April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೈಕ್ ಡಿವೈಡರ್ ಗೆ ಡಿಕ್ಕಿ ಹೊಡೆದ ಪ್ರಕರಣ: ಚಿಕಿತ್ಸೆ ಫಲಿಸದೆ ಕಾಲೇಜು ವಿದ್ಯಾರ್ಥಿ ಸಾವು

ಬೆಳ್ತಂಗಡಿ: ಉಜಿರೆಯ ಕಾಲೇಜು ರಸ್ತೆಯ ಬಳಿ ಚಲಿಸುತ್ತಿದ್ದಾಗ ಬೈಕ್ ನಿಯಂತ್ರಣ ಕಳೆದುಕೊಂಡು ಡಿವೈಡರ್ ಗೆ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಗಂಭೀರ ಗಾಯಗೊಂಡು ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಉಜಿರೆಯ ಎಸ್.ಡಿ.ಎಮ್ ಡಿಪ್ಲೊಮಾ ವಿದ್ಯಾರ್ಥಿ ಕಲ್ಮಂಜ ಗ್ರಾಮದ ಕರಿಯನೆಲ ಆನಂದ ಗೌಡರ ಪುತ್ರ ದಿಕ್ಷೀತ್ (20ವ) ಅಪಘಾತದಲ್ಲಿ ಮೃತಪಟ್ಟ ಯುವಕನಾಗಿದ್ದಾರೆ. ನ.23ರಂದು ಕಾಲೇಜಿನಲ್ಲಿ ಕಾರ್ಯಕ್ರಮವಿದ್ದ ಕಾರಣ ವಿದ್ಯಾರ್ಥಿಯು ಮಧ್ಯಾಹ್ನ ಊಟ ಮಾಡಿ ವಾಪಸ್ ಬರುವಾಗ ಬೈಕಿನ ಸ್ಟ್ಯಾಂಡ್ ತೆಗೆಯದೆ ಚಲಾಯಿಸಿಕೊಂಡು ಬಂದ ಪರಿಣಾಮ ನಿಯಂತ್ರಣ ಕಳೆದುಕೊಂಡ ಬೈಕ್ ರಸ್ತೆಯ ಡಿವೈಡರ್ ಗೆ ಡಿಕ್ಕಿ ಹೊಡೆದಿದ್ದು, ಯುವಕನ ತಲೆಗೆ ಗಂಭೀರ ಗಾಯವಾಗಿದ್ದು, ಆತನನ್ನು ಕೂಡಲೇ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ ವೇಳೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

Related posts

ಚಂದ್ರಯಾನ-3 ಯಶಸ್ವಿಯಾಗಿದ್ದಕ್ಕೆ ಶುಭ ಹಾರೈಸಿದ ಡಾ. ಡಿ ವೀರೇಂದ್ರ ಹೆಗ್ಗಡೆ

Suddi Udaya

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿಯ ಗೌರವ

Suddi Udaya

ಡಿ.24: ಅಯ್ಯಪ್ಪ ವ್ರತಧಾರಿಗಳು ಮತ್ತು ಅಯ್ಯಪ್ಪ ಭಕ್ತರ ತಾಲೂಕು ಸಮಾವೇಶ: ಸಂಪತ್ ಬಿ. ಸುವರ್ಣ

Suddi Udaya

ಡಿ.2 : ಕಾಪಿನಡ್ಕದಲ್ಲಿ 65 ಕೆಜಿ ವಿಭಾಗದ ಪುರುಷರ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾಟ: ಸ.ಕಿ.ಪ್ರಾ.ಶಾಲೆ ಮತ್ತು ಗೆಳೆಯರ ಬಳಗ ಕಾಪಿನಡ್ಕ ಇದರ 25 ನೇ ವರ್ಷದ ರಜತ ಮಹೋತ್ಸವ ಸಂಭ್ರಮ

Suddi Udaya

ಅರಸಿನಮಕ್ಕಿ: ಮೂಜಿನಾಡು ನಾರಾಯಣ ಟೈಲರ್ ನಿಧನ

Suddi Udaya

ಅತ್ಯಂತ ಅಪರೂಪದ ಕುಂಭಮೇಳದಲ್ಲಿ ಪವಿತ್ರ ಸ್ಥಾನಗೈದ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್

Suddi Udaya
error: Content is protected !!