April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಯುವವಾಹಿನಿಯಿಂದ ‘ತುಳುನಾಡ ತುಡರ ಪರ್ಬ ‘

ಬೆಳ್ತಂಗಡಿ : ಯುವವಾಹಿನಿ ಬೆಳ್ತಂಗಡಿ ಘಟಕದ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ತುಳುನಾಡ ತುಡರ ಪರ್ಬ ಕಾರ್ಯಕ್ರಮ ಬೆಳ್ತಂಗಡಿ ಶ್ರೀ ಗುರು ನಾರಾಯಣ ಸಭಾ ಭವನದಲ್ಲಿ ನ.12 ರಂದು ನಡೆಯಿತು.

ಘಟಕದ ಅಧ್ಯಕ್ಷ ಅಶ್ವತ್ಥ್ ಕುಮಾರ್ ಮಾತನಾಡಿ, ‘ ದೀಪಾವಳಿ ಪ್ರತಿ ಮನೆಯಲ್ಲೂ ಸಂಭ್ರಮ ಸಂತೋಷವನ್ನು ನೀಡುವ ಹಬ್ಬ. ಪಾರಂಪರಿಕ ಆಚರಣೆಯ ಜೊತೆಗೆ ನಮ್ಮೊಳಗಿನ ಅಜ್ಞಾನ ದೂರವಾಗಿ ಸುಜ್ಞಾನ ಬೆಳಗುವ ಹಬ್ಬವಾಗಲಿ’ ಎಂದು ಶುಭ ಹಾರೈಸಿದರು.

ಘಟಕದ ಗೌರವ ಸಲಹೆಗಾರ ರಮಾನಂದ ಸಾಲಿಯಾನ್ ಕಾರ್ಯಕ್ರಮ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಘಟಕದ ಸಲಹೆಗಾರ ವಿಠಲ್ ಸಿ ಪೂಜಾರಿ, ಉಪಾಧ್ಯಕ್ಷ ಸದಾಶಿವ ಊರ, ಕಾರ್ಯದರ್ಶಿ ಹರೀಶ್ ಕನ್ಯಾಡಿ, ಕೋಶಾಧಿಕಾರಿ ವಿಜಯ ಶಿರ್ಲಾಲು, ಮಾಜಿ ಅಧ್ಯಕ್ಷರಾದ ಪ್ರಶಾಂತ್ ಮಚ್ಚಿನ, ಹರೀಶ್ ಕನ್ಯಾಡಿ, ಕೊಲ್ಲಿ ಶ್ರೀ ದುರ್ಗಾ ದೇವಿ ಭಜನಾ ಮಂಡಳಿ ಮೇಲ್ವಿಚಾರಕಿ ಪ್ರಮೀಳಾ ಉಮೇಶ್ ಇದ್ದರು.

ಶ್ರೀ ದುರ್ಗಾ ದೇವಿ ಭಜನಾ ಮಂಡಳಿ ಕೊಲ್ಲಿ ಇವರಿಂದ ಭಜನಾ ಕಾರ್ಯಕ್ರಮ ನಡೆಯಿತು.

ಅನೀಸ್ ಅಮೀನ್ ವೇಣೂರು ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Related posts

ಜೆಸಿಐ ವಲಯ-15ರ ಅಭಿವೃದ್ಧಿ ಮತ್ತು ಬೆಳವಣಿಗೆ ಹಾಗೂ ವ್ಯವಹಾರ ಸಮ್ಮೇಳನದಲ್ಲಿ ಸಂತೋಷ್ ಪಿ ಕೋಟ್ಯಾನ್ ಬಳಂಜ ರವರಿಗೆ ಪ್ರತಿಷ್ಠಿತ “ಸಾಧನಾಶ್ರೀ ಪುರಸ್ಕಾರ”

Suddi Udaya

ಸಂಪೂರ್ಣ ಹಾಳಾದ ಧರ್ಮಸ್ಥಳ-ಮುಳಿಕ್ಕಾರು ರಸ್ತೆ: ಶಾಲಾ ಮಕ್ಕಳು ಸಂಚರಿಸಲು ಪರದಾಡುವ ಸ್ಥಿತಿ ನಿರ್ಮಾಣ, ಅಲ್ಲಲ್ಲಿ ಹೂತು ಹೋಗುವ ವಾಹನಗಳು

Suddi Udaya

ಸುಲ್ಕೇರಿಮೊಗ್ರು: ವರಮಹಾಲಕ್ಷ್ಮಿ ಪೂಜಾ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ವಾಣಿ ಕಾಲೇಜಿನಲ್ಲಿ ಪೋಷಕರ ಸಭೆ

Suddi Udaya

ಕಡಿರುದ್ಯಾವರ ಕಾನರ್ಪ ಪೆಲತ್ತಡಿ ನಿವಾಸಿ ನೀಲಯ್ಯ ಗೌಡ ನಿಧನ

Suddi Udaya

ಕಾಂಗ್ರೆಸ್ ಪಕ್ಷದಿಂದ ಸರ್ಕಾರದ ಗ್ಯಾರಂಟಿ ಯೋಜನೆಗಳ ಸಮರ್ಪಕ ಜ್ಯಾರಿಗಾಗಿ ಬ್ಲಾಕ್, ಗ್ರಾಮ ಮಟ್ಟದಲ್ಲಿ ತರಬೇತಿ: ಇಂದಿರಾ ಸೇವಾ ಸೆಂಟರ್ ಗಳನ್ನು ತೆರೆದು ಫಲಾನುಭವಿಗಳಿಗೆ ಅರ್ಜಿ ನೊಂದಣಿ

Suddi Udaya
error: Content is protected !!