ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಮುಂಡಾಜೆ ಇದರ ಆಶ್ರಯದಲ್ಲಿ70ನೇ ವರ್ಷದ ಅಖಿಲ ಭಾರತ ಸಹಕಾರ ಸಪ್ತಾಹ- ಸಮಾರೋಪ

Suddi Udaya

ಚಾರ್ಮಾಡಿ: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ (ನಿ) ಬೆಂಗಳೂರು, ದಕ್ಷಣ ಕನ್ನಡ ಜಿಲ್ಲಾ ಸಹಕಾರಿ (ನಿ.) ಮಂಗಳೂರು, ದಕ್ಷಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಲಿ. ಮಂಗಳೂರು, ಬೆಳ್ತಂಗಡಿ ತಾಲೂಕು ಸಹಕಾರಿ ಯೂನಿಯನ್ (ನಿ.), ಬೆಳ್ತಂಗಡಿ, ಬೆಳ್ತಂಗಡಿ ತಾಲೂಕಿನ ಎಲ್ಲಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು, ಹಾಲು ಉತ್ಪಾದಕರ ಸಹಕಾರ ಸಂಘಗಳು ಹಾಗೂ ತಾಲೂಕಿನ ಇತರ ಎಲ್ಲಾ ಸಹಕಾರ ಸಂಘಗಳ ಸಹಭಾಗಿತ್ವದಲ್ಲಿ ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಮುಂಡಾಜೆ ಇದರ ಆಶ್ರಯದಲ್ಲಿ 70ನೇ ವರ್ಷದ ಅಖಿಲ ಭಾರತ ಸಹಕಾರ ಸಪ್ತಾಹ-2023 ಸಮಾರೋಪ ಸಮಾರಂಭವು ನ.20ರಂದು ಚಾರ್ಮಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ರಥಬೀದಿಯ ಸಭಾಭವನದ ದಿ. ಎನ್.ಎಸ್. ಗೋಖಲೆ, ಮುಂಡಾಜೆ ವೇದಿಕೆಯಲ್ಲಿ ನಡೆಯಿತು.

ಸಹಕಾರಿ ಶಿಕ್ಷಣ ತರಬೇತಿಯ ಪರಿಷ್ಕರಣೆ ವಿಷಯದಡಿ, 5 ಟ್ರಲಿಯನ್ ಡಾಲರ್ ಆರ್ಥಿಕತೆ ಸಾಧನೆಯಲ್ಲಿ ಸಹಕಾರ ಸಂಸ್ಥೆಗಳ ಪಾತ್ರ ಮತ್ತು ಸುಸ್ಥಿರ ಅಭಿವೃದ್ಧಿ ಗುರಿಗಳು ಧ್ಯೇಯದೊಂದಿಗೆ ಜರುಗಿತು.

ಮಂಗಳೂರು ಕ್ಯಾಂಪ್ಕೋ ಉಪಾಧ್ಯಕ್ಷ ಶಂಕರ ನಾರಾಯಣ ಭಟ್, ಖಂಡಿಗೆ ಕಾರ್ಯಕ್ರಮ ಉದ್ಘಾಟಿಸಿದರು. ಮುಂಡಾಜೆ ಪ್ಯಾಕ್ಸ್ ಅಧ್ಯಕ್ಷ ಜನಾರ್ಧನ ಗೌಡ ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಶಾಸಕರುಗಳಾದ ಕೆ. ಹರೀಶ್ ಕುಮಾರ್, ಕೆ. ಪ್ರತಾಪ್‌ಸಿಂಹ ನಾಯಕ್, ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಬೆಳ್ಳಿಪ್ಪಾಡಿ ಪ್ರಸಾದ್ ಕೌಶಲ್ ಶೆಟ್ಟಿ, ದ.ಕ. ಜಿಲ್ಲಾ ಹಾಲು ಒಕ್ಕೂಟದ ನಿರ್ದೇಶಕ ಪದ್ಮನಾಭ ಅರ್ಕಜೆ, ಬೆಳ್ತಂಗಡಿ ತಾಲೂಕು ರಬ್ಬರ್ ಸೊಸೈಟಿ, ಉಜಿರೆ ಅಧ್ಯಕ್ಷ ಶ್ರೀಧರ ಜಿ. ಭಿಡೆ, ಬೆಳ್ತಂಗಡಿ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್‌ನ ಅಧ್ಯಕ್ಷ ಸೋಮನಾಥ ಬಂಗೇರ, ಚಾರ್ಮಾಡಿ ಗ್ರಾ.ಪಂ. ಅಧ್ಯಕ್ಷೆ ಶಾರದ, ಚಾರ್ಮಾಡಿ ಹಾ.ಉ.ಸ.ಸಂಘದ ಅಧ್ಯಕ್ಷ ಕೇಶವ ಜಿ., ಸಹಕಾರಿ ಅಭಿವೃದ್ಧಿ ಅಧಿಕಾರಿ ಬಿ.ವಿ. ಪ್ರತಿಮಾ, ವಲಯ ಮೇಲ್ವಿಚಾರಕ ಸಿರಾಜುದ್ದೀನ್ ಉಪಸ್ಥಿತರಿದ್ದರು.

ನಿವೃತ್ತ ಯೋಧ ಕರ್ನಲ್ ನಿತಿನ್ ಭಿಡೆ ಮುಂಡಾಜೆ ಮತ್ತು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ಸಮಾಜ ಸೇವಕ ಹಸನಬ್ಬ ಚಾರ್ಮಾಡಿ ಇವರಿಗೆ ಅಭಿನಂದನೆ ಕಾರ್ಯಕ್ರಮ ನಡೆಯಿತು.

ವೇದಿಕೆಯಲ್ಲಿ ಮುಂಡಾಜೆ ಸಹಕಾರಿ ಸಂಘದ ಉಪಾಧ್ಯಕ್ಷ ಪ್ರಕಾಶ್ ನಾರಾಯಣ್, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಚಂದ್ರಕಾಂತ ಪ್ರಭು, ತಾಲೂಕು ಸಹಕಾರಿ ಯೂನಿಯನ್ ಅಧ್ಯಕ್ಷ ಸತೀಶ್ ಕೆ., ಉಪಾಧ್ಯಕ್ಷ ಸುಂದರ ಗೌಡ, ಮುಖ್ಯ ಕಾಯ೯ನಿವ೯ಹಣಾಧಿಕಾರಿ ಎಸ್, ಹಿರೇಮಠ್ ಉಪಸ್ಥಿತರಿದ್ದರು.

ಪ್ರಕಾಶ್ ನಾರಾಯಣ್ ಸ್ವಾಗತಿಸಿದರು. ನಾರಾಯಣ ಫಡಕೆ ಮುಂಡಾಜೆ ಕಾಯ೯ಕ್ರಮ ನಿರೂಪಿಸಿದರು.

Leave a Comment

error: Content is protected !!