37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿ

ಧರ್ಮಸ್ಥಳ ಶತಾಯಿಷಿ ಮತದಾರರಿಗೆ ಚುನಾವಣಾ ಆಯೋಗದಿಂದ ಗೌರವಪೂರ್ವಕ ಸನ್ಮಾನ ಹಾಗೂ ಪ್ರಮಾಣ ಪತ್ರ ವಿತರಣೆ

ಧರ್ಮಸ್ಥಳ : ಭಾರತ ಚುನಾವಣಾ ಆಯೋಗ ದಕ್ಷಿಣ ಕನ್ನಡ ಜಿಲ್ಲಾಡಳಿತ ಮತ್ತು ಸ್ವೀಪ್ ಸಮಿತಿ ದಕ್ಷಿಣ ಕನ್ನಡ ಜಿಲ್ಲೆ ಇದರ ವತಿಯಿಂದ 100 ವರ್ಷ ವಯಸ್ಸು ದಾಟಿದ ಶತಾಯಿಷಿ ಮತದಾರರನ್ನು ಧರ್ಮಸ್ಥಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಜಿಕುರಿಯ ಶ್ರೀಮತಿ ಪಾತುಮ ಪೋಕೆಕುಂಞ 104 ವರ್ಷ ಹಾಗೂ ಕನ್ಯಾಡಿ ಹಿಪ್ಪ ನಿವಾಸಿ ಮುದ್ದ101 ವರ್ಷದ ಮತದಾರರನ್ನು ಧರ್ಮಸ್ಥಳ ಗ್ರಾಮ ಪಂಚಾಯತ್ ಮೂಲಕ ಅಧಿಕಾರಿಗಳು ಅವರ ಮನೆಗೆ ಭೇಟಿ ನೀಡಿ ಅವರನ್ನು ಗೌರವಯುತವಾಗಿ ಅಭಿನಂದಿಸಿ, ಸನ್ಮಾನಿಸಿ ಅವರಿಗೆ ಪ್ರಮಾಣ ಪತ್ರವನ್ನು ನೀಡಿದರು.

ಈ ಸಂದರ್ಭದಲ್ಲಿ ಧರ್ಮಸ್ಥಳ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಪಿ. ಶ್ರೀನಿವಾಸ್ ರಾವ್, ಪಂಚಾಯತ ಅಭಿವೃದ್ಧಿ ಅಧಿಕಾರಿ ಉಮೇಶ್, ಬೂತ್ ಮಟ್ಟದ ಅಧಿಕಾರಿಗಳಾದ ಡಾ. ದೇವಿಪ್ರಸಾದ್ ಬೊಲ್ಮ, ಶೇಖರ ಉಪಸ್ಥಿತರಿದ್ದರು. ಚುನಾವಣಾ ಆಯೋಗದ ಈ ಕಾರ್ಯಕ್ರಮಕ್ಕೆ ಹಿರಿಯ ಮತದಾರರು ಸಂತಸ ವ್ಯಕ್ತಪಡಿಸಿದರು.

Related posts

ರಾಜ್ಯಮಟ್ಟದ ಜನಪದ ಗೀತಗಾಯನದಲ್ಲಿ ವಾಣಿ ಕಾಲೇಜಿನ ರೇಂಜರ್ಸ್ ತಂಡ ಪ್ರಥಮ

Suddi Udaya

ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿಗೆ ಸದಸ್ಯರಾಗಿ ಶಾಸಕ ಹರೀಶ್ ಪೂಂಜ ನಾಮನಿರ್ದೇಶನ

Suddi Udaya

ಸೆ.11: ಬೆಳ್ತಂಗಡಿಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

Suddi Udaya

ಕೊಕ್ಕಡ ಅಮೃತ ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಜ್ಯೋತಿ ಆಸ್ಪತ್ರೆಗೆ ಆಳ್ವಾಸ್ ಕಾಲೇಜು ಅಡ್ಮಿಸ್ರಶನ್ ವಿಭಾಗದ ವಿದ್ಯಾರ್ಥಿಗಳು ಭೇಟಿ

Suddi Udaya

ಸುದ್ದಿ ಉದಯ ದೀಪಾವಳಿ ವಿಶೇಷಾಂಕ-2024: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ‌|| ಡಿ. ವೀರೇಂದ್ರ ಹೆಗ್ಗಡೆಯವರಿಂದ ಬಿಡುಗಡೆ

Suddi Udaya
error: Content is protected !!