32.6 C
ಪುತ್ತೂರು, ಬೆಳ್ತಂಗಡಿ
November 24, 2024
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಕ್ಕಳ ರೋಗ ತಪಾಸಣಾ ಶಿಬಿರ

ಉಜಿರೆ: ಎಸ್. ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನ19ರಂದು ಮಕ್ಕಳ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿತ್ತು. ಶಿಬಿರದಲ್ಲಿ ಆಸ್ಪತ್ರೆಯ ನಿರ್ದೇಶಕ ಎಂ. ಜನಾರ್ದನ್ ಇವರು ಮಾತನಾಡುತ್ತಾ, ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಮಾತೃಶ್ರೀ ಹೇಮಾವತಿ ಅಮ್ಮನವರ ನಿರ್ದೇಶನದಂತೆ ಮಕ್ಕಳ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿದೆ. ಗರ್ಭಿಣಿಯರು, ಬಾಣಂತಿಯರು ಮತ್ತು ಮಕ್ಕಳ ಆರೋಗ್ಯದ ಬಗ್ಗೆ ಪೂಜ್ಯರು ಮತ್ತು ಮಾತೃಶ್ರೀ ಅಮ್ಮನವರು ಹಾಗೂ ಹರ್ಷೇಂದ್ರ ಕುಮಾರ್ ಅಪಾರವಾದ ಕಾಳಜಿ ಹೊಂದಿದ್ದಾರೆ. ಈ ನಿಟ್ಟಿನಲ್ಲಿ ಈಗಾಗಲೇ ಈ ಆಸ್ಪತ್ರೆಯಲ್ಲಿ ವಿಶೇಷ ಸೌಲಭ್ಯ ಹೊಂದಿರುವ ಅಮ್ಮ ಬರ್ತ್ ಸೆಂಟರ್ ತೆರೆಯಲಾಗಿದೆ. 4 ಮಂದಿ, ಫಿಸಿಷಿಯನ್, 4 ಮಂದಿ ಮೂಳೆ ಶಸ್ತ್ರಚಿಕಿತ್ಸಾ ತಜ್ಞರು, 3 ಮಂದಿ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರು ಸೇರಿದಂತೆ 19 ಮಂದಿ ತಜ್ಞ ವೈದ್ಯರು, 19 ಮಂದಿ ಸೂಪರ್ ಸ್ಪೆಷಾಲಿಟಿ ಸಂದರ್ಶನ ವೈದ್ಯರು, 14 ಮಂದಿ ಸಹಾಯಕ ವೈದ್ಯರಿಂದ ವೈದ್ಯಕೀಯ ಸೇವೆ ದೊರೆಯುತ್ತಿದೆ ಎಂದರು.

ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾ ಕಾರಂತ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡುತ್ತಾ, ಉಜಿರೆಯಂತಹ ಗ್ರಾಮೀಣ ಭಾಗದಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಎಲ್ಲಾ ವೈದ್ಯಕೀಯ ಸೌಲಭ್ಯವಿರುವ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆ ಪ್ರಾರಂಭಿಸಿದ್ದರಿಂದ ಇಲ್ಲಿನ ಜನತೆಗೆ ಉತ್ತಮ ಆರೋಗ್ಯ ಸೇವೆ ದೊರೆಯುವಂತಾಗಿದೆ ಎಂದರು.


ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ಮಕ್ಕಳ ರೋಗ ತಜ್ಞರಾದ ಡಾ| ಅರ್ಚನಾ ಕೆ. ಎಂ ಮತ್ತು ಡಾ| ಶಿವಕುಮಾರ್ ಶಿಬಿರದಲ್ಲಿ ಮಕ್ಕಳ ವೈದ್ಯಕೀಯ ಪರೀಕ್ಷೆ ನಡೆಸಿದರು.
ಬಾಲವಿಜ್ಞಾನಿ ಪ್ರಶಸ್ತಿ ಪುರಷ್ಕೃತೆ ಉಜಿರೆ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಮಧುಶ್ರೀ ಇವರನ್ನು ಸನ್ಮಾನಿಸಲಾಯಿತು. ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ| ದೇವೇಂದ್ರ ಕುಮಾರ್, ನರ್ಸಿಂಗ್ ಅಧೀಕ್ಷಕಿ ಶೆರ್ಲಿ, ಪರ್ಜೇಸ್ ಮೆನೇಜರ್ ಅಜಯ ಕುಮಾರ್ ಪಿ.ಕೆ, ಮಾರ್ಕೆಟಿಂಗ್ ಎಕ್ಷಕ್ಯೂಟಿವ್ ಸುಮಂತ್ ರೈ ಉಪಸ್ಥಿತರಿದ್ದರು.


122 ಮಕ್ಕಳು ಶಿಬಿರದ ಸದುಪಯೋಗ ಪಡೆದುಕೊಂಡರು. ಶಿಬಿರದಲ್ಲಿ ಭಾಗವಹಿಸಿದ ಮಕ್ಕಳ ಹೆತ್ತವರು ಮೆಚ್ಚುಗೆ ವ್ಯಕ್ತಪಡಿಸಿದರು. ಸಂಪರ್ಕ ಅಧಿಕಾರಿ ಚಿದಾನಂದ್ ಕಾರ್ಯಕ್ರಮ ನಿರೂಪಿಸಿದರು.

Related posts

ಗುರುವಾಯನಕೆರೆ: ಎಕ್ಸೆಲ್‌ ಪ.ಪೂ. ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಪ್ರಯುಕ್ತ ಗುರು ನಮನ ಹಾಗೂ 272 ಶಿಕ್ಷಕರಿಗೆ ಗೌರವಾರ್ಪಣೆ

Suddi Udaya

ಉಜಿರೆ: ಹಳೇಪೇಟೆ ಮುಹಿಯುದ್ದೀನ್ ಜುಮಾ ಮಸ್ಜಿದ್ ಹಾಗೂ ವಿವಿಧ ಸಂಸ್ಥೆಗಳ ಸಹಯೋಗದೊಂದಿಗೆ ಮಾದಕ ದ್ರವ್ಯದ ವ್ಯಸನದ ವಿರುದ್ದ ಜನಜಾಗೃತಿ ಅಭಿಯಾನ

Suddi Udaya

ಉಜಿರೆ ಶ್ರೀ ಧ.ಮಂ ಪ.ಪೂ ಕಾಲೇಜು ಸಂಸ್ಕೃತ ಸಂಘದ ಅಧ್ಯಕ್ಷನಾಗಿ ಆದಿತ್ಯ ರಮೇಶ್ ಹೆಗಡೆ ಆಯ್ಕೆ

Suddi Udaya

ನಿಡ್ಲೆಯ ಪ್ರತಿಷ್ಠಿತ ಸಂಸ್ಥೆ ಅಗ್ರಿಲೀಫ್ ಗೆ ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಭೇಟಿ

Suddi Udaya

ಹತ್ಯಡ್ಕ: ಕಾಂಗ್ರೆಸ್ ಬೂತ್ ಕಾರ್ಯಕರ್ತರ ಸಭೆ

Suddi Udaya

ಬಳಂಜ ದೇವಸ್ಥಾನದ ಜಾತ್ರ ಮಹೋತ್ಸವ ಸಂಪನ್ನ: ದೈವ ದೇವರ ಭೇಟಿ

Suddi Udaya
error: Content is protected !!