September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಜಕ್ರೆಸಾಲು ಸೇತುವೆ ಕೆಳಗೆ ನದಿಯಲ್ಲಿ ದನದ ಚರ್ಮ ಪತ್ತೆ

ಬೆಳ್ತಂಗಡಿ: ಇಲ್ಲಿಯ ಲಾಯಿಲ ಬಜಕ್ರೆಸಾಲು ಎಂಬಲ್ಲಿ ಸೇತುವೆಯ ಕೆಳಗೆ ನದಿಯಲ್ಲಿ ದನದ ಚರ್ಮ ಪತ್ತೆಯಾಗಿದ್ದು, ಸ್ಥಳೀಯರು ನೀಡಿದ ಮಾಹಿತಿಯನ್ವಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಬಜಕ್ರೆಸಾಲಿನಲ್ಲಿ ನಡೆದುಕೊಂಡು ಹೋಗುತ್ತಿದ್ದ ಸ್ಥಳೀಯರಿಗೆ ಕೆಟ್ಟ ವಾಸನೆ ಬಂದಿದ್ದು, ಪರಿಶೀಲಿಸಿದಾಗ ಸೇತುವೆ ಕೆಳಗೆ ದನದ ಕಿವಿ ಸಹಿತ ಚರ್ಮ ಪತ್ತೆಯಾಗಿದೆ.

ಈಗಾಗಲೇ ಪೊಲೀಸ್ ಹಾಗೂ ಪಂಚಾಯತ್‌ಗೆ ಮಾಹಿತಿ ನೀಡಲಾಗಿದ್ದು, ಪೊಲೀಸರು ಬಂದು ಪರಿಶೀಲನೆ ನಡೆಸಿದ್ದಾರೆ. ಯಾರೋ ಕಿಡಿಗೇಡಿಗಳು ದನದ ಮಾಂಸ ಮಾಡಿ ಉಳಿದ ಚರ್ಮ ಸೇರಿದಂತೆ ತ್ಯಾಜ್ಯವನ್ನು ಸೇತುವೆ ಮೇಲಿನಿಂದ ನದಿಗೆ ಬಿಸಾಡಿರಬಹುದು ಎಂದು ಶಂಕಿಸಲಾಗಿದೆ.

Related posts

ಬಂದಾರು :ಕುರಾಯ ಶ್ರೀ ಸದಾಶಿವ ದೇವಸ್ಥಾನ ವಾರ್ಷಿಕ ಜಾತ್ರೋತ್ಸವ: ಗೊನೆ ಮುಹೂರ್ತ, ತೋರಣ ಮುಹೂರ್ತ, ಧ್ವಜಾರೋಹಣ

Suddi Udaya

ಶಬರಿಮಲೆ ಯಾತ್ರೆ ವೇಳೆ ರೈಲಿನಿಂದ ಬಿದ್ದು ವೃದ್ಧ ಸಾವು

Suddi Udaya

ಬೆಳ್ತಂಗಡಿ: ರಶ್ಮಿ ಕನ್ಸ್ಟ್ರಕ್ಷನ್ ಮಾಲಕ ಡಿ. ಆ‌ರ್. ರಾಜು ಪೂಜಾರಿ ಹೃದಯಾಘಾತದಿಂದ ನಿಧನ

Suddi Udaya

ಕೊಕ್ಕಡ ಅಮೃತ ಗ್ರಾ. ಪಂ. ಹಾಗೂ ಅಮೃತ ಸರೋವರದಲ್ಲಿ ಸ್ವಾತಂತ್ರೋತ್ಸವ ಆಚರಣೆ: ನಿವೃತ್ತ ಸೈನಿಕರಿಗೆ ಗೌರವಾರ್ಪಣೆ

Suddi Udaya

ಪ್ರಕೃತಿ ವಿಸ್ಮಯ: ಒಂದೇ ಗೊನೆಯಲ್ಲಿ ಎರಡು ಬಾಳೆ ಹೂ(ಪೂಂಬೆ)

Suddi Udaya

ಪೆರಾಲ್ದರಕಟ್ಟೆ ಬದ್ರೀಯಾ ಜುಮಾ ಮಸೀದಿಯಲ್ಲಿ ಈದುಲ್ ಅದಾ ಸಾಮೂಹಿಕ ಪ್ರಾರ್ಥನೆ

Suddi Udaya
error: Content is protected !!