September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಜಿನ ಭಜನೆ ಸ್ಪರ್ಧೆಯಲ್ಲಿ ಉಜಿರೆಯ 4 ತಂಡಗಳು ರಾಜ್ಯ ಮಟ್ಟಕ್ಕೆ ಆಯ್ಕೆ

ಉಜಿರೆ: ಭಾರತೀಯ ಜೈನ್ ಮಿಲನ್ ವಲಯ 8 ರ ಮಂಗಳೂರು ವಿಭಾಗದ 2023-24 ನೇ ಸಾಲಿನ ಜಿನ ಭಜನಾ ಸ್ಪರ್ಧೆಯು ಈ ಬಾರಿ ವೇಣೂರಿನಲ್ಲಿ 2024 ರ ಫೆಬ್ರವರಿಯಲ್ಲಿ ಜರಗುವ ಮಹಾಮಸ್ತಕಾಭಿಷೇಕದ ಮಹಾಮಜ್ಜನದ ಆಶಯದೊಂದಿಗೆ ನ. 05 ರಂದು ಜಿನ ಭಜನಾ ಸ್ಪರ್ಧೆಯು ಬಹಳ ಅದ್ದೂರಿಯಾಗಿ ಹಿರಿಯರ 59 ಮತ್ತು ಕಿರಿಯರ 32 ತಂಡಗಳು ಒಟ್ಟು 91 ತಂಡಗಳೊಂದಿಗೆ ಸ್ಪರ್ಧಾ ರೂಪದಲ್ಲಿ ಜರುಗಿಸಲಾಯಿತು.

ಈ ಸ್ಪರ್ಧೆಯಲ್ಲಿ ಉಜಿರೆಯ ಶ್ರೀಮತಿ ಸೋನಿಯಾ ವರ್ಮ ರವರ ಮಾರ್ಗದರ್ಶನದಲ್ಲಿ ಹಿರಿಯರ ವಿಭಾಗದಲ್ಲಿ ದ್ವಿತೀಯ ಮತ್ತು ಆರನೇ ಸ್ಥಾನ ಹಾಗೂ ಕಿರಿಯರ ವಿಭಾಗದಲ್ಲಿ ಎಸ್. ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ), ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸ್ಟೇಟ್) ಉಜಿರೆ, ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ವಿದ್ಯಾರ್ಥಿನಿಯರನ್ನೊಳಗೊಂಡ ಎರಡು ತಂಡಗಳಲ್ಲಿ ಪ್ರಥಮ ಮತ್ತು ನಾಲ್ಕನೇ ಸ್ಥಾನ ಪಡೆದು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.

Related posts

ರಾಜ್ಯಮಟ್ಟದ ಯುವ ಸಂಸತ್ ಸ್ಪರ್ಧೆ: ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜಿನ ವಿದ್ಯಾರ್ಥಿ ಮೋಕ್ಷಿತ್ ಎಸ್ ಬಂಗೇರ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಸಿಯೋನ್ ಆಶ್ರಮದಲ್ಲಿ ಅಂತರಾಷ್ಟ್ರೀಯ ದಾದಿಯರ ದಿನಾಚರಣೆ

Suddi Udaya

ಮುಡಿಪು ನವೋದಯ ಶಾಲೆಗೆ ಶಿಶಿಲ ಸ.ಹಿ.ಪ್ರಾ. ಶಾಲಾ ವಿದ್ಯಾರ್ಥಿ ಶಿವಾನಿ ಆರ್. ಪಿ. ಆಯ್ಕೆ

Suddi Udaya

ಶಾಸಕ ಹರೀಶ್ ಪೂಂಜರ ವಿರುದ್ಧ ಪ್ರಕರಣ: ಎರಡೂ ಕೇಸುಗಳ ಬಗ್ಗೆ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ

Suddi Udaya

ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ದೇಣಿಗೆ ಹಸ್ತಾಂತರ

Suddi Udaya

ಮುಗ್ಧ ಪ್ರವಾಸಿಗರನ್ನು ಹತ್ಯೆಗೈಯ್ಯುವ ಮೂಲಕ ಉಗ್ರರು ಹೇಡಿತನವನ್ನು ಪ್ರದರ್ಶಿಸಿದ್ದಾರೆ: ಪ್ರತಾಪ್‌ಸಿಂಹ ನಾಯಕ್

Suddi Udaya
error: Content is protected !!