24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್ ಡಿ ಎಂ ಪ.ಪೂ. ಕಾಲೇಜಿನಲ್ಲಿ ಬಾಲ್ಯ ವಿವಾಹ ಮುಕ್ತ ಕರ್ನಾಟಕ ಅಭಿಯಾನ ಕಾರ್ಯಕ್ರಮ

ಉಜಿರೆ: ಸಂವಿಧಾನ ಹಾಗೂ ಕಾಯ್ದೆಗಳು ಉತ್ತಮ ಸಮಾಜದ ನಿರ್ಮಾಣಕ್ಕೆ ಅತಿ ಅಗತ್ಯ. ಆದರೆ ಕಾನೂನುಗಳ ಕುರಿತಾದ ಮಾಹಿತಿಯ ಕೊರತೆಯಿಂದ ಸಾಮಾಜಿಕ ಪಿಡುಗುಗಳು ಸಮಾಜದಲ್ಲಿ ಇನ್ನೂ ಜೀವಂತವಾಗಿರುವುದು ನಾಗರಿಕ ಸಮಾಜ ಒಪ್ಪುವಂಥದ್ದಲ್ಲ. ಶಾಲಾ ಕಾಲೇಜುಗಳಲ್ಲಿ ಇಂತಹ ಕಾನೂನು ಅರಿವು ಕಾರ್ಯಕ್ರಮಗಳನ್ನು ಆಯೋಜಿಸಿ ಮಕ್ಕಳಲ್ಲಿ ಈ ಕುರಿತಾದ ಜಾಗೃತಿಯನ್ನು ಮೂಡಿಸಿದಲ್ಲಿ ಭವಿಷ್ಯದ ಪ್ರಜೆಗಳು ಸಮಾಜದಲ್ಲಿ ಜವಾಬ್ದಾರಿಯುತವಾಗಿ ಬದುಕಲು ಸಹಕಾರಿಯಾಗುತ್ತವೆ.ಬಾಲ್ಯವಿವಾಹ ದಂತಹ ಪಿಡುಗುಗಳು ಲಿಂಗತ್ವ ಸಮಾನ ಸಮಾಜ ನಿರ್ಮಾಣಕ್ಕೆ ತೊಡಕಾಗಿ ಪರಿಣಮಿಸಿದೆ ಎಂದು ಬೆಳ್ತಂಗಡಿಯ ಹಿರಿಯ ವಕೀಲರಾದ ಸುಭಾಷಿಣಿ ಆರ್ ಅಭಿಪ್ರಾಯ ಪಟ್ಟರು.


ಅವರು ಎಸ್ ಡಿ ಎಂ ಪ.ಪೂ ಕಾಲೇಜಿನಲ್ಲಿ ರಾಷ್ಟ್ರೀಯ ಉಚಿತ ಕಾನೂನು ಸಲಹಾ ದಿನಾಚರಣೆಯ ಅಂಗವಾಗಿ ಆಯೋಜಿಸಿದ್ದ, ಬಾಲ್ಯ ವಿವಾಹ ಮುಕ್ತ ಕರ್ನಾಟಕ ಅಭಿಯಾನ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.ಕಾನೂನು ಸಲಹಾ ಸಮಿತಿಯ ವಕೀಲರಾದ ಮುಮ್ತಾಜ್ ಬೇಗಂ ಹಾಗೂ ಪ್ರಿಯಾಂಕ ಕೆ.ವಿದ್ಯಾರ್ಥಿಗಳ ಸಂವಾದದಲ್ಲಿ ಭಾಗವಹಿಸಿ ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಉತ್ತರಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಪ್ರಮೋದ್ ಕುಮಾರ್ ಮಾತನಾಡಿ , ಬಾಲ್ಯವಿವಾಹ ಬೆಳೆದು ಬಂದ ಐತಿಹಾಸಿಕ ಹಿನ್ನೆಲೆಯನ್ನು ವಿವರಿಸಿ ಇಪ್ಪತೊಂದನೆಯ ಶತಮಾನದಲ್ಲಿ ಈ ಪಿಡುಗು ಮುಂದುವರಿಯುತ್ತಿರುವುದಕ್ಕೆ ವಿಷಾದ ವ್ಯಕ್ತಪಡಿಸಿದರು.


ರಾಜ್ಯಶಾಸ್ತ್ರ ವಿಭಾಗ ಮುಖ್ಯಸ್ಥೆ ದಿವ್ಯಾ ಕುಮಾರಿ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು.ಉಪನ್ಯಾಸಕರಾದ ವಿಜಯಲಕ್ಷ್ಮಿ ಕರಡಿ ಪದ್ಮಶ್ರೀ ರಕ್ಷಿತ್ ಹಾಗೂ ಡಾ. ಸಾಜಿದಾ ಉಪಸ್ಥಿತರಿದ್ದರು.
ರಾಜ್ಯಶಾಸ್ತ್ರ ವಿಭಾಗ ಹಾಗೂ ಕಾನೂನು ಸಾಕ್ಷರತಾ ಸಂಘ ಕಾರ್ಯಕ್ರಮ ಸಂಘಟಿಸಿದ್ದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿ ಮಲ್ಲಿಕಾ ಸ್ವಾಗತಿಸಿ ವಿದ್ಯಾರ್ಥಿ ವಿಷ್ಣು ಎಸ್ ಎಂ.ವಂದಿಸಿದರು.

Related posts

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನೂತನ ಉಪ ಕಾರ್ಯನಿರ್ವಹಣಾಧಿಕಾರಿಯಾಗಿ ಸುಂದರ ಗೌಡ ನೇಮಕ

Suddi Udaya

ಬೆಳ್ತಂಗಡಿ ವಕೀಲರ ಸಂಘದ ನೇತೃತ್ವದಲ್ಲಿ ಈದ್ ಮಿಲಾದ್ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಂ. ಸ್ವಾಯತ್ತ ಕಾಲೇಜಿನಲ್ಲಿ ಮನೋವಿಜ್ಞಾನ ಸಂಘ ಉದ್ಘಾಟನೆ

Suddi Udaya

ಬೆಳ್ತಂಗಡಿ: ಎಲ್.ಐ.ಸಿ ಅಭಿವೃದ್ಧಿ ಅಧಿಕಾರಿ ಟಿ.ಡಿ ರಾಘವೇಂದ್ರರವರ ಮಾತೃಶ್ರೀ ನಾಗರತ್ನಮ್ಮ ನಿಧನ

Suddi Udaya

ರಕ್ಷಿತ್ ಶಿವರಾಂ ಮನವಿಗೆ ಸ್ಪಂದನೆ: ಕಾಶಿಪಟ್ಣ ಸ.ಹಿ.ಪ್ರಾ. ಶಾಲೆಯಲ್ಲಿ ಆಂಗ್ಲ ಮಾದ್ಯಮ (ದ್ವಿಭಾಷಾ ಮಾದ್ಯಮ ) ತರಗತಿಗಳನ್ನು ಪ್ರಾರಂಭಿಸಲು ಸರ್ಕಾರದಿಂದ ಅನುಮತಿ

Suddi Udaya

ಭಾರತೀಯ ಭೂ ಸೇನೆಯಲ್ಲಿ 20 ವರ್ಷ ಸೇವೆ ಸಲ್ಲಿಸಿ ನಿವೃತ್ತಿಗೊಂಡು ಊರಿಗೆ ಆಗಮಿಸಿದ ಯೋಧ ವಿಕ್ರಮ್ ಜೆ.ಎನ್ ರವರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya
error: Content is protected !!