April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಡಿಕೆಡಿಆರ್‌ಎಸ್ ಸಂಸ್ಥೆಯಲ್ಲಿ ಕ್ಲಸ್ಟರ್ ಮಟ್ಟದ ಸಾಂವಿಧಾನಿಕ ಹಕ್ಕುಗಳ ಬಗ್ಗೆ ಮಾಹಿತಿ ಕಾರ್ಯಾಗಾರ

ಬೆಳ್ತಂಗಡಿ: ಕರ್ನಾಟಕ ಪ್ರಾಂತೀಯ ಸಮಾಜ ಸೇವಾ ಸಂಸ್ಥೆ ಬೆಂಗಳೂರು ಮತ್ತು ದಕ್ಷಿಣ ಕನ್ನಡ ರೂರಲ್ ಡೆವಲಪ್ಮೆಂಟ್ ಸೊಸೈಟಿ ಬೆಳ್ತಂಗಡಿ ಇವರ ಸಹಯೋಗದೊಂದಿಗೆ ಕ್ಲಸ್ಟರ್ ಮಟ್ಟದ ಸಾಂವಿಧಾನಿಕ ಹಕ್ಕುಗಳ ಬಗ್ಗೆ ತರಬೇತಿ ಕಾರ್ಯಕ್ರಮವನ್ನು ನ.16 ಮತ್ತು 17 ರಂದು ಡಿ. ಕೆ. ಆರ್. ಡಿ. ಎಸ್ ಸಂಸ್ಥೆಯಲ್ಲಿ ಆಯೋಜಿಸಲಾಗಿತ್ತು.

ಕಾರ್ಯಕ್ರಮದ ಉದ್ಘಾಟನೆಯನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖಾ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರಿಯಾ ಆಗ್ನೆಸ್ ಚಾಕೊ ಇವರು ನೆರವೇರಿಸಿ ಶುಭ ಹಾರೈಸಿದರು.
ಅಥಿತಿಗಳಾಗಿ ಕ್ರಾಸ್ ಸಂಸ್ಥೆಯ ರಾಜ್ಯ ಸಂಯೋಜಕಿ ಸಿಸ್ಟರ್ ನ್ಯಾನ್ಸಿ ಲೋಬೊ ಹಾಗೂ ವಂದನೀಯ ಫಾದರ್ ತೋಮಸ್ ಪುಲ್ಲಾಟ್ ರವರು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಸಂಪನ್ಮೂಲ ವ್ಯಕ್ತಿಯಾಗಿ ವಂದನೀಯ ಫಾದರ್ ಡಾl ಸಲೀನ್ ಜೋಸೆಫ್ ರವರು ಸಾಂವಿಧಾನಿಕ ಹಕ್ಕುಗಳ ಬಗ್ಗೆ ತರಬೇತಿ ನೀಡಿದರು.
ಡಿ.ಕೆ.ಆರ್. ಡಿ.ಎಸ್ ಸಂಸ್ಥೆಯ ನಿರ್ದೇಶಕ ವಂದನೀಯ ಫಾದರ್ ಬಿನೋಯಿ ಎ. ಜೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕರ್ತ ಮಾರ್ಕ್ ಡಿ ಸೋಜರವರು ಸ್ವಾಗತಿಸಿದರು. ಸುಶೀಲಾ ರವರು ವಂದಿಸಿದರು. ಯೋಜನಾ ಸಂಯೋಜಕಿ ಸಿಸಿಲ್ಯಾ ತಾವ್ರೋರವರು ಕಾರ್ಯಕ್ರಮ ನಿರೂಪಿಸಿದರು. ಡಿ.ಕೆ. ಆರ್. ಡಿ.ಎಸ್, ಸಿ. ಒ. ಡಿ.ಪಿ, ಕಿಡ್ಸ್ ಹಾಗೂ ಸಂಪದ ಸಂಸ್ಥೆಯ ಸಂಯೋಜಕರು. ಕಾರ್ಯಕರ್ತರು ಹಾಗೂ ಒಕ್ಕೂಟದ ಪ್ರತಿನಿಧಿಗಳು ಸೇರಿದಂತೆ 44 ಮಂದಿ ಭಾಗಹಿಸಿದ್ದರು.

Related posts

ಪಡಂಗಡಿ ಸಹಕಾರ ಸಂಘದಲ್ಲಿ ವಿಶ್ವ ಯೋಗ ದಿನಾಚರಣೆ, ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಇಂದಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ವಿಶೇಷ ಗ್ರಾಮ ಸಭೆ

Suddi Udaya

ಶಿಶಿಲ: ನವರಾತ್ರಿ ಪ್ರಯುಕ್ತ ಕುಣಿತ ಭಜನಾ ಸಪ್ತಾಹ ಶುಭಾರಂಭ

Suddi Udaya

ಬೆಳ್ತಂಗಡಿ ಶ್ರೀ ಸೋಮನಾಥೇಶ್ವರ ಬಯಲಾಟ ಸೇವಾ ಸಮಿತಿ

Suddi Udaya

ಧರ್ಮಸ್ಥಳ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಗ ಶಿಬಿರ ಉದ್ಘಾಟನೆ

Suddi Udaya

ಕಳಿಯ ಗ್ರಾ.ಪಂ. ಆಡಳಿತ ಮಂಡಳಿಯಿಂದ ಜಿಲ್ಲಾಧಿಕಾರಿ ಭೇಟಿ, ಪಂಚಾಯತ್ ವ್ಯಾಪ್ತಿಯಲ್ಲಿ ಜಾಗ ಗುರುತಿಸುವಿಕೆಗಾಗಿ ಮನವಿ ಸಲ್ಲಿಕೆ

Suddi Udaya
error: Content is protected !!