ಬೆಳ್ತಂಗಡಿ: ಪಟ್ರಮೆ ಗ್ರಾಮದ ಇಬ್ಬರು ಯುವತಿಯವರು ವಿಷ ಸೇವಿಸಿ ಸಾವನ್ನಪ್ಪಿದ ಪ್ರಕರಣದ ಸಮಗ್ರ ತನಿಖೆ ನಡೆಸುವಂತೆ ಒತ್ತಾಯಿಸಿ, ದಲಿತವಹಕ್ಕುಗಳ ಹೋರಾಟ ಸಮಿತಿಯ ನೇತೃತ್ವದಲ್ಲಿ ಇಂದು ಬೆಳ್ತಂಗಡಿ ವೃತ್ತನಿರೀಕ್ಷಕರಿಗೆ ಮನವಿ ಸಲ್ಲಿಸಲಾಯಿತು.ಪ್ರಟ್ರಮೆ ಗ್ರಾಮದ ನಿವಾಸಿಗಳಾದ ರಕ್ಷಿತಾ ಎಂಬ ದಲಿತ ಯುವತಿ ಹಾಗೂ ಲಾವಣ್ಯ ಎಂಬ ಯುವತಿ ಕಳೆದ ಎಪ್ರಿಲ್ ತಿಂಗಳಿನಲ್ಲಿ ಮೃತಪಟ್ಟಿದ್ದರು. ಹೊಟ್ಟೆ ನೋವು ಎಂದು ಆಸ್ಪತ್ರೆ ಸೇರಿದ್ದ ಇಬ್ಬರು ಯುವತಿಯರು ಬಳಿಕ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದರು. ಮರಣೋತ್ತರ ಪರೀಕ್ಷೆಯಲ್ಲಿ ಇವರು ವಿಷ ಸೇವಿಸಿರುವುದು ದೃಢ ಪಟ್ಟಿತ್ತು. ಘಟನೆ ನಡೆದು ಎಂಟು ತಿಂಗಳು ಕಳೆದರೂ ಯಾವುದೇ ಪ್ರಗತಿಯಾಗದ ಹಿನ್ನೆಲೆಯಲ್ಲಿ ಈಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಕಾಗಿದೆಈ ಸಂದರ್ಭದಲ್ಲಿ ಕಾರ್ಮಿಕ ಮುಖಂಡ ಬಿ.ಎಂ ಭಟ್ , ದಲಿತ ಮುಖಂಡರಾದ ಈಶ್ವರಿ ಹಾಗೂ ಇತರರು ಉಪಸ್ಥಿತರಿದ್ದರು.

previous post