ಉಜಿರೆ :ಡಾ. ಹಾ.ಮಾ.ನಾ ಸಂಶೋಧನಾ ಕೇಂದ್ರ ಮತ್ತು ಕನ್ನಡ ವಿಭಾಗ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಾವಿದ್ಯಾಲಯ (ಸ್ವಾಯತ್ತ) ಉಜಿರೆ ಇವರ ಜಂಟಿ ಆಶ್ರಯದಲ್ಲಿ ಕರ್ನಾಟಕ ಭಾಷಾಂತರಕಾರರ ಒಕ್ಕೂಟ ಸಹಯೋಗದೊಂದಿಗೆ ಭಾಷಾಂತರಕಾರರ ಮೂರನೆಯ ಸಮಾವೇಶ ಅಂಗವಾಗಿ ಕನ್ನಡ ಸಾಂಸ್ಕೃತಿಕ ಸಂವರ್ಧನೆ ಮತ್ತು ಭಾಷಾಂತರಕಾರರು ರಾಷ್ಟ್ರೀಯ ವಿಚಾರ ಸಂಕಿರಣವು ನ.22 ರಂದು ಶ್ರೀ ಸಿದ್ದವನ ಗುರುಕುಲದಲ್ಲಿ ನಡೆಸಲಾಯಿತು.
ಕಾರ್ಯಕ್ರಮವನ್ನು ಡಾ. ಡಿ ವೀರೇಂದ್ರ ಹೆಗ್ಗಡೆಯವರು ಉದ್ಘಾಟಿಸಿ, ಭಾಷಾಂತರದ ಮಹತ್ವದ ಬಗ್ಗೆ ತಿಳಿಸಿದರು
ಶ್ರೀ ಧ.ಮಂ. ಶಿಕ್ಷಣ ಸಂಸ್ಥೆಗಳ ಕಾಯ೯ದಶಿ೯ ಡಾ| ಸತೀಶ್ಚಂದ್ರ ಎಸ್ ಅಧ್ಯಕ್ಷತೆಯನ್ನು ವಹಿಸಿದರು.
ಮುಖ್ಯ ಅತಿಥಿಗಳಾಗಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಮೋಹನ್ ಆಳ್ವ ಭಾಗವಹಿಸಿದ್ದರು.ಕಾಯ೯ಕ್ರಮ ಸಂಯೋಜಕ ಡಾ.ಮೋಹನ್ ಕುಂಟಾರ್ ಪ್ರಸ್ತಾವನೆ ಮಾಡಿದರು.
ಪೂರ್ವಿ ದಾಮ್ಲೆ ಬಳಗ ಪ್ರಾರ್ಥಿಸಿದರು. ಎಸ್.ಡಿ.ಎಮ್ ಕಾಲೇಜಿನ ಪ್ರಾಂಶುಪಾಲರು ಡಾ. ಬಿ.ಎ ಕುಮಾರ ಹೆಗ್ಡೆ ಸ್ವಾಗತಿಸಿ, ಡಾ. ದಿವ ಕೊಕ್ಕಡ ನಿರೂಪಿಸಿದರು. ಕನ್ನಡ ವಿಭಾಗದ ಮುಖ್ಯಸ್ಥೆ ಡಾ. ಬೋಜಮ್ಮ ಕೆ.ಎನ್ ವಂದಿಸಿದರು.