30.1 C
ಪುತ್ತೂರು, ಬೆಳ್ತಂಗಡಿ
May 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ಬಿಜೆಪಿ ಯುವಮೋರ್ಚಾದ ವತಿಯಿಂದ 4ನೇ ವರ್ಷದ ದೀಪಾವಳಿ ‘ದೋಸೆ ಹಬ್ಬ’ ಉದ್ಘಾಟನೆ

ಬೆಳ್ತಂಗಡಿ: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪ್ರತಿವರ್ಷ ಬಿಜೆಪಿ ಯುವಮೋರ್ಚಾದ ವತಿಯಿಂದ ನಡೆಯುವ 4ನೇ ವರ್ಷದ ದೀಪಾವಳಿ ದೋಸೆ ಹಬ್ಬವು ನ.13 ರಂದು ಬೆಳ್ತಂಗಡಿ ಬಸ್ ನಿಲ್ದಾಣ ಬಳಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಆರಿಕೋಡಿ ಚಾಮುಂಡೇಶ್ವರಿ ದೇವಸ್ಥಾನದ ಧರ್ಮದರ್ಶಿ ಹರೀಶ್ ಆರಿಕೋಡಿ ದೀಪ ಬೆಳಗಿಸಿ ಉದ್ಘಾಟಿಸಿದರು.

ಅಧ್ಯಕ್ಷತೆಯನ್ನು ಶಾಸಕ ಹರೀಶ್ ಪೂಂಜ ವಹಿಸಿದರು. ನಂತರ ದೋಸೆಯನ್ನು ಹೊಯ್ಯೂವ ಮೂಲಕ ಚಾಲನೆ ನೀಡಿದರು.

ವೇದಿಕೆಯಲ್ಲಿ ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್, ಕಿಯೋನಿಕ್ಸ್ ಮಾಜಿ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಬೆಳ್ತಂಗಡಿ ಬಿಜೆಪಿ ಮಂಡಲ ಅಧ್ಯಕ್ಷ ಜಯಂತ ಕೋಟ್ಯಾನ್, ಮಂಗಳೂರು ಮೇಯರ್ ಮಂಡಲದ ಪ್ರಭಾರಿ ಸುಧೀರ್ ಕಣ್ಣೂರು, ಮಂಡಲದ ಪ್ರಧಾನ ಕಾರ್ಯದರ್ಶಿ ಗಣೇಶ್ ಗೌಡ ನಾವೂರು, ಬಿಜೆಪಿ ಪ್ರದಾನ ಕಾರ್ಯದರ್ಶಿ ಶ್ರೀನಿವಾಸ ರಾವ್, ಯುವಮೋರ್ಚ್‌ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸೂರಜ್ ಜೈನ್, ಉಪಾಧ್ಯಕ್ಷ ಸುದರ್ಶನ್ ಬಜ, ಕಾರ್ಯದರ್ಶಿ ಯತೀಶ್ ಶೆಟ್ಟಿ, ಪಟ್ಟಣ ಪಂಚಾಯತ್ ಮಾಜಿ ಅಧ್ಯಕ್ಷೆ ರಜನಿ ಕುಡ್ವ, ಮಾಜಿ ಉಪಾಧ್ಯಕ್ಷ ಜಯಾನಂದ ಗೌಡ, ಬೆಳ್ತಂಗಡಿ ಎಲ್.ಡಿ ಬ್ಯಾಂಕ್ ಅಧ್ಯಕ್ಷ ಸೋಮನಾಥ ಬಂಗೇರ ವರ್ಪಾಳೆ, ಯುವ ಮೋರ್ಚಾ ಪ್ರಭಾರಿ ಸೀತಾರಾಮ ಬಿ.ಎಸ್. ಯುವ ಮೋರ್ಚಾ ತಾಲೂಕು ಅಧ್ಯಕ್ಷ ಯಶವಂತ ಬೆಳಾಲು, ಪ್ರಧಾನ ಕಾರ್ಯದರ್ಶಿ ವಿನೀತ್ ಕೋಟ್ಯಾನ್, ಉಮೇಶ್ ಕುಲಾಲ್ ಉಪಸ್ಥಿತರಿದ್ದರು.

ಯುವ ಮೋರ್ಚಾದ ಅಧ್ಯಕ್ಷ ಯಶವಂತ ಗೌಡ ಬೆಳಾಲು ಸ್ವಾಗತಿಸಿದರು.

Related posts

ಮೋಗೇರೋಡಿ ಕನ್ಸ್ಟ್ರಕ್ಷನ್ ನೆವದಿಂದ ನಾಳೆಯಿಂದ ಕಾಮಗಾರಿ ಆರಂಭ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಸನ್ ನಿಂದ ಹಿರಿಯ ಛಾಯಾಗ್ರಾಹಕ ಎನ್ ಎ ಗೋಪಾಲ್ ರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ಕೇಂದ್ರ ಜುಮ್ಮಾ ಮಸೀದಿಯಲ್ಲಿ ಈದುಲ್ – ಹದಾ ಬಕ್ರೀದ್ ಆಚರಣೆ

Suddi Udaya

ತಾಲೂಕಿನ ಹಲವಡೆ ಕಾಡಾನೆ ದಾಳಿ: ಸೂಕ್ತ ಕ್ರಮಕೈಗೊಳ್ಳುವಂತೆ ರಕ್ಷಿತ್ ಶಿವಾರಂ ರವರಿಂದ ಸಚಿವ ದಿನೇಶ್ ಗುಂಡೂರಾವ್ ರವರಿಗೆ ಮನವಿ

Suddi Udaya

ಪುಂಜಾಲಕಟ್ಟೆ ಬ್ರಹ್ಮ ಶ್ರೀ ನಾರಾಯಣ ಗುರು ವಸತಿ ಶಾಲೆಗೆ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ

Suddi Udaya

ಕಳಿಯ ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಮತಯಾಚನೆ

Suddi Udaya
error: Content is protected !!