24.8 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬಜರಂಗದಳ ಕಾರ್ಯಕರ್ತರ ಮೇಲೆ ಗಡಿಪಾರು ವರದಿಯನ್ನು ಹಿಂಪಡೆಯಲು ವಿಶ್ವ ಹಿಂದೂ ಪರಿಷದ್ ಭಜರಂಗದಳ ದುರ್ಗಾವಾಹಿನಿ ಬೆಳ್ತಂಗಡಿ ಪ್ರಖಂಡದಿಂದ ಬೃಹತ್ ಪ್ರತಿಭಟನೆ : ಪುತ್ತೂರು ಉಪವಿಭಾಗದ ಸಹಾಯಕ ಕಮೀಷನರ್ ರಿಗೆ ಮನವಿ

ಬೆಳ್ತಂಗಡಿ : ವಿಶ್ವಹಿಂದೂ ಪರಿಷದ್ ಬಜರಂಗದಳ ದುರ್ಗಾವಾಹಿನಿ ಬೆಳ್ತಂಗಡಿ ಪ್ರಖಂಡ ವತಿಯಿಂದ ಬಜರಂಗದಳ ಕಾರ್ಯಕರ್ತರ ಮೇಲೆ ಗಡಿಪಾರು ನೋಟಿಸ್ ಜಾರಿ ಮಾಡಿ ಹಿಂದೂ ಸಂಘಟನೆಯ ಕಾರ್ಯಕರ್ತರನ್ನು ಹತ್ತಿಕ್ಕುವ ಹಿಂದೂ ವಿರೋಧಿ ಆಡಳಿತ ವ್ಯವಸ್ಥೆಯ ವಿರುದ್ಧ ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಬೃಹತ್ ಪ್ರತಿಭಟನೆಯು ನ.20 ರಂದು ನಡೆಯಿತು.

ಪ್ರತಿಭಟನಾಗಾರರು ಆಡಳಿತ ಸೌಧದ ವಠಾರದಲ್ಲಿ ಧರಣಿ ನಡೆಸಿ ಹಿಂದೂ ವಿರೋಧಿ ರಾಜ್ಯ ಸರ್ಕಾರಕ್ಕೆ ಧಿಕ್ಕಾರ ಕೂಗಿದರು.

ಬಳಿಕ ಪುತ್ತೂರು ಉಪವಿಭಾಗದ ಸಹಾಯಕ ಕಮೀಷನರ್ ರವರಿಗೆ ಉಪ ತಹಶೀಲ್ದಾರ್ ಜಯ ಕೆ. ರವರ ಮೂಲಕ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ವಿಶ್ವಹಿಂದೂ ಪರಿಷದ್ ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ, ಬೆಳ್ತಂಗಡಿ ಪ್ರಖಂಡದ ಅಧ್ಯಕ್ಷರುಗಳಾದ ದಿನೇಶ್ ಚಾರ್ಮಾಡಿ, ಬೆಳ್ತಂಗಡಿ ಪ್ರಖಂಡದ ಕಾರ್ಯದರ್ಶಿ ಮೋಹನ್, ಸಂಚಾಲಕ ಸಂತೋಷ್ ಅತ್ತಾಜೆ, ಜಿಲ್ಲಾ ಪ್ರಮುಖರುಗಳಾದ ತಿಲಕ್ ಹಾಗೂ ಗಣೇಶ್ ಕಳೆಂಜ ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಬಂಗಾಡಿ ಸಿ ಎ ಬ್ಯಾಂಕಿನ ನಿವೃತ್ತ ಮುಖ್ಯಕಾರ್ಯನಿರ್ವಹಣಾಧಿಕಾರಿ ಸಿ.ಕೆ ಬಾಲಕೃಷ್ಣ ಗೌಡ ನಿಧನ

Suddi Udaya

ಮದ್ದಡ್ಕ ಪೇಟೆಯಲ್ಲಿ 2 ತಿಂಗಳಿಂದ ಉರಿಯುತ್ತಿಲ್ಲ ದಾರಿ ದೀಪ: ದುರಸ್ತಿಗೊಳಿಸುವಂತೆ ಸ್ಥಳೀಯರ ಒತ್ತಾಯ

Suddi Udaya

ಕುವೆಟ್ಟು: ಅಪಘಾತವಾಗಿದ್ದ ವಿಠಲ ಶೆಟ್ಟಿರವರು ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ನೆರಿಯದಲ್ಲಿ ಅಲ್ಟ್ರಾಟೆಕ್ ಸಿಮೆಂಟ್ ಗ್ರಾಹಕರ ಸಮಾವೇಶ

Suddi Udaya

ಶ್ರೀ ಭಗವದ್ಗೀತಾ ಸ್ಪರ್ಧೆ : ಉಜಿರೆಯ ಎಸ್.ಡಿ.ಎಂ ಪ.ಪೂ ಕಾಲೇಜಿನ ವಿದ್ಯಾರ್ಥಿನಿ ಹಂಸಿನಿ ಭಿಡೆ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ತ್ರೋಬಾಲ್ ಪಂದ್ಯಾವಳಿಯಲ್ಲಿ ಅಂಡೆತಡ್ಕ ಶಾಲೆಯ ಬಾಲಕರ ತಂಡ ದ್ವಿತೀಯ: ಇಬ್ಬರು ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya
error: Content is protected !!