24.7 C
ಪುತ್ತೂರು, ಬೆಳ್ತಂಗಡಿ
May 18, 2025
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಸ್ತೆ ಬದಿಯಲ್ಲಿ ನಿಂತುಕೊಂಡಿದ್ದ ವ್ಯಕ್ತಿಗೆ ಬೈಕ್ ಡಿಕ್ಕಿ- ಗಾಯಾಳು ಪುತ್ತೂರು ಆಸ್ಪತ್ರೆಗೆ ದಾಖಲು

ಬೆಳ್ತಂಗಡಿ : ರಸ್ತೆ ಬದಿಯಲ್ಲಿ ನಿಂತುಕೊಂಡಿದ್ದ ವ್ಯಕ್ತಿಗೆ ಬೈಕ್ ಡಿಕ್ಕಿಯಾಗಿ ಗಾಯಗೊಳಿಸಿದ ಘಟನೆ ನ.8ರಂದು ಕರಾಯದಲ್ಲಿ ನಡೆದಿದೆ.

ಮೋಟಾರ್ ಸೈಕಲ್ ಸವಾರ ದಿವಾಕರ ಗೌಡ ಎಂಬವರು ಕರಾಯ ಗ್ರಾಮದ ಅಂಬ್ರೋಲಿ ಎಂಬಲ್ಲಿ ಅಜಾಗರೂಕತೆ ಹಾಗೂ ನಿರ್ಲಕ್ಷ್ಯತನದಿಂದ ‌ಬೈಕನ್ನು ಚಲಾಯಿಸಿದ ಪರಿಣಾಮ, ರಸ್ತೆ ಬದಿ ನಿಂತುಕೊಂಡಿದ್ದ ಕರಾಯ ಗ್ರಾಮದ ನಿವಾಸಿ ಅಬ್ದುಲ್ ರಝಾಕ್ ( 53ವ)ಎಂಬವರಿಗೆ ಹಿಂದಿನಿಂದ ಬಂದು ಡಿಕ್ಕಿ ಹೊಡೆದು ಅಪಘಾತವಾಗಿದೆ. ಅಪಘಾತದ ಪರಿಣಾಮ ರಸ್ತೆಗೆ ಬಿದ್ದು ರಝಾಕ್ ಅವರಿಗೆ ಗಾಯಗಳಾಗಿದ್ದು ಎರಡು ಹಲ್ಲುಗಳು ತುಂಡಾಗಿರುತ್ತದೆ. ಚಿಕಿತ್ಸೆಗಾಗಿ ಅವರನ್ನು ಪುತ್ತೂರಿನ‌ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪುತ್ತೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 150/2023 ಕಲಂ: 279, 337 ಐಪಿಸಿ ಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಧರ್ಮಸ್ಥಳ : ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನ ಆಚರಣೆ

Suddi Udaya

ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನಾ ಸಂಚಾಲಕ ಚಂದು ಎಲ್ ರವರ ಆರೋಗ್ಯ ವಿಚಾರಿಸಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ

Suddi Udaya

ನಡ ಸ.ಪ.ಪೂ. ಕಾಲೇಜು ವಾರ್ಷಿಕ ಕ್ರೀಡಾಕೂಟ

Suddi Udaya

ಬಳಂಜ: ಬೋಂಟ್ರೊಟ್ಟುಗುತ್ತು ದೈವಸ್ಥಾನ ಕ್ಷೇತ್ರದಲ್ಲಿ ಚಾವಡಿಯಲ್ಲಿ ದೈವಗಳ ಪ್ರತಿಷ್ಠೆ ,ಕಲಶಾಭಿಷೇಕ: ಸಂಜೆ ಬಳಂಜದಿಂದ ಬೊಂಟ್ರೋಟ್ಟು ಕ್ಷೇತ್ರಕ್ಕೆ ಹಸಿರುವಾಣಿ ಮೆರವಣಿಗೆ

Suddi Udaya

ಸವಣಾಲು ಶ್ರೀ ಭೈರವ ಕ್ಷೇತ್ರಕ್ಕೆ ನೂತನ ಶಿಲಾಮಯ ಗಭ೯ಗುಡಿಯ ಶಿಲೆಗಳ ಮೆರವಣಿಗೆ

Suddi Udaya

ಕುದ್ಯಾಡಿ: ಹಿಮರಡ್ಡ ಪ್ರದೇಶದಲ್ಲಿ ಬೃಹತ್‌ ಗಾತ್ರದ ಹೆಬ್ಬಾವು ಪ್ರತ್ಯಕ್ಷ

Suddi Udaya
error: Content is protected !!