23.4 C
ಪುತ್ತೂರು, ಬೆಳ್ತಂಗಡಿ
April 5, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜಿಲ್ಲಾ ಮಟ್ಟದ ಕ್ರೀಡಾಕೂಟ: ಬಜಿರೆ ಶಾಲಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

ಬಜಿರೆ: ಜಿಲ್ಲಾ ಮಟ್ಟದಲ್ಲಿ ನಡೆದ ವಿಶೇಷ ಅಗತ್ಯವುಳ್ಳ ಮಕ್ಕಳ ಕ್ರೀಡಾಕೂಟದಲ್ಲಿ ಬಜಿರೆ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಾದ 7ನೇ ತರಗತಿಯ ಸಾಕ್ಷಿತಾ 50 ಮೀ. ಓಟದಲ್ಲಿ ಪ್ರಥಮ, ಗುಂಡು ಎಸೆತ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

6ನೇ ತರಗತಿಯ ಪೃಥ್ವಿ ಭಂಡಾರಿ ಜಾವಲಿನ್ ಪ್ರಥಮ, ಗುಂಡು ಎಸೆತ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. 6ನೇ ತರಗತಿಯ ಸಿಂಚನ್ ಎಸ್. ಗುಂಡು ಎಸೆತದಲ್ಲಿ ತೃತೀಯ ಸ್ಥಾನ ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ. ಈ ವಿದ್ಯಾರ್ಥಿಗಳನ್ನು ಶಾಲಾ ಮುಖ್ಯ ಶಿಕ್ಷಕಿ ಕಮಲಾಜಿ ಎಸ್. ಜೈನ್ ಹಾಗೂ ದೈಹಿಕ ಶಿಕ್ಷಣ ಶಿಕ್ಷಕಿ ದೀಪಾವತಿ ಹಾಗೂ ಎಲ್ಲಾ ಸಹಶಿಕ್ಷಕ ವೃಂದದವರು ವಿದ್ಯಾರ್ಥಿಗಳಿಗೆ ಸಹಕರಿಸಿದ್ದು, ಈ ಸಂದರ್ಭ ಶುಭಹಾರೈಸಿದರು.

Related posts

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಪೋಷಕ ಮತ್ತು ಶಿಕ್ಷಕ ಸಭೆ

Suddi Udaya

ಉಜಿರೆಯಲ್ಲಿ ಲೋಕಕಲ್ಯಾಣಾರ್ಥ “ಶ್ರೀ ವಿಷ್ಣು ಯಾಗ”   

Suddi Udaya

ವಾಣಿ ಶಿಕ್ಷಣ ಸಂಸ್ಥೆಯ ಮುಂಭಾಗದಲ್ಲಿ ಅತಿ ಶೀಘ್ರದಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸಲು ಇಂಜಿನಿಯರ್ ಗಳಿಗೆ ಜಯನಂದ ಗೌಡ ಮನವಿ

Suddi Udaya

ಇಂದಬೆಟ್ಟು: ರಬ್ಬರ್ ತೋಟಕ್ಕೆ ತಗುಲಿದ ಬೆಂಕಿ

Suddi Udaya

ಉಜಿರೆ ಆಟೋ ಚಾಲಕರ ಮಹಾಸಭೆ

Suddi Udaya

ಧರ್ಮಸ್ಥಳ : ಸರ್ಕಾರಿ ಆಸ್ಪತ್ರೆಗೆ ಔಷಧಿ ಕೊಡುಗೆ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ