24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನೆಲ್ಯಾಡಿ ಪೇಟೆಯಲ್ಲಿ ಪ್ಲೈ ಓವರ್ ನಿರ್ಮಾಣ: ಡಾ.ವೀರೇಂದ್ರ ಹೆಗ್ಗಡೆಯವರಿಗೆ ಹೋರಾಟ ಸಮಿತಿಯಿಂದ ಮನವಿ

ಬೆಳ್ತಂಗಡಿ: ಕಡಬ ತಾಲೂಕಿನ ನೆಲ್ಯಾಡಿ ಪೇಟೆಯಲ್ಲಿ ಬಿ.ಸಿ.ರೋಡ್- ಅಡ್ಡಹೊಳೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು, ನೆಲ್ಯಾಡಿ ಪೇಟೆಯಲ್ಲಿ ಜನ, ವಾಹನ ಸಂಚಾರ ಹೆಚ್ಚಾಗಿರುವುದರಿಂದ ಹಾಗೂ ಸಾರ್ವಜನಿಕರ ಹಿತ ದೃಷ್ಟಿಯಿಂದ ಪ್ಲೈ ಓವರ್ ನಿರ್ಮಾಣ ಮಾಡಿಕೊಡುವಂತೆ ಸಂಬಂಧಪಟ್ಟವರಿಗೆ ತಿಳಿಸುವಂತೆ ಡಾ. ಡಿ ವೀರೇಂದ್ರ ಹೆಗ್ಗಡೆಯವರಿಗೆ ಹೋರಾಟ ಸಮಿತಿಯಿಂದ ಮನವಿ ಸಲ್ಲಿಸಲಾಯಿತು.

ಇದಕ್ಕೆ ಸ್ಪಂದಿಸಿದ ಡಾ.ಡಿ ವೀರೇಂದ್ರ ಹೆಗ್ಗಡೆ ರವರು ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವರಾದ ನಿತಿನ್ ಗಡ್ಗರಿ ಅವರಿಗೆ ಪತ್ರಮುಖೇನ ತಿಳಿಸುವುದಾಗಿ ಹೇಳಿದರು.

ಈ ಸಂದರ್ಭದಲ್ಲಿ ನೆಲ್ಯಾಡಿ-ಕೌಕ್ರಾಡಿ ಪೇಟೆ ಉಳಿಸಿ ಹೋರಾಟ ಸಮಿತಿಯ ಅಧ್ಯಕ್ಷರಾದ ಎ.ಕೆ ವರ್ಗೀಸ್, ಕಾರ್ಯದರ್ಶಿ ಪ್ರಶಾಂತ್ ಸಿ.ಎಚ್, ಜೊತೆ ಕಾರ್ಯದರ್ಶಿ ಉಷಾ ಅಂಚನ್, ಕೋಶಾಧಿಕಾರಿ ಸತೀಶ್ ಭಟ್, ಸಮಿತಿಯ ಸದಸ್ಯರಾದ ವಿ.ಜೆ ಜೋಸೆಫ್, ರಫೀಕ್ ಸೀಗಲ್, ಇಬ್ರಾಹಿಂ ಎಂ.ಕೆ ಜೊತೆಗಿದ್ದರು.

Related posts

ಇಳಂತಿಲ: ಶ್ರೀ ಮಹಾಭಾರತ ಸರಣಿಯ 75ನೇ ತಾಳಮದ್ದಳೆ ಮತ್ತು ಸನ್ಮಾನ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಸನ್ನಿಧಿಯಲ್ಲಿ ವಾರ್ಷಿಕ ಮೂಡಪ್ಪ ಸೇವೆ ಸಂಪನ್ನ

Suddi Udaya

ಲಯನ್ಸ್ ಕ್ಲಬ್ ಸುವರ್ಣ ಮಹೋತ್ಸವ; ಉಮೇಶ್ ಶೆಟ್ಟಿ ಉಜಿರೆ ಬಳಗದ ಸದಸ್ಯರ ಪದಗ್ರಹಣ

Suddi Udaya

ಧರ್ಮಸ್ಥಳ: ಮಹಿಳೆಯ ಕಾಲಿನ ಮೇಲೆ ಹರಿದ ಕಾರು : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಉಜಿರೆ ಗ್ರಾ.ಪಂ. ವ್ಯಾಪ್ತಿಯ ಯುವ ಮತಗಟ್ಟೆ ಸಂಖ್ಯೆ 98ರಲ್ಲಿ ಬಿರುಸಿನ ಮತದಾನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಭೇಟಿ

Suddi Udaya
error: Content is protected !!