September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳಾಲು ಶ್ರೀ ಧ.ಮಂ ಪ್ರೌಢ ಶಾಲೆಯಲ್ಲಿ ಅಣಬೆ ಬೇಸಾಯ ತರಬೇತಿ

ಬೆಳಾಲು: ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಪೋಷಕರ ಸಮಾವೇಶದ ಸಂದರ್ಭದಲ್ಲಿ ಅಣಬೆ ಕೃಷಿ ಮಾಹಿತಿ ಮತ್ತು ಪ್ರಾತ್ಯಕ್ಷಿಕೆ ಕಾರ್ಯಕ್ರಮ ಜರಗಿತು.

ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಶೇಖರ್ ಕೊಲ್ಲಿಮಾರು ರವರ ಅಧ್ಯಕ್ಷತೆಯಲ್ಲಿ ಜರಗಿದ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಬೆಳಾಲು ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ನಿರ್ದೇಶಕರಾದ ಸುಲೈಮಾನ್ ಭೀಮಂಡೆಯವರು ಆಗಮಿಸಿದ್ದು, ಅಣಬೆ ಕೃಷಿಯ ಮಾಹಿತಿಯೊಂದಿಗೆ ಪ್ರಾತ್ಯಕ್ಷಿಕೆಯನ್ನು ನಡೆಸಿಕೊಟ್ಟರು. ಅತ್ಯಂತ ಸುಲಭ ಮತ್ತು ಕಡಿಮೆ ವೆಚ್ಚದಲ್ಲಿ, ಮನೆ ಬಳಕೆ ಹಾಗೂ ಆರ್ಥಿಕ ದೃಷ್ಟಿಕೋನದಿಂದಲೂ ಮಾಡಬಹುದಾದ ಕೃಷಿಯೆಂದರೆ ಅಣಬೆ ಬೇಸಾಯ ಮಾತ್ರ ಎನ್ನುತ್ತಾ ಮಾಹಿತಿ ನೀಡಿದರು.

ಮುಖ್ಯ ಶಿಕ್ಷಕರಾದ ರಾಮಕೃಷ್ಣ ಭಟ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಬಹಳಷ್ಟು ಮಂದಿ ಪೋಷಕರು ತರಬೇತಿಯಲ್ಲಿ ಪಾಲ್ಗೊಂಡಿದ್ದರು. ಶಿಕ್ಷಕರಾದ ಶಿಕ್ಷಕರಾದ ಗಣೇಶ್ವರ ರವರು ಸ್ವಾಗತಿಸಿ, ಕೋಕಿಲಾರವರು ವಂದಿಸಿದರು, ಸುಮನ್ ರವರು ಕಾರ್ಯಕ್ರಮ ನಿರೂಪಿಸಿದರು.

Related posts

ಡಿ.17: ಬೆಳ್ತಂಗಡಿ ತಾಲೂಕಿನ 18ನೇ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾಗಿ ಪ್ರೊ.ಎ. ಕೃಷ್ಣಪ್ಪ ಪೂಜಾರಿ ಆಯ್ಕೆ

Suddi Udaya

ಶಿರ್ಲಾಲು: ಗೆಜ್ಜೆಗಿರಿ ಯಾತ್ರಿ ನಿವಾಸ ಶಿಲಾನ್ಯಾಸದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ: ಮುಂಡತ್ತೋಡಿ ನಿವಾಸಿ ಸಿ. ಗೋಪಾಲ್ ಕೃಷ್ಣ ಮೆನನ್ ನಿಧನ

Suddi Udaya

ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾಟ: ಶಿಶಿರ್ ಜಯವಿಕ್ರಮ್ ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ಬೆಳಾಲು: ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲೆಯ ಕೊಠಡಿಗಳ ನಿರ್ಮಾಣದ ಕಾಮಗಾರಿಗೆ ರೂ.5 ಲಕ್ಷ ಅನುದಾನ ಬಿಡುಗಡೆ: ಡಾ. ಡಿ ವೀರೇಂದ್ರ ಹೆಗ್ಗಡೆ

Suddi Udaya
error: Content is protected !!