26.5 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸಿರಿ ಸಂಸ್ಥೆಯ ಎಂ.ಡಿ. ಕೆ.ಎನ್ ಜನಾರ್ಧನರವರಿಗೆ ‘ಪ್ರತಿಷ್ಠಿತ ಮಹಾತ್ಮಗಾಂಧಿ ಸದ್ಭಾವನಾ ಅಂತಾರಾಷ್ಟ್ರೀಯ ಪ್ರಶಸ್ತಿ’: ಸಿರಿ ಸಿಬ್ಬಂದಿಗಳಿಂದ ಅಭಿನಂದನಾ ಕಾರ್ಯಕ್ರಮ


ಉಜಿರೆ: ಉದ್ಯಮ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಮಾಡಿರುವ ಉನ್ನತ ಸಾಧನೆಯನ್ನು ಗುರುತಿಸಿ ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಕೆ.ಎನ್.ಜನಾರ್ಧನರವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸದ್ಭಾವನಾ ಅಂತಾರಾಷ್ಟ್ರೀಯ ಪ್ರಶಸ್ತಿ ಲಭಿಸಿದ್ದು ಈ ನಿಟ್ಟಿನಲ್ಲಿ ಸಿರಿ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಸಿಬ್ಬಂದಿಗಳ ವತಿಯಿಂದ ಸಿರಿ ವ್ಯವಸ್ಥಾಪಕ ನಿರ್ದೇಶಕರಾದ ಕೆ.ಎನ್.ಜನಾರ್ಧನ ರವರಿಗೆ ಅಭಿನಂದನಾ ಕಾರ್ಯಕ್ರಮ ನ.10 ರಂದು ಉಜಿರೆ ಸಿರಿ ಕೇಂದ್ರ ಕಛೇರಿಯಲ್ಲಿ ಜರುಗಿತು.


ಸಿರಿ ಸಂಸ್ಥೆಯ ಆಡಳಿತ ನಿರ್ದೇಶಕರಾದ ಪ್ರಸನ್ನ ಯು ರವರು ಪ್ರಾಸ್ತಾವಿಕವಾಗಿ ಮಾತನಾಡಿ, ಪೂಜ್ಯರು ಹಾಗೂ ಮಾತೃಶ್ರೀ ಅಮ್ಮನವರ ಆಶ್ರಯದಲ್ಲಿ ಸ್ತ್ರೀ ಸಬಲೀಕರಣದ ಧ್ಯೇಯೋದ್ದೇಶದೊಂದಿಗೆ ಉದ್ಯಮ ಕ್ಷೇತ್ರದಲ್ಲಿ ವಿಶೇಷ ಸಾಧನೆಯನ್ನು ಮಾಡಲು ಉತ್ತಮ ಸಲಹೆ, ಮಾರ್ಗದರ್ಶನವನ್ನು ನೀಡುವ ಮೂಲಕ ಸಿರಿ ಸಂಸ್ಥೆಯನ್ನು ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಲು ಕಾರಣೀಕರ್ತರಾದ ಸಿರಿ ಎಂ.ಡಿ ಕೆ.ಎನ್.ಜನಾರ್ಧನ ರವರಿಗೆ ಎಲ್ಲಾ ಸಿರಿ ಸಿಬ್ಬಂದಿಗಳ ಪರವಾಗಿ ಪ್ರೀತಿಪೂರ್ವಕವಾಗಿ ಗೌರವಿಸಿ, ಅಭಿನಂದನೆ ಸಲ್ಲಿಸಿದರು.

ಸಿರಿ ಎಂ.ಡಿ ಕೆ.ಎನ್.ಜನಾರ್ಧನ ರವರು ಸಿರಿ ಸಂಸ್ಥೆಯು ಈ ಉನ್ನತ ಸಾಧನೆಯನ್ನು ಮಾಡುವಲ್ಲಿ ಶ್ರಮಿಸಿರುವ ಎಲ್ಲಾ ಸಿರಿ ಸಿಬ್ಬಂದಿಗಳಿಗೆ ಆಭಾರ ವ್ಯಕ್ತಪಡಿಸಿದರು ಹಾಗೂ ಎಲ್ಲಾ ಸಿಬ್ಬಂದಿಗಳಿಗೆ ಪೂಜ್ಯರು ದಯಪಾಲಿಸಿದ ದೀಪೋತ್ಸವ ಉಡುಗೊರೆಯನ್ನು ವಿತರಿಸಿ, ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಸಿರಿ ಗೋದಾಮು ಪ್ರಬಂದಕರಾದ ಜೀವನ್ ಕುಮಾರ್ ನಿರೂಪಿಸಿ, ಧನ್ಯವಾದವಿತ್ತರು.

Related posts

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಬದಿಯಡ್ಕದಲ್ಲಿ ಕಾರು ಅಪಘಾತ: ಬೆಳ್ತಂಗಡಿಯ ಇಬ್ಬರು ಪ್ರಾಣಾಪಾಯದಿಂದ ಪಾರು

Suddi Udaya

ಎಸ್.ಡಿ.ಎಂ ಸ್ನಾತಕೋತ್ತರ ವಿಭಾಗದಿಂದ “ಲೈಫ್ ಸ್ಕಿಲ್ಸ್ ಎಜುಕೇಶನ್ ಫಾರ್ ಸಸ್ಟೈನಬಲ್ ಡೆವಲಪ್ಮೆಂಟ್” ಕೌಶಲ್ಯಾಭಿವೃದ್ಧಿ ಕಾರ್ಯಾಗಾರ

Suddi Udaya

ತಣ್ಣೀರುಪಂತ ಹಾ.ಉ. ಸ. ಸಂಘದ ಅಧ್ಯಕ್ಷರಾಗಿ ಬಿ. ನಿರಂಜನ್ ಮತ್ತು ಉಪಾಧ್ಯಕ್ಷರಾಗಿ ಪಿ. ಜಯರಾಜ್ ಹೆಗ್ಡೆ ಆಯ್ಕೆ

Suddi Udaya

ಡಿ 19 :ಉಜಿರೆ  ಗ್ರಾ.ಪಂ.ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಕನ್ಯಾಡಿ ಶ್ರೀರಾಮ ಕ್ಷೇತ್ರಕ್ಕೆ ಉದ್ಯಮಿ ರವೀಂದ್ರ ಪೂಜಾರಿ ಆರ್ಲರಿಂದ 6 ಛತ್ರ ಛಾಮರ ಸಮರ್ಪಣೆ

Suddi Udaya
error: Content is protected !!