ಧರ್ಮಸ್ಥಳ: ಮಾನ್ವಿ ಶ್ರೀ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆಯು ನ. 8 ರಂದು ಒಕ್ಕೂಟದ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ಧರ್ಮಸ್ಥಳ ಗ್ರಾಮ ಪಂಚಾಯತ್ ನ ನೇತ್ರಾವತಿ ಸಭಾಂಗಣದಲ್ಲಿ ನಡೆಯಿತು.
ಮಹಾಸಭೆಯಲ್ಲಿ ಒಕ್ಕೂಟದ ಅಧ್ಯಕ್ಷೆ ರಮ್ಯಾ , ಉಪಾಧ್ಯಕ್ಷೆ ಸುನೀತಾ , ತಾಲ್ಲೂಕು ಮ್ಯಾನೇಜರ್ ನಿತೇಶ್ , ವಲಯ ಮೇಲ್ವಿಚಾರಕರಾದ ಶ್ರೀಮತಿ ವೀಣಾಶ್ರೀ, ಪಂಚಾಯತ್ ಉಪಾಧ್ಯಕ್ಷರಾದ ಪಿ. ಶ್ರೀನಿವಾಸ್ ರಾವ್, ಪಂಚಾಯತ್ ಕಾರ್ಯದರ್ಶಿ ದಿನೇಶ್. ಕೆ ಹಾಗೂ ಒಕ್ಕೂಟದ ಪದಾಧಿಕಾರಿಗಳ ಉಪಸ್ಥಿತಿಯಲ್ಲಿ ದೀಪ ಬೆಳಗಿಸುವುದರ ಮೂಲಕ ಮಹಾಸಭೆಯನ್ನು ಪ್ರಾಂಭಿಸಲಾಯಿತು.
ಪಂಚಾಯತ್ ಉಪಾಧ್ಯಕ್ಷ ಶ್ರೀನಿವಾಸ್ ರಾವ್ ಮಾತನಾಡಿ, ಮಹಿಳೆಯರಿಗೆ ಸ್ವ ಉದ್ಯೋಗ ಮಾಡಲು ಪಂಚಾಯತ್ ನಿಂದ ಸಹಕಾರ ಮಾಡುತ್ತೇವೆ ಎಂದು ತಿಳಿಸಿದರು.
ತಾಲೂಕು ಮ್ಯಾನೇಜರ್ ನಿತೇಶ್ ಒಕ್ಕೂಟದ ನಿಯಮ ನಿಬಂಧನೆಗಳು, ಧ್ಯೋಯೋದ್ದೇಶಗಳು ಮತ್ತು ಜೀವನೋಪಾಯ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ KSRLPS ಬೆಳ್ತಂಗಡಿಯ NRLM ನ MIS ನಲ್ಲಿ ಅತ್ಯುತ್ತಮ ಸಾಧನೆ ಮಾಡಿ ರಾಜ್ಯ ಮಟ್ಟದಲ್ಲಿ ಉತ್ತಮ ಸಾಧನೆ ಪ್ರಶಸ್ತಿಯನ್ನು ಪಡೆದಿರುವ ನಿತೇಶ್ ಗೆ ಅಭಿನಂದಿಸಲಾಯಿತು.
ಒಕ್ಕೂಟದಿಂದ ನಿರ್ಗಮಿಸಿದ ಸದಸ್ಯರಿಗೆ ಗೌರವಿಸಲಾಯಿತು. ಮಹಿಳೆಯರಿಗೆ ಮನರಂಜನೆ ಆಟಗಳನ್ನು ಹಮ್ಮಿಕೊಳ್ಳಲಾಗಿದ್ದು , ಇದನ್ನುಎಮ್.ಎಸ್.ಡಬ್ಲ್ಯೂ ವಿದ್ಯಾರ್ಥಿಗಳಾದ ದೇವಿಕಾ, ಪ್ರಕೃತಿ, ಕೆಜಿಯ, ಬಿಷನ್ ಇವರು ನಡೆಸಿ ಕೊಟ್ಟರು.
ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಒಕ್ಕೂಟದ ನೂತನ ಅಧ್ಯಕ್ಷರು, ಉಪಾಧ್ಯಕ್ಷರು, ಕಾರ್ಯದರ್ಶಿ, ಕೋಶಾಧಿಕಾರಿ ಪದಾಧಿಕಾರಿಗಳ ಪದಗ್ರಹಣ ನಡೆಯಿತು. ವಲಯ ಮೇಲ್ವಿಚಾರಕರಾದ ವೀಣಾ ಶ್ರೀ ಒಕ್ಕೂಟದ ನೂತನ ಪದಾಧಿಕಾರಿಗಳ ಜವಾಬ್ಧಾರಿ, ಕಾರ್ಯವೈಖರಿ ಮತ್ತು ತೊಡಗಿಸಿಕೊಳ್ಳುವಿಕೆಯ ಕುರಿತು ಮಾರ್ಗದರ್ಶನ ನೀಡಿದರು.
LCRP ಶ್ರೀಮತಿ ಪುಷ್ಪಾವತಿ ಯವರು ವರದಿ ಮಂಡನೆ ಮಾಡಿದರು. ಪದಾಧಿಕಾರಿ ಶ್ರೀಮತಿ ವಿದ್ಯಾಶ್ರೀ ಯವರು ವಾರ್ಷಿಕ ಲೆಕ್ಕಪತ್ರ ಮಂಡನೆ ಮಾಡಿದರು. ಎಮ್.ಬಿ.ಕೆ ಶ್ರೀಮತಿ ಚಂದ್ರಾವತಿ ಕಾರ್ಯಕ್ರಮ ನಿರೂಪಿಸಿದರು.
ಕಾರ್ಯಕ್ರಮದಲ್ಲಿ ಶ್ರೀಮತಿ ವೇದಾವತಿ ಯವರು ಪ್ರಾರ್ಥನೆ ಹಾಡಿ, ಕೃಷಿ ಸಖಿ ಸುಚೇತಾ ರವರು ಸ್ವಾಗತಿಸಿದರು. ಪಶುಸಖಿ, ಸಂಜೀವಿನಿ , ಸ್ತ್ರೀ ಶಕ್ತಿ ಸಂಘಗಳ ಸದಸ್ಯರು ಈ ಸಭೆಯಲ್ಲಿ ಭಾಗವಹಿಸಿದ್ದರು. LCRP ಪುಷ್ಪಾವತಿಯವರು ಧನ್ಯವಾದವಿತ್ತರು.
ಕಾರ್ಯಕ್ರಮ ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ರಮ್ಯಾ ಮಹೇಶ್, ಒಕ್ಕೂಟದ ಪದಾಧಿಕಾರಿಯಾದ ಶ್ರೀಮತಿ ವಿಜಯಲಕ್ಷ್ಮೀ ರಾಘವ್, ಒಕ್ಕೂಟದ ಪದಾಧಿಕಾರಿಗಳು ಮತ್ತು ಗ್ರಾಮ ಪಂಚಾಯತ್ ಧರ್ಮಸ್ಥಳ ಸಹಕರಿಸಿದರು.