ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಪುಂಜಾಲಕಟ್ಟೆ: ಸರಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಭಾರತೀಯ ಯುವ ರೆಡ್ ಕ್ರಾಸ್ ಮತ್ತು ರೋವರ್ಸ್ ರೇಂಜರ್ಸ್ ಸಹಯೋಗದಿಂದ “70ನೇ ಅಖಿಲ ಭಾರತ ಸಹಕಾರ ಸಪ್ತಾಹ 2023” ಕಾರ್ಯಕ್ರಮ

ಪುಂಜಾಲಕಟ್ಟೆ : ಸರಕಾರಿ ಪ್ರಥಮ ದರ್ಜೆ ಕಾಲೇಜು ಪುಂಜಾಲಕಟ್ಟೆ , ರಾಷ್ಟ್ರೀಯ ಸೇವಾ ಯೋಜನೆ ಘಟಕ 1&2 , ಭಾರತೀಯ ಯುವ ರೆಡ್ ಕ್ರಾಸ್ ಮತ್ತು ರೋವರ್ಸ್ ರೇಂಜರ್ಸ್ ಇದರ ಸಹಯೋಗದಿಂದ “70ನೇ ಅಖಿಲ ಭಾರತ ಸಹಕಾರ ಸಪ್ತಾಹ 2023” ಇದರ ಅಂಗವಾಗಿ ಪುಂಜಾಲಕಟ್ಟೆ ಪಿಲಾತಬೆಟ್ಟು ಸಹಕಾರಿ ಸಂಘ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.


ಧ್ವಜಾರೋಹಣ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಪ್ರತಿ ವರ್ಷ ಭಾರತದಾದ್ಯಂತ ರಾಷ್ಟ್ರೀಯ ಸಹಕಾರ ಯೂನಿಯನ್, ನವದೆಹಲಿ ಇವರ ಮಾರ್ಗದರ್ಶನದಲ್ಲಿ ನ.14ರಿಂದ 20ರವೆಗೆ ಅಖಿಲ ಭಾರತ ಸಹಕಾರ ಸಪ್ತಾಹ ಆಚರಣೆ ನಡೆದು ಬಂದಿದೆ. ನವೆಂಬರ್ 14 ಜವಾಹರ್ ಲಾಲ್ ನೆಹರೂ ಅವರ ಹುಟ್ಟು ಹಬ್ಬವಾಗಿದ್ದು, ನೆಹರೂ ಅವರು ಸಹಕಾರ ಚಳುವಳಿಯ ಬೆಳವಣಿಗೆಗೆ ನೀಡಿದ ಪ್ರೋತ್ಸಾಹಕ್ಕಾಗಿ ಅವರಿಗೆ ಕೃತಜ್ಞತೆ ಸಲ್ಲಿಸುವ ಸಂಕೇತವಾಗಿ ಅವರ ಹುಟ್ಟು ಹಬ್ಬದಂದು ಸಪ್ತಾಹದ ಉದ್ಘಾಟನೆ ಮಾಡಲಾಯಿತು.

ರಾಷ್ಟ್ರ ರಾಜ್ಯ ಮಟ್ಟದಲ್ಲಿ ಈ ವಿಷಯಗಳ ಕುರಿತು ವಿಚಾರಗೋಷ್ಠಿಗಳು , ಚಿಂತನ ಮಂಥನ ಕಾರ್ಯಕ್ರಮಗಳನ್ನು ಆಯೋಜಿಸಿ ಯುವಜನರಲ್ಲಿ ಸಹಕಾರದ ಕುರಿತು ಜಾಗೃತಿ ಮೂಡಿಸುವುದು ಈ ಕಾರ್ಯಕ್ರಮದ ಉದ್ದೇಶ. ಈ ಕಾರ್ಯಕ್ರಮದಲ್ಲಿ ಸಹಕಾರಿ ಸಂಘದ ಮಹತ್ವ , ಒದಗಿಸಿ ಕೊಡುವ ಸೌಲಭ್ಯ ಹಾಗು ತತ್ವಗಳ ಕುರಿತಾಗಿ ಧರಣೇಂದ್ರ ಜೈನ್ ಇವರು ವಿದ್ಯಾರ್ಥಿಗಳಿಗೆ ತಿಳಿಸಿದರು.


ಇತರೆ ಶಾಖೆಯ ಅಧ್ಯಕ್ಷರುಗಳಿಗೆ ಹಾಗೂ ಹೈನುಗಾರಿಕೆ ಮತ್ತು ಕೃಷಿಯಲ್ಲಿ ಉತ್ತಮ ಫಲಿತಾಂಶ ಹೊಂದಿದ ಕೃಷಿಕರಿಗೆ ಸನ್ಮಾನಿಸಿ ಗೌರವಿಸಲಾಯಿತು. ಜಿ.ಪಂ ಮಾಜಿ ಉಪಾಧ್ಯಕ್ಷರಾದ ತುಂಗಪ್ಪ ಬಂಗೇರ ಉಪಸ್ಥಿತರಿದ್ದರು. ಸಹಕಾರಿ ಸಂಘದ ಕಾರ್ಯದರ್ಶಿ ಸ್ವಾಗತಿಸಿದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಾಜಿ ಸಚಿವ ಹೆಚ್.ಡಿ ರೇವಣ್ಣ ಭೇಟಿ: ದೇವರಿಗೆ ವಿಶೇಷ ಪೂಜೆ ಸಲ್ಲಿಕೆ

Suddi Udaya

ಕೊಯ್ಯೂರು ಸರಕಾರಿ ಶಾಲೆಯಲ್ಲಿ ಯಕ್ಷ ನಾಟ್ಯ ತರಬೇತಿ ಉದ್ಘಾಟನೆ

Suddi Udaya

ಬಳಂಜ : 90 ವರ್ಷದ ವೆಂಕಮ್ಮ ರವರಿಂದ ಮತ ಚಲಾವಣೆ

Suddi Udaya

ಬೆಳ್ತಂಗಡಿ ಮಹಿಳಾ ವೃಂದದಿಂದ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಮೇಲಂತಬೆಟ್ಟು ಗ್ರಾ.ಪಂ.ನಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೆಳ್ತಂಗಡಿ: ತಾಲೂಕು ಆಡಳಿತ ಸೌಧದಲ್ಲಿ ಸವಿತಾ ಮಹರ್ಷಿ ಜಯಂತಿ ಆಚರಣೆ

Suddi Udaya
error: Content is protected !!