25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಯ್ಯೂರು ಪಂಚದುರ್ಗ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ

ಕೊಯ್ಯೂರು ಪಂಚದುರ್ಗ ಸಂಜೀವಿನಿ ಮಹಿಳಾ ಒಕ್ಕೂಟ ಇದರ ಒಕ್ಕೂಟದ ಮಹಾಸಭೆ ಹಿರಿಯ ಪ್ರಾಥಮಿಕ ಶಾಲೆ ಕೊಯ್ಯುರು ಇಲ್ಲಿಯ ಸಭಾಭವನದಲ್ಲಿ ಒಕ್ಕೂಟದ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ನ.15 ರಂದು ನಡೆಯಿತು.

ಮಹಾಸಭೆಯಲ್ಲಿ ಒಕ್ಕೂಟದ ಅಧ್ಯಕ್ಷರು, ಉಪಾಧ್ಯಕ್ಷರು, ಕಾರ್ಯದರ್ಶಿ, ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕರು (ಬ್ಲಾಕ್ ಮ್ಯಾನೇಜರ್ ),ವಲಯ ಮೇಲ್ವಿಚಾರಕರು, ಪಂಚಾಯತ್ ಅಧ್ಯಕ್ಷರು, ಪಂಚಾಯತ್ ಉಪಾಧ್ಯಕ್ಷರು, ಒಕ್ಕೂಟದ ಪದಾಧಿಕಾರಿಗಳ ಉಪಸ್ಥಿತಿಯಲ್ಲಿ ದೀಪ ಬೆಳಗಿಸುದರ ಮೂಲಕ ಮಹಾಸಭೆಯನ್ನು ಪ್ರಾರಂಭಿಸಲಾಯಿತು.

ತಾಲೂಕು ಮ್ಯಾನೇಜರ್ ನಿತೇಶ್ ಒಕ್ಕೂಟದ ನಿಯಮ ನಿಬOಧನೆಗಳು, ಕೃಷಿಯೇತರ ಚಟುವಟಿಕೆಗಳ ಬಗ್ಗೆ ಸಮಗ್ರವಾದ ಮಾಹಿತಿಯನ್ನು ನೀಡಿದರು. ವಲಯ ಮೇಲ್ವಿಚಾರಕರಾದ ಜಯಾನಂದ ಒಕ್ಕೂಟದ ನೂತನ ಪದಾಧಿಕಾರಿಗಳಿಗೆ ಪದಗ್ರಹಣ ಕಾರ್ಯಕ್ರಮ ಹಾಗೂ ಒಕ್ಕೂಟದ ನಿಯಮ ಹಾಗೂ ಕಾರ್ಯವೈಖರಿ ಬಗ್ಗೆ ತಿಸಿದರು.

KSRLPS ಬೆಳ್ತಂಗಡಿಯ NRLM ನ MIS ಯಲ್ಲಿ ಉತ್ತಮ ಸಾಧನೆ ಮಾಡಿ ರಾಜ್ಯಮಟ್ಟದಲ್ಲಿ ಪ್ರಶಸ್ತಿಯನ್ನು ಪಡೆದಿರುವ ನಿತೇಶ್ ರವರನ್ನು ಸನ್ಮಾನಿಸಲಾಯಿತು. ಹಾಗೂ ಮಾಜಿ ಎಮ್.ಬಿ.ಕೆ ಧರ್ಮವತಿ ಇವರನ್ನು ಸನ್ಮಾನಿಸಲಾಯಿತು. ಬಿಆರ್ ಪಿ ವೀಣಾ ಹಾಜರಿದ್ದರು. ಒಕ್ಕೂಟದ ಹೊಸ ಅಧ್ಯಕ್ಷ , ಕಾರ್ಯದರ್ಶಿ , ಕೋಶಾಧಿಕಾರಿ ಆಯ್ಕೆ ಮಾಡಲಾಯಿತು.

ಸಂಘದ ಸದಸ್ಯೆ ಶ್ರೀಮತಿ ಗೀತಾರವರು ಕಾರ್ಯಕ್ರಮ ನಿರೂಪಿಸಿ, ಒಕ್ಕೂಟದ ಪದಾಧಿಕಾರಿ ಸುನಂದಾರವರು ಸ್ವಾಗತಿಸಿದರು. ಕಾರ್ಯದರ್ಶಿ ರಾಜೀವಿಯವರು ವರದಿ ಮತ್ತು ಎಮ್.ಬಿ.ಕೆ ಶುಭಲಕ್ಷ್ಮಿ ಜಮಾ ಖರ್ಚು ಮಂಡನೆ ಮಾಡಿದರು. ಈ ಸಭೆಯಲ್ಲಿ ಸಂಜೀವಿನಿ ಸಂಘದ ಸದಸ್ಯರು, ಸ್ತ್ರೀ ಶಕ್ತಿ ಸದಸ್ಯರು, ಎಮ್.ಬಿಕೆ, ಎಲ್.ಸಿಆರ್ ಪಿ, ಕೃಷಿ ಸಖಿ, ಪಶು ಸಖಿಯರು ಹಾಜರಿದ್ದರು. ಒಕ್ಕೂಟದ ಪದಾಧಿಕಾರಿ ಪುಷ್ಪಲತಾ ಧನ್ಯವಾದವಿತ್ತರು.

Related posts

ಉಜಿರೆ ಉದ್ಯಮಿ, ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ರವರಿಗೆ ಸ್ವಸ್ತಿ ಸಿರಿ ರಾಜ್ಯ ಪ್ರಶಸ್ತಿ

Suddi Udaya

ಹೊಸಂಗಡಿ ಗ್ರಾ.ಪಂ. ಮತ್ತು ಅರಣ್ಯ ಇಲಾಖೆಯ ವತಿಯಿಂದ ವನಮಹೋತ್ಸವ

Suddi Udaya

ಧರ್ಮಸ್ಥಳ : ನಡುಗುಡ್ಡೆ ನಿವಾಸಿ ಶೀನಪ್ಪ ಗೌಡ ನಿಧನ

Suddi Udaya

ಓಡಿಲ್ನಾಳ 149 ಬೂತ್ ಸಮಿತಿ ಅಧ್ಯಕ್ಷರಾಗಿ ಉಮೇಶ್ ಕುಲಾಲ್, ಕಾರ್ಯದರ್ಶಿಯಾಗಿ ಸಂತೋಷ್ ಆರ್ ಗೌಡ ಆಯ್ಕೆ

Suddi Udaya

ಕೊಕ್ಕಡ: ತೋಟದಲ್ಲಿ ಕಟ್ಟಿ ಹಾಕಿದ್ದ ದನ ಕಳವು: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ವಾಲಿಬಾಲ್ ಪಂದ್ಯಾಟ: ಕೊಯ್ಯೂರು ಸರಕಾರಿ ಪ್ರೌಢ ಶಾಲೆಯ ಹುಡುಗರ ತಂಡ ಪ್ರಥಮ ಸ್ಥಾನ

Suddi Udaya
error: Content is protected !!