
ವೇಣೂರು:ಸುಂಮಗಲಿ ಶ್ರೀ ಸೌಭಾಗ್ಯ ಸನಾತನ ಹಿಂದು ಧರ್ಮದ ಹೆಣ್ಣು ಮಕ್ಕಳ ಭಾಗ್ಯೋದಯದ ಬೆಳಕು ಮೂಗುತಿ ಧಾರಣೆ ಆಗದ ತಾಲ್ಲೂಕಿನ 9 ರಿಂದ 19 ವರ್ಷದ ಹೆಣ್ಣು ಮಕ್ಕಳಿಗೆ ಉಚಿತ ಚಿನ್ನದ ಮೂಗುತಿ ಧಾರಣ ಕಾರ್ಯಕ್ರಮವು ವೇಣೂರು ಶ್ರೀ ಮಹಾಲೀಂಗೇಶ್ವರ ದೇವಸ್ಥಾನದಲ್ಲಿ ಶ್ರೀ ಸಾಯಿ ಈಶ್ವರ್ ಗುರೂಜಿಯವರ ದಿವ್ಯ ಸಂಕಲ್ಪದಂತೆ ನಡೆಯಿತು.ಬೆಳ್ತಂಗಡಿ ತಾಲೂಕಿನ ಇತಿಹಾಸದಲ್ಲಿ ಪ್ರಥಮ ಬಾರಿಗೆ 300 ಹೆಣ್ಣು ಮಕ್ಕಳಿಗೆ ಉಚಿತ ಚಿನ್ನದ ಮೂಗುತಿ ಧಾರಣೆ ನಡೆಯಿತು.ತಾಲೂಕಿನ ವಿವಿಧ ಕಡೆಯಿಂದ 9 ರಿಂದ 19 ವರ್ಷದೊಳಗಿನ ಹೆಣ್ಣು ಮಕ್ಕಳು ಆಗಮಿಸಿ ಮೂಗುತಿ ಧಾರಣೆಗೆ ಸಹಕರಿಸಿದರು.ದ.ಕ ಜಿಲ್ಲಾ ಸಂಸದರಾದ ನಳಿನ್ ಕುಮಾರ್ ಕಟೀಲ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಭಾರತದ ಆತ್ಮ ಹಿಂದುತ್ವ,ನಂಬಿಕೆ ಮತ್ತು ಭಾವನೆಗಳ ಮೇಲೆ ಹಿಂದೂ ಸಮಾಜ ನಿಂತಿದೆ ಎಂದರು.ಶಂಕರಪುರ ಏಕಜಾತಿ ಧರ್ಮ ಪೀಠ,ಧ್ವರಕಾಮಾಯಿ ಮಠದ ಶ್ರೀ ಸಾಯಿ ಈಶ್ವರ್ ಗುರೂಜಿ ಆಶೀರ್ವಚನ ನೀಡಿದರು.

ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಭಾರತೀಯ ಹಿಂದೂ ಸಂಸ್ಕೃತಿಯಲ್ಲಿ ಮೂಗುತಿಗೆ ವಿಶೇಷ ಮಹತ್ವವಿದೆ ಎಂದರು.

ವೇದಿಕೆಯಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್,ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಿ.ಎನ್ ಪುರುಷೋತ್ತಮ ರಾವ್, ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ದೇವೇಂದ್ರ ಹೆಗ್ಡೆ ಕೊಕ್ರಾಡಿ, ವೇಣೂರು ಗ್ರಾ.ಪಂ ಅಧ್ಯಕ್ಷ ನೇಮಯ್ಯ ಕುಲಾಲ್, ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸುಂದರ ಹೆಗ್ಡೆ ಬಿಇ,ಮೀನಾಕ್ಷಿ, ವೇಣೂರು ಸತೀಶ್ ಮಡಿವಾಳ, ಉಪಸ್ಥಿತರಿದ್ದರು.ಕಾರ್ಯಕ್ರಮದಲ್ಲಿ 6 ಮಂದಿ ಪೌರ ಕಾರ್ಮಿಕರನ್ನು ಸನ್ಮಾನಿಸಲಾಯಿತು.