24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ

ಬೆಳ್ತಂಗಡಿ: ಸ.ಉ.ಹಿ.ಪ್ರಾ. ಶಾಲೆ ಕುವೆಟ್ಟು ಇಲ್ಲಿ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು.
ಶಾಲಾ ಮುಖ್ಯಮಂತ್ರಿ ಆಯಿಷತ್ ಶಿಫಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ನೆಹರೂರವರು ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಲಾಯಿತು.

ಮುಖ್ಯ ಅತಿಥಿಗಳಾಗಿ ಕುವೆಟ್ಟು ಗ್ರಾ ಪಂ ಸದಸ್ಯರುಗಳಾದ ಸುಮಂಗಳ ಪ್ರಭು, ಶಾಲಿನಿ, ಅಮೀನಾ, ಎಸ್. ಡಿ. ಎಂ. ಸಿ. ಅಧ್ಯಕ್ಷ ಸಿರಾಜ್ ಚಿಲಿಂಬಿ, ಎಸ್. ಡಿ. ಎಂ. ಸಿ. ಸದಸ್ಯರು, ಸಿ ಆರ್ ಪಿ ರಾಜೇಶ್ ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಪ್ರಭಾಕರ ಶೆಟ್ಟಿ ಉಪ್ಪಡ್ಕ, ಮದ್ದಡ್ಕ ಎಸ್ ಕೆ ಎಸ್ ಎಸ್ ಎಫ್ ನ ಅಧ್ಯಕ್ಷ ಇಲ್ಯಾಸ್ ಚಿಲಿಂಬಿ, ಉಪಾಧ್ಯಕ್ಷ ಮನ್ಸೂರ್ ಪಾದೆ, ಕಾರ್ಯದರ್ಶಿ ನೌಷದ್ ಮತ್ತಿತರರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಎಸ್ ಕೆ ಎಸ್ ಎಸ್ ಎಫ್ ನವರು ಬಹುಮಾನ ನೀಡಿ ಗೌರವಿಸಿದರು. ಅಲ್ಲದೆ ತಂದೆ ಅಥವಾ ತಾಯಿ ಇಲ್ಲದ 12 ಮಂದಿ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ಹಾಗೂ ಕಿಟ್ ನೀಡಿ ಪ್ರೋತ್ಸಾಹಿಸಲಾಯಿತು. ಶಾಲಾ ಮುಖ್ಯೋಪಾಧ್ಯಾಯ ಭಾಸ್ಕರ ಸ್ವಾಗತಿಸಿ, ಶಿಕ್ಷಕಿ ಧವಲಾ ಕಾರ್ಯಕ್ರಮ ನಿರೂಪಿಸಿದರು.

Related posts

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಬೃಹತ್ ಪ್ರತಿಭಟನೆಗೆ ಬೆಳ್ತಂಗಡಿ ರೈತ ಮೋರ್ಚಾ ಬೆಂಬಲ

Suddi Udaya

ವಾಣಿ ಆಂ.ಮಾ. ಶಾಲೆಯಲ್ಲಿ ನೂತನ ಕಬ್ & ಬುಲ್ ಬುಲ್ ದಳಗಳ ಉದ್ಘಾಟನಾ ಸಮಾರಂಭ

Suddi Udaya

ಹೊಸಂಗಡಿಯ ಪುಲಾಬೆಯಲ್ಲಿ ಬದ್ರಿಯಾ ಮಸ್ಜಿದ್ ಮತ್ತು ಮದರಸ ಉದ್ಘಾಟನೆ

Suddi Udaya

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕ ಸಂಘದಿಂದ ಸಹಾಯಧನ ಹಸ್ತಾಂತರ

Suddi Udaya

ಇಂದು(ಜ.11) ಪೆರ್ಲ -ಬೈಪಾಡಿ ಬ್ರಹ್ಮಕಲಶೋತ್ಸವಕ್ಕೆ ಧರ್ಮಸ್ಥಳ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಭೇಟಿ

Suddi Udaya

ಮಲೆಬೆಟ್ಟು ಹಾ.ಉ.ಸಂ. ನಿರ್ದೇಶಕ ಪ್ರವೀಣ್ ಪೂಜಾರಿ ಬಿಜೆಪಿ ಸೇರ್ಪಡೆ

Suddi Udaya
error: Content is protected !!