April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆರಂಬೋಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಶೌರ್ಯ ವಿಪತ್ತು ಘಟಕ ಉದ್ಘಾಟನೆ

ಆರಂಬೋಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಶೌರ್ಯ ವಿಪತ್ತು ಘಟಕ ನ.19 ರಂದು ತುಂಬೆದಲೆಕ್ಕಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಭಜನಾ ಮಂದಿರದಲ್ಲಿ ಗುಂಡೂರಿ ಒಕ್ಕೂಟದ ಅಧ್ಯಕ್ಷ ಸದಾನಂದ ಪೂಜಾರಿಯವರ ಅಧ್ಯಕ್ಷತೆಯಲ್ಲಿ ಉದ್ಘಾಟನೆಗೊಂಡಿತು.

ಜನಜಾಗೃತಿ ತಾಲೂಕು ಸಮಿತಿ ಸದಸ್ಯರಾದ ಹರೀಶ್ ಕುಮಾರ್ ಪೊಕ್ಕಿ ದೀಪ ಪ್ರಜ್ವಲಿಸಿ ಶುಭ ಹಾರೈಸಿದರು. ಹೊಸಂಗಡಿ ವಲಯದ ಮೇಲ್ವಿಚಾರಕರಾದ ಶ್ರೀಮತಿ ವೀಣಾರವರು ಶೌರ್ಯ ವಿಪತ್ತು ತಂಡದ ಕರ್ತವ್ಯಗಳ ಬಗ್ಗೆ ಮಾಹಿತಿ ನೀಡಿದರು.

ವಲಯ ವಿಪತ್ತು ಘಟಕದ‌ ಸಂಚಾಲಕರಾಗಿ ಪ್ರವೀಣ್ ನೇರಳ್ ಪಲ್ಕೆ ಯವರನ್ನು ಆಯ್ಕೆ ಮಾಡಲಾಯಿತು. ಸತ್ಯನಾರಾಯಣ ಪೂಜಾ ಭಜನಾ ಮಂದಿರದ ಉಪಾಧ್ಯಕ್ಷರಾದ ಗುಣಪಾಲ ಪೂಜಾರಿ ನೇರಳ್ ಪಲ್ಕೆ, ವರಮಹಾಲಕ್ಷ್ಮಿ ವ್ರತ ಪೂಜಾ ಸಮಿತಿ ಅಧ್ಯಕ್ಷರಾದ ಶ್ರೀಮತಿ ಸಂಗೀತಾ ಹಾಗೂ ಹೊಸಂಗಡಿ ವಲಯದ ಶೌರ್ಯ ‌ವಿಪತ್ತು ಘಟಕದ ಸದಸ್ಯರು ಉಪಸ್ಥಿತರಿದ್ದರು.

ಆರಂಬೋಡಿ ಸೇವಾ ಪ್ರತಿನಿಧಿ ಶ್ರೀಮತಿ ಮಮತಾ ರವರು ಸ್ವಾಗತಿಸಿ. ಹರೀಶ್ಆಚಾರ್ಯ ವಂದಿಸಿ. ಗುಂಡೂರಿ ಸೇವಾ ಪ್ರತಿನಿಧಿ ಹರೀಶ್ ಬಾಡಾರು ನಿರೂಪಿಸಿದರು.

Related posts

ಉಜಿರೆಯ ಪಾಕತಜ್ಞ ಶ್ರೀನಿವಾಸ ಕಾರಂತ ನಿಧನ 

Suddi Udaya

ಸೂಳಬೆಟ್ಟು ಹಾಲು ಉತ್ಪಾದಕ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ಜಲಪಾತ ವೀಕ್ಷಣೆ ಹಾಗೂ ಗಡಾಯಿಕಲ್ಲು ಚಾರಣಕ್ಕೆ ನಿರ್ಬಂಧ

Suddi Udaya

ಕಬಡ್ಡಿ ಪಟು ವಿದ್ಯಾರ್ಥಿ ಚಿನ್ಮಯ ಗೌಡ ಪಿ.ಕೆ ನಿಧನ

Suddi Udaya

ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ: ಸಾಧಕರಿಗೆ ಸನ್ಮಾನ

Suddi Udaya

ಮುಂಡಾಜೆ :ಯುವ ಸಾಹಿತಿ ಆಪ್ತಿ ಪಟವರ್ಧನ್ ರವರು ಬರೆದ ಜರ್ನಿ ಅಂಡರ್‌ದ ಸ್ಕೈ ಪುಸ್ತಕ ಬಿಡುಗಡೆ

Suddi Udaya
error: Content is protected !!