September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ವಿಮೆನ್ ಇಂಡಿಯಾ ಮೂವ್ಮೆಂಟ್ ಘಟಕ ವತಿಯಿಂದ ದಯಾ ಶಾಲೆಯ ವಿಶೇಷ ಚೇತನ ಮಕ್ಕಳೊಂದಿಗೆ ಮಕ್ಕಳ ದಿನಾಚರಣೆ

ಬೆಳ್ತಂಗಡಿ: ವಿಮೆನ್ ಇಂಡಿಯಾ ಮೂವ್ಮೆಂಟ್ ಬೆಳ್ತಂಗಡಿ ವತಿಯಿಂದ ಮಕ್ಕಳ ದಿನಾಚರಣೆಯನ್ನು ಲಾಯಿಲ ದಯಾ ವಿಶೇಷ ಚೇತನ ಶಾಲೆಯ ಮಕ್ಕಳೊಂದಿಗೆ ವಿಶೇಷ ರೀತಿಯಲ್ಲಿ ಮಕ್ಕಳ ದಿನಾಚರಣೆಯನ್ನು ಆಚರಿಸಿದರು.

ವಿಶೇಷ ಚೇತನ ಮಕ್ಕಳಿಗೆ ಸಿಹಿತಿಂಡಿ, ಆಟಿಕೆಗಳು ಆಹಾರ ಕಿಟ್ ನ್ನು ನೀಡಿ ಹಾಗೂ ಮಕ್ಕಳೊಂದಿಗೆ ಸಮಯ ಕಳೆದು ವಿಶಿಷ್ಟ ರೀತಿಯಲ್ಲಿ ಮಕ್ಕಳ ದಿನಾಚರಣೆಯನ್ನು ಆಚರಿಸಿದರು. ಈ ಸಂದರ್ಭದಲ್ಲಿ ದಯಾ ವಿಶೇಷ ಶಾಲೆಯ ನಿರ್ದೇಶಕ ಫಾ.ವಿನೋದ್, ಮುಖ್ಯ ಶಿಕ್ಷಕಿಯಾದ ಶ್ರೀಮತಿ ದಿವ್ಯಾ ಹಾಗೂ ದಯಾ ಶಾಲೆಯ ಶಿಕ್ಷಕರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.


 ಈ ಕಾರ್ಯಕ್ರಮದಲ್ಲಿ ವಿಮೆನ್ ಇಂಡಿಯಾ ಮೂವ್ಮೆಂಟ್ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಅಧ್ಯಕ್ಷೆ  ಶಮಾ ಆಲಿ ಉಜಿರೆ, ಉಪಾಧ್ಯಕ್ಷರಾದ ತಸ್ಲೀಮಾ ನವಾಝ್, ಕಾರ್ಯದರ್ಶಿ ಅಝ್ವಿನಾ ರಹೀಂ, ಕೋಶಾಧಿಕಾರಿ ಹಸೀನಾ ಬೆಳ್ತಂಗಡಿ, ಸಮಿತಿ ಸದಸ್ಯರಾದ ಅಡ್ವೋಕೇಟ್ ಅಸ್ಮಾ, ಸೌದಾ ಬಶೀರ್, ಮಿಸ್ರಿಯಾ, ಜೈನಾಬ್ ಉಸ್ಮಾನ್ ಭಾಗವಹಿಸಿದ್ದರು.

Related posts

ತಾಲೂಕಿನ ಹಲವು ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಸ್ಕೂಲ್ಆಗಿ ಉನ್ನತೀಕರಿಸುವಂತೆ ಶಾಸಕ ಹರೀಶ್ ಪೂಂಜರಿಂದ ಮನವಿ

Suddi Udaya

ಜ.29 (ಇಂದು): ಬದ್ಯಾರಿನಲ್ಲಿ “ಹಿಬರೋಡಿ ಯಕ್ಷೋತ್ಸವ”‌ -“ಸಹಸ್ರ ಕವಚ ಮೋಕ್ಷ” ಯಕ್ಷಗಾನ ಬಯಲಾಟ”

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಸರಕಾರ ಹಾಗೂ ವಿವಿಧ ಸಂಘಗಳ ಉದ್ಘಾಟನೆ

Suddi Udaya

ವಾಣಿ ಕಾಲೇಜು: ಸಮಾನ ನಾಗರಿಕ ಸಂಹಿತೆ ಮಾಹಿತಿ ಉಪನ್ಯಾಸ

Suddi Udaya

ಬೆಳ್ತಂಗಡಿ: ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಉಮೈರಾ ಬಾನು ರವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಘನತೆಗೆ ದಕ್ಕೆ ತರುವಂತೆ ಚಿತ್ರಿಸಿ ಹರಿಯ ಬಿಟ್ಟವರ ಮೇಲೆ ಪೋಲಿಸ್ ದೂರು

Suddi Udaya

ಉಜರೆ: ರತ್ನಮ್ಮ ನಾಯಕ್ ನಿಧನ

Suddi Udaya
error: Content is protected !!