30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ: ಕಣ್ಣಿನ ಉಚಿತ ತಪಾಸಣಾ ಶಿಬಿರ

ಕೊಕ್ಕಡ: ಕೌಕ್ರಾಡಿ ಹಾಲು ಉತ್ಪಾದಕರ ಸಹಕಾರ ಸಂಘದ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ (ಅಂಧತ್ವ ವಿಭಾಗ) , 2.5 ಎನ್.ವಿ. ಜಿ. ಸುರತ್ಕಲ್ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರವು ನ.19 ರಂದು ಕೌಕ್ರಾಡಿ ಸಂತ ಜಾನರ ಶಾಲಾ ಸಭಾಂಗಣದಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ರಫಾಯಲ್ ಸ್ಟ್ರೆಲ್ಲಾ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು.

ಆರೋಗ್ಯಾಧಿಕಾರಿ ಹಾಗೂ ವ್ಯವಸ್ಥಾಪನಾಧಿಕಾರಿ ಡಾ. ಹೇಮಚಂದ್ರ ಅವರು ಶಿಬಿರದ ಕುರಿತು ಮಾಹಿತಿ ನೀಡಿದರು.

ಜೇಸಿಐ ಕೊಕ್ಕಡ ಕಪಿಲಾ ಅಧ್ಯಕ್ಷ ಜಿತೇಶ್ ಎಲ್ ಪಿರೇರಾ ಅವರು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಸಂತ ಜಾನ್ ಬ್ಯಾಪ್ಟಿಸ್ಟ್ ದೇವಾಲಯದ ಧರ್ಮಗುರು ವಂ. ಜಗದೀಶ್ ಪಿಂಟೋ, ಕೌಕ್ರಾಡಿ ಹಾಲು ಉತ್ಪಾದಕರ ಸಹಕಾರ ಸಂಘದ ಉಪಾಧ್ಯಕ್ಷ ಎ. ಶೇಷಪ್ಪ ಗೌಡ, ನಿರ್ದೇಶಕ ಬಿ. ಶೇಷಪ್ಪ ಗೌಡ, ಕಾರ್ಯದರ್ಶಿ ಫೆಲ್ಸಿ ವೇಗಸ್, ದೇವಾಲಯದ ಆಯೋಗಗಳ ಸಂಯೋಜಕಿ ವಿನ್ನಿ ಫ್ರೆಡ್ , ಆರೋಗ್ಯ ಆಯೋಗದ ಸಂಚಾಲಕಿ ರೋಜಲಿನ್ ಪಾಯಸ್, ಕಾರ್ಮಿಕ ಆಯೋಗ ಸದಸ್ಯರು, ಕೊಕ್ಕಡ ಜೇಸಿಐ ಪದಾಧಿಕಾರಿಗಳು, ಪಾಲನಾ ಸಮಿತಿಯ ಉಪಾಧ್ಯಕ್ಷ ನೋಯೆಲ್ ಮೊಂತೆರೋ ಉಪಸ್ಥಿತರಿದ್ದರು.

ಅಪೋಲಿನಾ ಮಾರ್ಟಿಸ್ ಪ್ರಾರ್ಥಿಸಿದರು. ಯುವಜನ ಆಯೋಗದ ಸಂಚಾಲಕಿ ಜೆಸಿಂತಾ ಡಿ ಸೋಜ ಸ್ವಾಗತಿಸಿದರು. ಸಹನಾ ಮರಿಯಾ ನಿರೂಪಿಸಿದರು.

Related posts

ಉಜಿರೆ ಲಕ್ಷ್ಮಿ ಗ್ರೂಪ್ ಮಾಲಕ ಮೋಹನ್ ಕುಮಾರ್ ರವರಿಂದ ಯೋಗಾಸನ ಸ್ಪರ್ಧೆಗೆ ವಿದ್ಯಾರ್ಥಿಗಳಿಗೆ ಯೂನಿಪಾರ್ಮ್ ವಿತರಣೆ

Suddi Udaya

ಎಸ್ ಡಿ ಎಂ ಪಾಲಿಟೆಕ್ನಿಕ್ ನಲ್ಲಿ ಪ್ರೌಢ ಶಾಲಾ ಶಿಕ್ಷಕರಿಗೆ ತಾಂತ್ರಿಕ ಶಿಕ್ಷಣದ ಅವಶ್ಯಕತೆಯ ಕುರಿತು ಕಾರ್ಯಾಗಾರ

Suddi Udaya

ಬೆಳ್ತಂಗಡಿ ಪಿ. ಎಲ್. ಡಿ ಬ್ಯಾಂಕಿನ ನಿರ್ದೇಶಕ ಲೋಕಯ್ಯ ಗೌಡ ನಿಧನ

Suddi Udaya

ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಲಾಯಿಲ ಗ್ರಾ.ಪಂ. ಗೆ ಕಸದ ಬುಟ್ಟಿ ವಿತರಣೆ

Suddi Udaya

ಕಾಪು-ಉಪರಡ್ಕ ದೈವಗಳ ವಾರ್ಷಿಕ ಜಾತ್ರೆಗೆ ಚಾಲನೆ

Suddi Udaya
error: Content is protected !!