March 7, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಸ್ತೆ ಬದಿಯಲ್ಲಿ ನಿಂತುಕೊಂಡಿದ್ದ ವ್ಯಕ್ತಿಗೆ ಬೈಕ್ ಡಿಕ್ಕಿ- ಗಾಯಾಳು ಪುತ್ತೂರು ಆಸ್ಪತ್ರೆಗೆ ದಾಖಲು

ಬೆಳ್ತಂಗಡಿ : ರಸ್ತೆ ಬದಿಯಲ್ಲಿ ನಿಂತುಕೊಂಡಿದ್ದ ವ್ಯಕ್ತಿಗೆ ಬೈಕ್ ಡಿಕ್ಕಿಯಾಗಿ ಗಾಯಗೊಳಿಸಿದ ಘಟನೆ ನ.8ರಂದು ಕರಾಯದಲ್ಲಿ ನಡೆದಿದೆ.

ಮೋಟಾರ್ ಸೈಕಲ್ ಸವಾರ ದಿವಾಕರ ಗೌಡ ಎಂಬವರು ಕರಾಯ ಗ್ರಾಮದ ಅಂಬ್ರೋಲಿ ಎಂಬಲ್ಲಿ ಅಜಾಗರೂಕತೆ ಹಾಗೂ ನಿರ್ಲಕ್ಷ್ಯತನದಿಂದ ‌ಬೈಕನ್ನು ಚಲಾಯಿಸಿದ ಪರಿಣಾಮ, ರಸ್ತೆ ಬದಿ ನಿಂತುಕೊಂಡಿದ್ದ ಕರಾಯ ಗ್ರಾಮದ ನಿವಾಸಿ ಅಬ್ದುಲ್ ರಝಾಕ್ ( 53ವ)ಎಂಬವರಿಗೆ ಹಿಂದಿನಿಂದ ಬಂದು ಡಿಕ್ಕಿ ಹೊಡೆದು ಅಪಘಾತವಾಗಿದೆ. ಅಪಘಾತದ ಪರಿಣಾಮ ರಸ್ತೆಗೆ ಬಿದ್ದು ರಝಾಕ್ ಅವರಿಗೆ ಗಾಯಗಳಾಗಿದ್ದು ಎರಡು ಹಲ್ಲುಗಳು ತುಂಡಾಗಿರುತ್ತದೆ. ಚಿಕಿತ್ಸೆಗಾಗಿ ಅವರನ್ನು ಪುತ್ತೂರಿನ‌ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪುತ್ತೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 150/2023 ಕಲಂ: 279, 337 ಐಪಿಸಿ ಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಶಾಂತ್ ಎಲ್. ನಿಯೋಜನೆ

Suddi Udaya

ಶ್ರೀ. ಧಂ. ಮಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ

Suddi Udaya

ಕೊಕ್ಕಡ: ಹಳ್ಳಿಂಗೇರಿ ಜನವಸತಿ ಪ್ರದೇಶದ ನಿತೇಶ್ ರವರ ಮನೆಗೆ ಸಿಡಿಲು ಬಡಿದು ಹಾನಿ

Suddi Udaya

ಬಿಷಪ್ ಲಾರೆನ್ಸ್ ಮುಕ್ಕುಯಿರವರಿಗೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಿಂದ ಗೌರವಾಭಿನಂದನೆ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯ ವತಿಯಿಂದ ಹೊಸವರ್ಷದ ಪ್ರಯುಕ್ತ ಸೌಹಾರ್ದ ಕೂಟ

Suddi Udaya

ಅಳದಂಗಡಿ ಅರಮನೆಗೆ ಶಿಲಾಮಯ ಆನೆಗಳ ಮೆರುಗು: ಪ್ರಸಿದ್ಧ ಬೆಂಗಳೂರು ಉದ್ಯಮಿ ದೇವೇಂದ್ರ ಹೆಗ್ಡೆಯವರಿಂದ ಕೊಡುಗೆ

Suddi Udaya
error: Content is protected !!