37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜು

ನಾರಾವಿ ಅಂತರ್ ಕಾಲೇಜು ವಾಣಿಜ್ಯ ಮತ್ತು ಸಾಂಸ್ಕೃತಿಕ ಸ್ಪರ್ಧೆ :ಪ್ರಸನ್ನ ಪಿಯು ಕಾಲೇಜಿಗೆ ಸಮಗ್ರ ಪ್ರಶಸ್ತಿ

ಬೆಳ್ತಂಗಡಿ: ಸಂತ ಅಂತೋನಿ ಪದವಿ ಕಾಲೇಜು ನಾರಾವಿ ಇಲ್ಲಿ ಅಂತರ್ ಕಾಲೇಜು ಪಿಯುಸಿ ವಿಭಾಗ ಮಟ್ಟದ ವಾಣಿಜ್ಯ ಹಾಗೂ ಸಾಂಸ್ಕೃತಿಕ ಸ್ಪರ್ಧೆ UNITUS 2K23 ನಡೆಯಿತು.

ಕಾರ್ಯಕ್ರಮದ ಉದ್ಘಾಟನಾ ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಸ್ಟಾರ್ ಸುವರ್ಣ ಕಾಮಿಡಿ ಗ್ಯಾಂಗ್ ನ ಕಲಾವಿದರಾದ  ಅಕ್ಷಯ್ ಸರಿಪಳ್ಳ ಆಗಮಿಸಿ ವಿದ್ಯಾರ್ಥಿಗಳಿಗೆ ಸಂದೇಶವನ್ನು ನೀಡಿದರು.

ವೇದಿಕೆಯಲ್ಲಿ ಸಂತ ಅಂತೋನಿ ಶಿಕ್ಷಣ ಸಂಸ್ಥೆಯ ಸಂಚಾಲಕರಾದ ವಂ. ಫಾ. ವಲೇರಿಯನ್ ಫೆರ್ನಾಂಡಿಸ್, ಕಾಲೇಜಿನ ಪ್ರಾಂಶುಪಾಲರಾದ ವಂ|ಡಾ.ಆಲ್ವಿನ್ ಸೆರಾವೋ, ನಾರಾವಿ ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷರಾದ ಸಂಜಯ್ ಮಿರಾಂದ ,ಕಾರ್ಯದರ್ಶಿಯಾದ ಶ್ರೀಮತಿ ಎವ್ಜಿನ್ ಫೆರ್ನಾಂಡಿಸ್, ಉಪ ಪ್ರಾಂಶುಪಾಲರಾದ ಶ್ರೀ. ಸಂತೋಷ್ ಸಲ್ಡಾನ ಹಾಗೂ ವಾಣಿಜ್ಯ ವಿಭಾಗದ ಮುಖ್ಯಸ್ಥರು ಮತ್ತು ಸಾಂಸ್ಕೃತಿಕ  ಸಂಘದ ಸಂಯೋಜಕರಾದ ಅವಿಲ್ ಮೊರಸ್, ವಾಣಿಜ್ಯ ಸಂಘದ ಸಂಯೋಜಕರಾದ  ಸಂತೋಷ್ ಮತ್ತು ಅವಿನಾಶ್ ಲೋಬೊ, ವಿದ್ಯಾರ್ಥಿ ಸಂಘದ ನಾಯಕ ಕೇಶವ್ ಶರ್ಮ ಮತ್ತು ವಾಣಿಜ್ಯ ಸಂಘದ ವಿದ್ಯಾರ್ಥಿ ಪ್ರತಿನಿಧಿಗಳಾದ ಸೋಹನ್ ಮತ್ತು ಕು. ಶೈನಿ ಹಾಗೂ ಸಾಂಸ್ಕೃತಿಕ ಸಂಘದ ವಿದ್ಯಾರ್ಥಿ ಪ್ರತಿನಿಧಿಗಳಾದ ಅಶ್ವತ್ ಮತ್ತು ಕು. ಸುಚಿತ್ರಾ ಉಪಸ್ಥಿತರಿದ್ದರು.

12 ಕಾಲೇಜಿನಿಂದ ವಿವಿಧ ಸ್ಪರ್ಧೆಗಳಿಗೆ ವಿದ್ಯಾರ್ಥಿಗಳು ಆಗಮಿಸಿದ್ದರು. ಸಂಜೆ ನಡೆದ ಸಮಾರೋಪ ಸಮಾರಂಭ ಕಾರ್ಯಕ್ರಮದಲ್ಲಿ ವಿಜೇತರಾದ ತಂಡಗಳಿಗೆ ಬಹುಮಾನವನ್ನು ವಿತರಣೆ ಮಾಡಲಾಯಿತು. ಪ್ರಸನ್ನ ಪದವಿ ಪೂರ್ವ ಕಾಲೇಜು ಸಮಗ್ರ ವಿಭಾಗದಲ್ಲಿ ಮೊದಲ ಸ್ಥಾನವನ್ನು ಗಳಿಸಿತು ಹಾಗೂ ದ್ವಿತೀಯ ಸ್ಥಾನವನ್ನು ಸರಕಾರಿ ಪದವಿ ಪೂರ್ವ ಕಾಲೇಜು ಬಜಗೋಳಿ ಪಡೆದುಕೊಂಡಿತು.

Related posts

ಮಿತ್ತಬಾಗಿಲು ಗ್ರಾ.ಪಂ. ನ ವಿಶೇಷ ಗ್ರಾಮಸಭೆ ಹಾಗೂ ಸನ್ಮಾನ ಕಾರ್ಯಕ್ರಮ

Suddi Udaya

ಬಂದಾರು ಸ.ಉ.ಹಿ.ಪ್ರಾ.ಶಾಲೆಯಲ್ಲಿ ಪೋಷಕರು ಹಾಗೂ ಹಳೆ ವಿದ್ಯಾರ್ಥಿಗಳಿಂದ ಶ್ರಮದಾನ

Suddi Udaya

ಕನ್ಯಾಡಿ -2 ಸ.ಉ. ಹಿ.ಪ್ರಾ. ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಮಚ್ಚಿನದಲ್ಲಿ ಗ್ರಾಮಮಟ್ಟದ ಬಾಲ ಮೇಳ ಕಾರ್ಯಕ್ರಮ

Suddi Udaya

ಪರೀಕ ಶ್ರೀ ಧ.ಮಂ. ಯೋಗ ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ಸೌಖ್ಯವನದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಿ ಸೀತಾರಾಮ ತೋಳ್ಪಾಡಿತ್ತಾರವರಿಗೆ ಅಭಿನಂದನಾ ಸಮಾರಂಭ

Suddi Udaya

ಹಿಂದೂಗಳ ತೆರಿಗೆ ಹಿಂದೂಗಳಿಗೆ ಸಲ್ಲಬೇಕು: ಶಾಸಕ ಹರೀಶ್ ಪೂಂಜ

Suddi Udaya
error: Content is protected !!