32.6 C
ಪುತ್ತೂರು, ಬೆಳ್ತಂಗಡಿ
November 24, 2024
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ವಾಣಿ ಕಾಲೇಜಿನಲ್ಲಿ ಕಾನೂನು ಮಾಹಿತಿ ಶಿಬಿರ

ಬೆಳ್ತಂಗಡಿ: ಸರ್ವರಿಗೂ ನ್ಯಾಯವನ್ನು ಒದಗಿಸುವ ಕಾನೂನಿನ ಬಗ್ಗೆ ವಿದ್ಯಾರ್ಥಿಗಳು ತಿಳಿದುಕೊಂಡು ಉನ್ನತ ಜೀವನವನ್ನು ನಡೆಸುವಂತವರಾಗಬೇಕು ಎಂದು ಬೆಳ್ತಂಗಡಿ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಸಂದೇಶ. ಕೆ ಹೇಳಿದರು.

ಅವರು ರಾಷ್ಟ್ರೀಯ ಕಾನೂನು ಸೇವೆಗಳ ದಿನಾಚರಣೆಯ ಕುರಿತು ತಾಲೂಕು ಕಾನೂನು ಸೇವೆಗಳ ಸಮಿತಿ ಬೆಳ್ತಂಗಡಿ, ವಕೀಲರ ಸಂಘ ಬೆಳ್ತಂಗಡಿ ಹಾಗೂ ಬೆಳ್ತಂಗಡಿ ವಾಣಿ ಪದವಿ ಪೂರ್ವ ಕಾಲೇಜಿನ ಕಾನೂನು ಸಾಕ್ಷರತಾ ಸಂಘ ಇವುಗಳ ಸಂಯುಕ್ತ ಆಶ್ರಯದಲ್ಲಿ ನಡೆದ ಕಾನೂನು ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ, ದೇಶದಲ್ಲಿರುವ ಪ್ರತಿಯೊಬ್ಬರೂ ನಮ್ಮ ಸಂವಿಧಾನವನ್ನು ಗೌರವಿಸಿ ಕಾನೂನಿನ ಚೌಕಟ್ಟಿನೊಳಗೆ ಜೀವನ ಮಾಡಬೇಕು. ಕಾನೂನು ಸಲಹೆಗಳನ್ನು ಪಡೆದುಕೊಳ್ಳಬೇಕು. ಕಡಿಮೆ ಆದಾಯವುಳ್ಳವರಿಗೆ ನ್ಯಾಯಾಲಯದಿಂದ ಸಿಗುವ ಉಚಿತ ಕಾನೂನು ಸೇವೆಯನ್ನು ಸದುಪಯೋಗಿಸಿಕೊಳ್ಳಬೇಕು. ವಿದ್ಯಾರ್ಥಿಗಳು ಯಾವುದೇ ಅಪರಾಧ ಪ್ರಕರಣಗಳಲ್ಲಿ ತೊಡಗಿಸಿಕೊಳ್ಳಬಾರದು ಎಂದರು.

ವಾಣಿ ಕಾಲೇಜಿನ ಪ್ರಾಂಶುಪಾಲರಾದ ಯದುಪತಿ ಗೌಡ ಅಧ್ಯಕ್ಷತೆ ವಹಿಸಿದ್ದರು. ಬೆಳ್ತಂಗಡಿಯ ಹಿರಿಯ ವಕೀಲರಾದ ಶಿವಕುಮಾರ್ ಎಸ್ ಎಂ. ಸಂಪನ್ಮೂಲ ವ್ಯಕ್ತಿಗಳಾಗಿ ರಾಷ್ಟ್ರೀಯ ಕಾನೂನು ಸೇವೆಗಳ ದಿನಾಚರಣೆ ಕುರಿತು ಮಾಹಿತಿ ನೀಡಿದರು. ಬೆಳ್ತಂಗಡಿ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ವಿಜಯೇಂದ್ರ ಟಿ ಹೆಚ್,ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷರಾದ ವಸಂತ ಮರಕಡ,ಕಾರ್ಯದರ್ಶಿ ನವೀನ್ ಬಿ ಕೆ, ವಾಣಿ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಗಣೇಶ್ ಗೌಡ ಉಪಸ್ಥಿತರಿದ್ದರು.

ವಾಣಿ ಕಾಲೇಜಿನ ಉಪ ಪ್ರಾಂಶುಪಾಲ ವಿಷ್ಣು ಪ್ರಕಾಶ್ ಸ್ವಾಗತಿಸಿದರು. ಕಾನೂನು ಸಾಕ್ಷರತಾ ಸಂಘದ ಸಂಯೋಜಕಿ ಶ್ರೀಮತಿ ಮೀನಾಕ್ಷಿ ಧನ್ಯವಾದವಿತ್ತರು. ವಿದ್ಯಾರ್ಥಿನಿ ಕುಮಾರಿ ಸನುಷಾ ಪಿಂಟೊ ಕಾರ್ಯಕ್ರಮ ನಿರೂಪಿಸಿದರು.

Related posts

ಹಿರಿಯ ಛಾಯಾಗ್ರಾಹಕ ಶಾಂತಲಾ ಸ್ಟುಡಿಯೋ ಮಾಲಕ ಶಶಿಧರ್ ರಾವ್ ನಿಧನ

Suddi Udaya

ಪೆರ್ಲ ಬೈಪಾಡಿ ಹಿ.ಪ್ರಾ. ಶಾಲೆಯ ಬಳಿ ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹತ್ ಗಾತ್ರದ ಮರ

Suddi Udaya

ಬೆಳ್ತಂಗಡಿ : ಹಸಿರು ಕ್ರಾಂತಿಯ ಹರಿಕಾರ ಡಾ| ಬಾಬು ಜಗಜೀವನರಾಮ್ ರವರ 117ನೇ ಜನ್ಮ ದಿನಾಚರಣೆ

Suddi Udaya

ಹೆಜ್ಜೇನು ದಾಳಿಯಿಂದ ಮಗುವನ್ನು ರಕ್ಷಿಸಿದ ಮೇಲಂತ ಬೆಟ್ಟು ಗ್ರಾಮ ಪಂಚಾಯತ್ ಸಿಬ್ಬಂದಿ: ಚಂದ್ರವತಿ ಯವರ ಸಮಯ ಪ್ರಜ್ಞೆ ತಾಯಿ ಮಮತೆ ಧೈರ್ಯಕ್ಕೆ ಗ್ರಾಮಸ್ಥರ ಮೆಚ್ಚುಗೆ

Suddi Udaya

ಉಜಿರೆ ಮೆಸ್ಕಾಂ‍ನ ಸಹಾಯಕ ಇಂಜಿನಿಯರ್ ವಸಂತ ಟಿ. ರವರು ಮಂಗಳೂರು ವಿದ್ಯುತ್ ಉಪ ವಿಭಾಗದ ಸಹಾಯಕ ಇಂಜಿನಿಯರ್ ಹುದ್ದೆಗೆ ನಿಯೋಜನೆ

Suddi Udaya

ಹರೀಶ್ ಪೂಂಜರ ಜಯಭೇರಿ : ಇಬ್ಬರು ಯುವಕರಿಂದ ಅಳದಂಗಡಿ ದೇವಸ್ಥಾನಕ್ಕೆ ಪಾದಯಾತ್ರೆ

Suddi Udaya
error: Content is protected !!