April 2, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎನ್ನೆಸ್ಸೆಸ್ ರಾಷ್ಟ್ರೀಯ ಭಾವೈಕ್ಯ ಶಿಬಿರಕ್ಕೆ ಸುದರ್ಶನ ನಾಯಕ್ ಆಯ್ಕೆ

ಉಜಿರೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಾಣಿಜ್ಯಶಾಸ್ತ್ರ ವಿದ್ಯಾರ್ಥಿ ಹಾಗೂ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಘಟಕದ ನಾಯಕ ಸುದರ್ಶನ ನಾಯಕ್ ಇವರು ನ. 22 ರಿಂದ 28 ರ ತನಕ ಕಾರವಾರದ ಕರ್ನಾಟಕ ವಿಶ್ವವಿದ್ಯಾಲಯದ ಪಿಜಿ ಸೆಂಟರ್ ನಲ್ಲಿ ನಡೆಯುವ ರಾಷ್ಟ್ರೀಯ ಸೇವಾ ಯೋಜನೆಯ ರಾಷ್ಟ್ರೀಯ ಭಾವೈಕ್ಯ ಶಿಬಿರಕ್ಕೆ ಆಯ್ಕೆಯಾಗಿದ್ದಾರೆ.

ಇವರು ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ನಾಯಕನಾಗಿ ವಿವಿಧ ವ್ಯಕ್ತಿತ್ವ ವಿಕಸನ ಕಾರ್ಯಕ್ರಮ , ಸ್ವಚ್ಛತಾ ಅಭಿಯಾನ , ಏಕ ದಿನ ಶಿಬಿರ ಹಾಗೂ ವಾರ್ಷಿಕ ಶಿಬಿರಗಳನ್ನು ನಡೆಸಲು ನಾಯಕತ್ವ ವಹಿಸಿದ್ದಾರೆ. ಹೋದ ವರ್ಷ ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಭಾವೈಕ್ಯ ಶಿಬಿರದಲ್ಲಿ ಭಾಗವಹಿಸಿದ್ದಾರೆ. ಇತ್ತೀಚಿಗೆ ಸಿ.ಎಸ್ ಫೌಂಡೇಶನ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುತ್ತಾರೆ.

Related posts

ಬೆಳ್ತಂಗಡಿ ಲೋಕಾಯುಕ್ತ ಎಸ್ಪಿಯವರಿಂದ ಸಾರ್ವಜನಿಕ ಕುಂದು ಕೊರತೆ ಸಭೆ ಹಾಗೂ ಸಾರ್ವಜನಿಕ ಅಹವಾಲು ಸ್ವೀಕಾರ

Suddi Udaya

ನಿಡ್ಲೆ ಸರಕಾರಿ ಪ್ರೌಢ ಶಾಲೆಯ ಕಂಪ್ಯೂಟರ್ ಶಿಕ್ಷಕಿ ಪ್ರಭಾ ಟಿ. ತಲೇಕಿ ನಿಧನ: ಪ್ರಭಾ ಅಪೇಕ್ಷೆಯಂತೆ ಮಣಿಪಾಲ ಮೆಡಿಕಲ್ ಕಾಲೇಜಿಗೆ ಮೃತದೇಹ ದಾನ

Suddi Udaya

ವೇಣೂರು: ಅಕ್ರಮವಾಗಿ ಗಾಂಜಾ ಸಾಗಾಟ,ಆರೋಪಿ ಬಂಧನಮೋಟಾರ್ ಸೈಕಲ್ ಹಾಗೂ ರೂ. 37 ಸಾವಿರದ 500 ಗ್ರಾಂ ಗಾಂಜಾ ವಶ ಪೋಲಿಸ್ ವೃತ್ತ ನಿರೀಕ್ಷಕ ಶಿವಕುಮಾರ ಬಿ ರವರ ನೇತೃತ್ವದಲ್ಲಿ ಕಾರ್ಯಾಚರಣೆ

Suddi Udaya

ಮುಂಡಾಜೆ: ಕವಿ ವಿಶ್ರಾಂತ ಶಿಕ್ಷಕ ಶಂಕರ್ ಎನ್.ತಾಮನ್ಕರ್ ರವರ ಸೀತಾ ರಾಮಾಯಣ ಮತ್ತು ಮಕರಂದ ಕವನ ಸಂಕಲನಗಳ ಲೋಕಾರ್ಪಣೆ ಹಾಗೂ ಸಾಧಕರಿಗೆ ಸನ್ಮಾನ

Suddi Udaya

ಕಲ್ಮಂಜ ಪ್ರೌಢಶಾಲೆಯಲ್ಲಿ ಪ್ರೇರಣಾ ತರಗತಿ

Suddi Udaya

ವೇಣೂರುನಲ್ಲಿ ಶ್ರೀ ಸಾಯಿ ಗಿಫ್ಟ್ &ಟಾಯ್ಸ್ ಸೆಂಟರ್ ಶುಭಾರಂಭ

Suddi Udaya
error: Content is protected !!