September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಶಾಂತಿವನ ಟ್ರಸ್ಟ್ ಮತ್ತು ಉಜಿರೆ ಶ್ರೀ ಧ.ಮಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯ ಆಶ್ರಯದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ| ಪ್ರಶಾಂತ್ ಶೆಟ್ಟಿ ರವರಿಗೆ ಅಭಿನಂದನೆ

ಧರ್ಮಸ್ಥಳ: ಶ್ರೀ ಕ್ಷೇತ್ರ ಶಾಂತಿವನ ಟ್ರಸ್ಟ್ ಮತ್ತು ಶ್ರೀ ಧ.ಮಂ. ಪ್ರಕೃತಿ ಚಿಕಿತ್ಸಾ ಮತ್ತು ಉಜಿರೆ ಯೋಗ ವಿಜ್ಞಾನಗಳ ಮಹಾವಿದ್ಯಾಲಯ ಆಶ್ರಯದಲ್ಲಿ ಡಾ| ಡಿ ವೀರೇಂದ್ರ ಹೆಗ್ಗಡೆಯವರ ಆಶೀರ್ವಾದಗಳೊಂದಿಗೆ ವೈದ್ಯಕೀಯ ಕ್ಷೇತ್ರದಲ್ಲಿ ಅಪಾರ ಸಾಧನೆ ಮಾಡಿ ಕರ್ನಾಟಕ ರಾಜ್ಯದ ಪ್ರತಿಷ್ಠಿತ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ-2023 ಪುರಸ್ಕೃತರಾದ ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಕಾಲೇಜಿನ ಪ್ರಾಂಶುಪಾಲರಾದ ಡಾ| ಪ್ರಶಾಂತ್ ಶೆಟ್ಟಿ ರವರಿಗೆ ಅಭಿನಂದನಾ ಕಾರ್ಯಕ್ರಮವು ನ.11 ರಂದು ಶ್ರೀ ಕ್ಷೇತ್ರ ಧರ್ಮಸ್ಥಳ ಮಹೋತ್ಸವ ಸಭಾಭವನದಲ್ಲಿ ಜರುಗಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಶಾಂತಿವನ ಟ್ರಸ್ಟ್ ನ ಟ್ರಸ್ಟಿ ಡಿ ಹರ್ಷೆಂದ್ರ ಕುಮಾರ್ ವಹಿಸಿ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಡಾ. ಪ್ರಶಾಂತ್ ಶೆಟ್ಟಿಯವರನ್ನು ಶಾಲು, ಹೊದಿಸಿ, ಸ್ಮರಣಿಕೆ ನೀಡಿ ಗೌರವಿಸಿದರು.


ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಶಾಸಕ ಕೆ. ಪ್ರತಾಪಸಿಂಹ ನಾಯಕ್ ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಶ್ರೀ ಧ.ಮಂ.ಪ್ರ. ಚಿಕಿತ್ಸಾಲಯ ಮುಖ್ಯ ವೈದ್ಯಾಧಿಕಾರಿ ಡಾ| ಶಿವಪ್ರಸಾದ ಶೆಟ್ಟಿ, ಧರ್ಮಸ್ಥಳ ಶಾಂತಿವನ ಟ್ರಸ್ಟ್ ಕಾರ್ಯದರ್ಶಿ ಬಿ. ಸೀತಾರಾಮ ತೋಳ್ಪಾಡಿತ್ತಾಯ, ಯೋಗ ಮತ್ತು ನೈತಿಕ ಶಿಕ್ಷಣ ನಿರ್ದೇಶಕ ಡಾ. ಶಶಿಕಾಂತ ಜೈನ್, ವೈದ್ಯ ವೃಂದ ಹಾಗೂ ಸಿಬ್ಬಂದಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಭಾಷಿಣಿ ಮತ್ತು ತಂಡದವರು ಪ್ರಾಥ೯ನೆ ಬಳಿಕ ಶಾಂತಿವನ ಟ್ರಸ್ಟ್ ಕಾರ್ಯದರ್ಶಿ ಬಿ. ಸೀತಾರಾಮ ತೋಳ್ಪಾಡಿತ್ತಾಯ, ಸ್ವಾಗತಿಸಿದರು. ಯೋಗ ಮತ್ತು ನೈತಿಕ ಶಿಕ್ಷಣ ನಿರ್ದೇಶಕ ಡಾ. ಶಶಿಕಾಂತ ಜೈನ್ ಸನ್ಮಾನ ಪತ್ರ ವಾಚಿಸಿದರು. ಮುಖ್ಯ ವೈದ್ಯಾಧಿಕಾರಿ ಡಾ. ಶಿವಪ್ರಸಾದ್ ಶೆಟ್ಟಿ ವಂದಿಸಿದರು. ಅನನ್ಯ ಮತ್ತು ಪ್ರತೀಕ್ಷ ಕಾಯ೯ಕ್ರಮ ನಿರೂಪಿಸಿದರು.

Related posts

ಕಕ್ಕಿಂಜೆ ಸ. ಪ್ರೌ. ಶಾಲಾ ಇಬ್ಬರು ಶಿಕ್ಷಕರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಉಜಿರೆ ಗ್ರಾ.ಪಂ. ನಲ್ಲಿ ಸ್ವಚ್ಛತಾ ಅಭಿಯಾನ

Suddi Udaya

ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಶಿಕ್ಷಕ-ಪೋಷಕರ ಸಭೆ

Suddi Udaya

ಬಜಿಲ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಯಕ್ಷಗಾನ ನಾಟ್ಯ ತರಬೇತಿ ಉದ್ಘಾಟನೆ

Suddi Udaya

ಕರಾಯ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಬೊಮ್ಮಯ ಬಂಗೇರ ಆಯ್ಕೆ

Suddi Udaya

ವೇಣೂರು ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ವನಮಹೋತ್ಸವ

Suddi Udaya
error: Content is protected !!