26.5 C
ಪುತ್ತೂರು, ಬೆಳ್ತಂಗಡಿ
September 20, 2026
This image has an empty alt attribute; its file name is sri2.jpg
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಹೆಗ್ಗಡೆಯವರಿಗೆ ‘ಕರ್ನಾಟಕ ಪರಿವರ್ತನೆಯ ರೂವಾರಿ’ ಗೌರವ ಪ್ರಶಸ್ತಿ: ಸಿರಿ ಸಿಬ್ಬಂದಿಗಳಿಂದ ಅಭಿನಂದನಾ ಕಾರ್ಯಕ್ರಮ

ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಯಾಗಿ ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ಹಾಗೂ ಆರೋಗ್ಯ ಕ್ಷೇತ್ರದಲ್ಲಿ ಗಣನೀಯ ಸೇವೆಯನ್ನು ಸಲ್ಲಿಸುತ್ತಿರುವ ಹಾಗೂ ಲೋಕ ಕಲ್ಯಾಣಾರ್ಥವಾಗಿ ಸದಾ ಜನಪರ ಕೆಲಸ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುತ್ತಿರುವ ಡಾ|| ಡಿ. ವೀರೇಂದ್ರ ಹೆಗ್ಗಡೆಯವರ ವಿಶೇಷ ಸಾಧನೆಯನ್ನು ಗುರುತಿಸಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ರವರು ಅತ್ಯಂತ ಪ್ರತಿಷ್ಠಿತ ‘ಕರ್ನಾಟಕ ಪರಿವರ್ತನೆಯ ರೂವಾರಿ ಪ್ರಶಸ್ತಿ’ಯನ್ನು ನೀಡಿ ಗೌರವಿಸಿದ್ದು ಈ ನಿಟ್ಟಿನಲ್ಲಿ ಶ್ರೀ ಕ್ಷೇತ್ರದ ಧರ್ಮಾಧಿಕಾರಿಗಳು ಹಾಗೂ ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಸಂಸ್ಥಾಪಕರೂ ಆಗಿರುವ ಡಾ|| ಡಿ ವೀರೇಂದ್ರ ಹೆಗ್ಗಡೆಯವರಿಗೆ ಸಿರಿ ಸಂಸ್ಥೆಯ ವತಿಯಿಂದ ಅಭಿನಂದನಾ ಕಾರ್ಯಕ್ರಮವು ನ.11 ರಂದು ಧರ್ಮಸ್ಥಳ ಬಿಡುವಿನಲ್ಲಿ ಜರುಗಿತು.


ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಕೆ.ಎನ್.ಜನಾರ್ಧನ ರವರು ಎಲ್ಲಾ ಸಿರಿ ಸಿಬ್ಬಂದಿಗಳ ಪರವಾಗಿ ಪರಮ ಪೂಜ್ಯರು ಹಾಗೂ ಮಾತೃಶ್ರಿ ಅಮ್ಮನವರನ್ನು ಗೌರವಿಸಿ, ಅಭಿನಂದನೆ ಸಲ್ಲಿಸಿದರು. ಮುಂದುವರೆದು ಸ್ತ್ರೀ ಸಬಲೀಕರಣದ ಧ್ಯೇಯೋದ್ದೇಶದೊಂದಿಗೆ ಸಿರಿ ಸಂಸ್ಥೆಯಲ್ಲಿ ದುಡಿಯುತ್ತಿರುವ ಸಹಸ್ರಾರು ಗ್ರಾಮೀಣ ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ಉತ್ತಮ ಸಲಹೆ, ಸಹಕಾರ, ಮಾರ್ಗದರ್ಶನವನ್ನು ನೀಡುವ ಮೂಲಕ ಸದಾ, ಸಿರಿ ಸಂಸ್ಥೆಯ ಸಮಸ್ತ ಸಿಬ್ಬಂದಿಗಳ ಏಳಿಗೆಯನ್ನು ಬಯಸುತ್ತಿರುವ ಪೂಜ್ಯ ದಂಪತಿಗಳಿಗೆ ಆಭಾರ ವ್ಯಕ್ತಪಡಿಸಿದರು.
ಸಿರಿ ಸಿಬ್ಬಂದಿಗಳ ಪ್ರೀತಿಪೂರ್ವಕ ಗೌರವವನ್ನು ಸ್ವೀಕರಿಸಿ ಮಾತನಾಡಿದ ಪೂಜ್ಯರು ಎಲ್ಲಾ ಸಿಬ್ಬಂದಿಗಳೂ ತಮ್ಮ ಕರ್ತವ್ಯದಲ್ಲಿ ಪ್ರಾಮಾಣಿಕತೆ, ನಿಷ್ಠೆಯಿಂದ ಹಾಗೂ ಶ್ರಮವಹಿಸಿ ದುಡಿದು ಸಿರಿ ಸಂಸ್ಥೆಯ ಕೀರ್ತಿ ಪತಾಕೆಯನ್ನು ಇಡೀ ದೇಶವ್ಯಾಪಿ ಎತ್ತಿ ಹಿಡಿಯುವಲ್ಲಿ ಸಂಪೂರ್ಣವಾಗಿ ಕೈಜೋಡಿಸುವಂತೆ ಸಲಹೆ ನೀಡಿದರು ಹಾಗೂ ಎಲ್ಲಾ ಸಿರಿ ಸಿಬ್ಬಂದಿಗಳಿಗೆ ದೀಪಾವಳಿ ಹಬ್ಬದ ಶುಭಾಶಯ ಕೋರಿದರು. ಅದೇ ರೀತಿ ಮಾತೃಶ್ರೀ ಹೇಮಾವತಿ ಅಮ್ಮನವರು ಎಲ್ಲಾ ಸಿರಿ ಸಿಬ್ಬಂದಿಗಳಿಗೆ ಶುಭ ಹಾರೈಸಿದರು.


ಕಾರ್ಯಕ್ರಮದಲ್ಲಿ ಸಿರಿ ಸಂಸ್ಥೆಯ ಆಡಳಿತ ನಿರ್ದೇಶಕರಾದ ಪ್ರಸನ್ನ ಯು ಹಾಗೂ ಸಂಸ್ಥೆಯ ವಿವಿಧ ವಿಭಾಗಗಳ ಮೇಲಾಧಿಕಾರಿಗಳು, ಮೇಲ್ವಿಚಾರಕರು, ಸಿರಿ ಸಿಬ್ಬಂದಿಗಳು ಉಪಸ್ಥಿತರಿದ್ದು, ಪೂಜ್ಯ ದಂಪತಿಗಳಿಗೆ ಗೌರವಾರ್ಪಣೆ ಸಲ್ಲಿಸಿದರು.

Related posts

ಮುಳಿಯ ಜುವೆಲ್ಸ್ ನಲ್ಲಿ “ಕನ್ನಡ ಬದುಕು ಬಂಗಾರ” ಕಾರ್ಯಕ್ರಮ

Suddi Udaya

ವೇಣೂರು: ಸರಕಾರಿ ಪದವಿ ಪೂರ್ವ ಕಾಲೇಜಿನ ಹಳೆ ವಿದ್ಯಾರ್ಥಿಗಳ ಅಪೂರ್ವ ಸಮಾಗಮ “ಸ್ನೇಹ ಸಮ್ಮಿಲನ”

Suddi Udaya

ನೆಲ್ಯಾಡಿ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರದಲ್ಲಿ ವಿದ್ಯಾರ್ಥಿಗಳಿಗೆ ಮೌಲ್ಯಾಧಾರಿತ ಬೇಸಿಗೆ ಶಿಬಿರ

Suddi Udaya

ಮಚ್ಚಿನ: ಬಿಜೆಪಿ ಪಕ್ಷದ ಹಿರಿಯ ಕಾರ್ಯಕರ್ತ ರುಕ್ಮಯ ಗೌಡ ನಿಧನ

Suddi Udaya

ಬೆಳ್ತಂಗಡಿ ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡೋತ್ಸವ

Suddi Udaya

ಉರುವಾಲು ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿ ಮಂತ್ರಿ ಮಂಡಲ ರಚನೆ

Suddi Udaya
error: Content is protected !!