ಗಮನಿಸಿದ ಮನೆಯವರು ಪಟಾಕಿ ಸಿಡಿಸಿ ಆನೆಗಳನ್ನು ಓಡಿಸುವ ಕಾರ್ಯ ಮಾಡಿದ್ದಾರೆ.


ಒಂದು ಮರಿಯಾನೆ ಸಹಿತ ಮೂರು ಆನೆಗಳು ಈ ಹಿಂಡಿನಲ್ಲಿವೆ ಎಂದು ಸ್ಥಳೀಯರು ಮಾಹಿತಿ ನೀಡುತ್ತಿದ್ದಾರೆ. ಒಂದು ತಿಂಗಳ ಹಿಂದೆ ಇದೇ ಆನೆಗಳ ಹಿಂಡು ಇಲ್ಲಿ ವ್ಯಾಪಕವಾಗಿ ಕೃಷಿಗೆ ಹಾನಿಯುಂಟುಮಾಡಿದ್ದವು.

Related posts

ಮಡಂತ್ಯಾರು ಮಂಜಲ್ ಪಲ್ಕೆಯಲ್ಲಿ ತೆರೆದ ಕೊಳವೆ ಬಾವಿಯನ್ನು ಮುಚ್ಚಿಸಿದ ಮಡಂತ್ಯಾರು ಗ್ರಾ.ಪಂ.

Suddi Udaya

ಬರೆಂಗಾಯ ವಣಸಾಯದಲ್ಲಿ ವನದುರ್ಗಾರಾಧನೆ, ವರ್ಷಾವಧಿ ನೇಮೋತ್ಸವ

Suddi Udaya

ಹತ್ಯಡ್ಕ: ದರ್ಬೆತಡ್ಕ ಶ್ರೀಕಾಲ ಪರಶುರಾಮ ದೇವಸ್ಥಾನದ ಮಾಜಿ ಮೊಕ್ತೇಸರ ಕೃಷ್ಣಾನಂದ ಹೆಬ್ಬಾರ್ ನಿಧನ

Suddi Udaya

ಬೆಳ್ತಂಗಡಿ: ಬಜರಂಗದಳ ಸಂಘಟನೆ ಹಾಗೂ ಶರಣ್ ಪಂಪುವೆಲ್ ರವರ ಮೇಲೆ ಅವಮಾನಕರ ಪೋಸ್ಟ್ ಮತ್ತು ವಿಡೀಯೋ ಹಾಕಿರುವ ಬಗ್ಗೆ ಬೆಳ್ತಂಗಡಿ ಪೊಲೀಸ್ ವೃತ್ತ ನಿರೀಕ್ಷಕರಿಗೆ ಮನವಿ

Suddi Udaya

ಬೆಳ್ತಂಗಡಿ ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಕ್ಷೇತ್ರ ಸಮಿತಿ ರಚನೆ

Suddi Udaya

ಅಂಡಿಂಜೆ: ವಿಶ್ವನಾಥ ಪೂಜಾರಿ ನಿಧನ

Suddi Udaya
error: Content is protected !!