24.8 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಹೋಲಿ ರಿಡೀಮರ್ ಆಂ.ಮಾ. ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

ಬೆಳ್ತಂಗಡಿ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ನ.10 ಮತ್ತು 11ರಂದು ಶಾಲಾ ವಾರ್ಷಿಕ ಕ್ರೀಡಾಕೂಟವನ್ನು ನಡೆಸಲಾಯಿತು.

ಕಾರ್ಯಕ್ರಮದ ಮುಖ್ಯ ಅತಿಥಿ ಸೇಕ್ರೆಡ್ ಹಾರ್ಟ್ ಕಾಲೇಜು ಮಡಂತ್ಯಾರಿನ ದೈಹಿಕ ನಿರ್ದೇಶಕ ಪ್ರಕಾಶ್ ಡಿಸೋಜ ರವರು ಶಾಲಾ ಧ್ವಜಾರೋಹಣಗೈದು ವಿದ್ಯಾರ್ಥಿಗಳು ಕ್ರೀಡಾ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿ ರಾಷ್ಟ್ರ ಮಟ್ಟದಲ್ಲಿ ಮಿಂಚುವಂತಾಗಲಿ ಎಂದು ನುಡಿದು ಶುಭ ಹಾರೈಸಿದರು. ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಕ್ರೀಡಾ ಸಾಧನೆಗೈದ ವಿದ್ಯಾರ್ಥಿಗಳು ಕ್ರೀಡಾ ಜ್ಯೋತಿಯನ್ನು ಬೆಳಗಿಸಿದರು. ಶಾಲಾ ಸಂಚಾಲಕರಾದ ಅತೀ ವಂ ಫಾ ವಾಲ್ಟರ್ ಡಿಮೆಲ್ಲೋರವರು ವಿದ್ಯಾರ್ಥಿಗಳು ದೈಹಿಕವಾಗಿ ಸದೃಢರಾಗಿ ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸಿ ಎಂದು ನುಡಿದು ಶುಭ ಹಾರೈಸಿದರು. ಶಾಲಾ ಮುಖ್ಯೋಪಾಧ್ಯಾಯರಾದ ವಂ. ಫಾ| ಕ್ಲಿಫರ್ಡ್ ಪಿಂಟೋರವರು ಅತಿಥಿ ಪರಿಚಯ ಮಾಡಿದರು. ಕಾರ್ಯಕ್ರಮದಲ್ಲಿ ಚರ್ಚ್ ಪಾಲನಾ ಮಂಡಳಿಯ ಉಪಾಧ್ಯಕ್ಷ ವಾಲ್ಟರ್ ಮೋನಿಸ್, ಶಾಲಾ ಶಿಕ್ಷಕ ರಕ್ಷಕ ಸಂಘದ ಉಪಾಧ್ಯಕ್ಷೆ ಶ್ರೀಮತಿ ಸುಪ್ರಿಯಾ ಡಿಸೋಜ ಉಪಸ್ಥಿತರಿದ್ದರು.

ವಿದ್ಯಾರ್ಥಿಗಳಿಗೆ ಓಟದ ಸ್ಪರ್ಧೆ, ಕಬಡ್ಡಿ, ಹಗ್ಗ ಜಗ್ಗಾಟ, ಗುಂಡೆಸೆತ, ಚಕ್ರ ಎಸೆತ, ಎತ್ತರ ಜಿಗಿತ, ಉದ್ದ ಜಿಗಿತ ಇತ್ಯಾದಿ ಸ್ಪರ್ಧೆಗಳನ್ನು ಏರ್ಪಡಿಸಿ ಬಹುಮಾನಗಳನ್ನು ವಿತರಿಸಿ ಪ್ರೋತ್ಸಾಹಿಸಲಾಯಿತು. ವಿದ್ಯಾರ್ಥಿಗಳಾದ ಮೆಲ್ಸ್ಟನ್ ಡಿಸೋಜ ಸ್ವಾಗತಿಸಿ, ಲಹರಿ ವಂದಿಸಿದರು. ಲವಿಶಾ ಡಿಸೋಜ ಕಾರ್ಯಕ್ರಮ ನಿರೂಪಿಸಿದರು. ಶಾಲಾ ದೈಹಿಕ ಶಿಕ್ಷಣ ಶಿಕ್ಷಕರಾದ ಶರತ್ ಸಂತೋಷ್ ಪಿಂಟೋ ಕ್ರೀಡಾಕೂಟವನ್ನು ಆಯೋಜಿಸಿದರು. ಕ್ರೈಸ್ಟ್ ಅಕಾಡೆಮಿ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಸುಮಂತ್ ಬಿ. ಸಿ ಸಹಕರಿಸಿದರು.

Related posts

ಕಡಿರುದ್ಯಾವರ ಗ್ರಾ.ಪಂ.ನಲ್ಲಿ ಅರಣ್ಯ ಇಲಾಖೆಯ ವತಿಯಿಂದ ವನಮಹೋತ್ಸವ ಕಾರ್ಯಕ್ರಮ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಷ್ಟ್ರೀಯ ಜೂನಿಯರ್ ತ್ರೋಬಾಲ್ ಚಾಂಪಿಯನ್ ಶಿಪ್ ಗೆ ಆಯ್ಕೆ

Suddi Udaya

ಬೆಳ್ತಂಗಡಿ ಠಾಣೆಯ ಸರ್ಕಲ್ ಇನ್ಸ್ ಪೆಕ್ಟರ್ ಆಗಿ ನಾಗೇಶ್ ಕದ್ರಿ ನೇಮಕ

Suddi Udaya

ಟೀಮ್ ದೇವರಗುಡ್ಡೆ ವತಿಯಿಂದ ಮಕ್ಕಳ ದಿನಾಚರಣೆ ಪ್ರಯುಕ್ತ ಅಂಗನವಾಡಿಗೆ ಚೇರ್ ವಿತರಣೆ

Suddi Udaya

ಕಾಶಿಪಟ್ಣ ಗ್ರಾ.ಪಂ.ನಲ್ಲಿ ಸಂಜೀವಿನಿ ಒಕ್ಕೂಟದ ಮಾಸಿಕ ಸಭೆ

Suddi Udaya

ಮುಂಡಾಜೆ: ದಾಮೋದರ ಗೌಡ ನಿಧನ

Suddi Udaya
error: Content is protected !!