38.6 C
ಪುತ್ತೂರು, ಬೆಳ್ತಂಗಡಿ
March 6, 2026
ಚಿತ್ರ ವರದಿವರದಿ

ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆಯಲ್ಲಿ ದೀಪಾವಳಿ ಹಬ್ಬ ಆಚರಣೆ

ಮುಂಡಾಜೆ : ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು (ರಿ.) ಇದರ ಅಧೀನ ಶಿಕ್ಷಣ ಸಂಸ್ಥೆಯಾದ ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆಯಲ್ಲಿ ದೀಪಾವಳಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು.
ಕಾರ್ಯಕ್ರಮವನ್ನು ಸ್ಥಾನೀಯ ಸಮಿತಿಯ ಅಧ್ಯಕ್ಷರಾದ ವಿನಯಚಂದ್ರ ದೀಪ ಬೆಳಗುವ ಮೂಲಕ ಉದ್ಘಾಟಿಸಿದರು.


ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿವೃತ್ತ ಸಿಇಒ ನಾರಾಯಣ ಫಡ್ಕೆಯವರು ದೀಪಾವಳಿ ಹಬ್ಬದ ಹಿನ್ನೆಲೆ, ಮಹತ್ವವನ್ನು ವಿವರಿಸಿದರು. ಬಳಿಕ ವಿದ್ಯಾರ್ಥಿಗಳಿಂದ ಕುಣಿತ ಭಜನೆ, ಭಕ್ತಿ ಗೀತೆಗಳು, ಮುಂತಾದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.


ಸರಸ್ವತಿ ಆಂಗ್ಲಮಾಧ್ಯಮ ಶಾಲೆ, ಕನ್ನಡ ಮಾಧ್ಯಮ ಪ್ರೌಢ ಶಾಲೆ ಮತ್ತು ಪದವಿ ಪೂರ್ವ ಕಾಲೇಜಿನ ಮುಖ್ಯಸ್ಥರು, ಭೋದಕ ಮತ್ತು ಬೋಧಕೇತರ ವೃಂದ, ವಿದ್ಯಾರ್ಥಿಗಳು, ಹಿರಿಯ ವಿದ್ಯಾರ್ಥಿಗಳು, ಪೋಷಕರು, ಊರಿನ ಹಿರಿಯರು ಹಾಗೂ ಆಡಳಿತ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.

Related posts

ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಸರ್ವ ಸದಸ್ಯರ ಸಾಮಾನ್ಯ ಸಭೆ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಗೆ ಶೈಕ್ಷಣಿಕ ಪ್ರಗತಿ ಪರಿಶೀಲನಾ ತಂಡದ ಸದಸ್ಯರು ಭೇಟಿ

Suddi Udaya

ತಣ್ಣೀರುಪಂತ ಪ್ರಾ.ಕೃ.ಪ.ಸ. ಸಂಘದ ಅಧ್ಯಕ್ಷರಾಗಿ ಸಹಕಾರಿ ಭಾರತೀಯ ಜಗದೀಶ್ ಶೆಟ್ಟಿ ಮೈರ ಆಯ್ಕೆ: ಕಾಂಗ್ರೆಸ್ ಬೆಂಬಲಿತ ಜಯವಿಕ್ರಮ್ ಗೆ ಸೋಲು

Suddi Udaya

ನಾರಾವಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕಾರ್ಯಕ್ರಮ

Suddi Udaya

 ಡಾ| ಡಿ. ಹೆಗ್ಗಡೆಯವರಿಗೆ “ಯಕ್ಷದ್ರುವ ಪಟ್ಲ ಸಂಭ್ರಮ -2023” ಆಮಂತ್ರಣ

Suddi Udaya

“ಮಾಯವಾಗುತ್ತಿದೆ ಮಚ್ಚಿನ ನೆರೋಲ್ಪಲ್ಕೆ ಬಸ್ ತಂಗುದಾಣ”

Suddi Udaya
error: Content is protected !!