38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮೆಸ್ಕಾಂ ಬೆಳ್ತಂಗಡಿ ಉಪವಿಭಾಗದ ಸ.ಕಾ ಅಭಿಯಂತರ ಶಿವಶಂಕರ್ ಪುತ್ತೂರಿಗೆ ವರ್ಗಾವಣೆ

ಬೆಳ್ತಂಗಡಿ: ಬೆಳ್ತಂಗಡಿ ಮೆಸ್ಕಾಂ ಉಪವಿಭಾಗದಲ್ಲಿ ಸಹಾಯಕ ಕಾರ್ಯಪಾಲಕ ಅಭಿಯಂತರರಾಗಿ ಸೇವೆ ಸಲ್ಲಿಸುತ್ತಿದ್ದ ಶಿವಶಂಕರ್ ಅವರು ಮೆಸ್ಕಾಂ ಪುತ್ತೂರು ಕುಂಬ್ರ ಗ್ರಾಮಾಂತರ ಉಪವಿಭಾಗಕ್ಕೆ ವರ್ಗಾವಣೆಗೊಂಡಿದ್ದಾರೆ.


ಬೆಳ್ತಂಗಡಿ ಮೆಸ್ಕಾಂ ಉಪವಿಭಾಗಕ್ಕೆ 1997 ಆಗಸ್ಟ್‌ನಲ್ಲಿ ಕಿರಿಯ ಇಂಜಿನಿಯರ್ ಆಗಿ ನೇಮಕಗೊಂಡ ಅವರು ಬಳಿಕ 2000 ದಿಂದ 2004 ರವರೆಗೆ ವೇಣೂರು ಶಾಖೆಯಲ್ಲಿ ಕಿರಿಯ ಇಂಜಿನಿಯರ್ ಆಗಿ ಕಾರ್ಯನಿರ್ವಹಿಸಿದ್ದರು. ನಂತರ ಸಹಾಯಕ ಇಂಜಿನಿಯರ್ ಆಗಿ ಭಡ್ತಿಗೊಂಡು ಬೆಳ್ತಂಗಡಿ ಉಪ ವಿಭಾಗಕ್ಕೆ ವರ್ಗಾವಣೆಗೊಂಡಿದ್ದರು. ಇದೇ ವಿಭಾಗದಲ್ಲಿ ಸೇವೆಸಲ್ಲಿಸುತ್ತಿರುವ ಸಂದರ್ಭ 2016 ರಲ್ಲಿ ಇವರು ಸಹಾಯಕ ಕಾರ್ಯಪಾಲಕ ಅಭಿಯಂತರರಾಗಿ ಭಡ್ತಿಗೊಂಡು ಬೆಳ್ತಂಗಡಿಯಲ್ಲೇ ಮುಂದುವರಿದ್ದರು. ಶಿವಶಂಕರ್ ಅವರು ಬೆಳ್ತಂಗಡಿ ತಾಲೂಕಿನಲ್ಲಿ ಸುಮಾರು 26 ವರ್ಷಗಳ ಕಾಲ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿದ್ದರು. ಬೆಳ್ತಂಗಡಿ ತಾಲೂಕಿನ ತೀರಾ ಗ್ರಾಮೀಣ ಪ್ರದೇಶಗಳಿಗೆ, ಗುಡ್ಡಗಾಡು ಪ್ರದೇಶಗಳಿಗೆ ಸರಕಾರದಿಂದ ಮಂಜೂರಾದ ವಿದ್ಯುತ್ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನವಾಗುವಲ್ಲಿ ಶ್ರಮ ವಹಿಸಿ, ಗ್ರಾಹಕರ ಪ್ರೀತಿ-ವಿಶ್ವಾಸಕ್ಕೆ ಪಾತ್ರರಾಗಿದ್ದರು.

Related posts

ಬೆಳಾಲು ಶ್ರೀ.ಧ. ಮ ಪ್ರೌಢಶಾಲೆಯ ವಿದ್ಯಾರ್ಥಿಗಳ ಪೋಷಕರ ಸಭೆ

Suddi Udaya

ಮಲವಂತಿಗೆ: ದಿಡುಪೆ ಶ್ರೀ ವಿದ್ಯಾ ಗಣಪತಿ ಪೂಜ್ಯೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕೊಕ್ಕಡ ಅಮೃತ ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ನಿಡ್ಲೆ ಪ್ರಾ. ಕೃ.ಪ. ಸ. ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ನಿರಂತರ ಮಳೆ: ಮದ್ದಡ್ಕ ಆಲಂದಿಲ ಮದರಸ ಬಳಿ ಚರಂಡಿ ಇಲ್ಲದೆ‌ ರಸ್ತೆಯಲ್ಲೇ ಹರಿದ ನೀರು

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವಸ್ಥಾನದಲ್ಲಿ ಗ್ರಾಮ ಸುಭಿಕ್ಷೆಗಾಗಿ ಸೀಯಾಳ ಅಭಿಷೇಕ

Suddi Udaya
error: Content is protected !!