23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೈಕ್ ಡಿವೈಡರ್ ಗೆ ಡಿಕ್ಕಿ ಹೊಡೆದ ಪ್ರಕರಣ: ಚಿಕಿತ್ಸೆ ಫಲಿಸದೆ ಕಾಲೇಜು ವಿದ್ಯಾರ್ಥಿ ಸಾವು

ಬೆಳ್ತಂಗಡಿ: ಉಜಿರೆಯ ಕಾಲೇಜು ರಸ್ತೆಯ ಬಳಿ ಚಲಿಸುತ್ತಿದ್ದಾಗ ಬೈಕ್ ನಿಯಂತ್ರಣ ಕಳೆದುಕೊಂಡು ಡಿವೈಡರ್ ಗೆ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಗಂಭೀರ ಗಾಯಗೊಂಡು ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಉಜಿರೆಯ ಎಸ್.ಡಿ.ಎಮ್ ಡಿಪ್ಲೊಮಾ ವಿದ್ಯಾರ್ಥಿ ಕಲ್ಮಂಜ ಗ್ರಾಮದ ಕರಿಯನೆಲ ಆನಂದ ಗೌಡರ ಪುತ್ರ ದಿಕ್ಷೀತ್ (20ವ) ಅಪಘಾತದಲ್ಲಿ ಮೃತಪಟ್ಟ ಯುವಕನಾಗಿದ್ದಾರೆ. ನ.23ರಂದು ಕಾಲೇಜಿನಲ್ಲಿ ಕಾರ್ಯಕ್ರಮವಿದ್ದ ಕಾರಣ ವಿದ್ಯಾರ್ಥಿಯು ಮಧ್ಯಾಹ್ನ ಊಟ ಮಾಡಿ ವಾಪಸ್ ಬರುವಾಗ ಬೈಕಿನ ಸ್ಟ್ಯಾಂಡ್ ತೆಗೆಯದೆ ಚಲಾಯಿಸಿಕೊಂಡು ಬಂದ ಪರಿಣಾಮ ನಿಯಂತ್ರಣ ಕಳೆದುಕೊಂಡ ಬೈಕ್ ರಸ್ತೆಯ ಡಿವೈಡರ್ ಗೆ ಡಿಕ್ಕಿ ಹೊಡೆದಿದ್ದು, ಯುವಕನ ತಲೆಗೆ ಗಂಭೀರ ಗಾಯವಾಗಿದ್ದು, ಆತನನ್ನು ಕೂಡಲೇ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ ವೇಳೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

Related posts

ಕಳೆಂಜ ವಿಶ್ವಹಿಂದೂ ಪರಿಷತ್ ಬಜರಂಗದಳ ಕಾರ್ಯಕರ್ತರಿಂದ ಸೋರುತಿದ್ದ ಮನೆಯ ಮೇಲ್ಛಾವಣಿಗೆ ಟಾರ್ಪಲ್ ಅಳವಡಿಕೆ

Suddi Udaya

ಎಸ್‌ಡಿಎಂ ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಆಸ್ಪತ್ರೆ ಶಾಂತಿವನದಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಶಿಲ್ಪಕಲಾ ಅಕಾಡೆಮಿ ಕಲಾಕೃತಿ ಪ್ರಶಸ್ತಿಗೆ ಬೆಳಾಲಿನ ಶಿಲ್ಪಿ ಶಶಿಧರ ಆಚಾರ್ಯ ಆಯ್ಕೆ

Suddi Udaya

ಮೂಡಾದ ಬದಲಿ ನಿವೇಶನ ಹಂಚಿಕೆ ಪ್ರಕರಣದಲ್ಲಿ ತನಿಖೆ ಎದುರಿಸಬೇಕಾಗಿ ಬಂದಿರುವುದರಿಂದ ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರಿಯಲು ಸಿದ್ಧರಾಮಯ್ಯ ರಿಗೆ ಯಾವುದೇ ನೈತಿಕತೆ ಇಲ್ಲ: ವಿ.ಪ. ಸದಸ್ಯ ಪ್ರತಾಪಸಿಂಹ ನಾಯಕ್

Suddi Udaya

ಕುಕ್ಕೇಡಿ ಗ್ರಾಮ ಪಂಚಾಯತ್ ನಲ್ಲಿ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ

Suddi Udaya

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಉಜಿರೆ, ರೋಟರಿ ಕ್ಲಬ್ ಬೆಳ್ತಂಗಡಿ ಇದರ ಆಶ್ರಯದಲ್ಲಿ ಡಿ.10: ಬೆಳಾಲು ಪೆರಿಯಡ್ಕ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಅಭಿವೃದ್ಧಿ ಕಾರ್ಯಗಳ ಹಸ್ತಾಂತರ ಕಾರ್ಯಕ್ರಮ

Suddi Udaya
error: Content is protected !!