September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೈಕ್ ಡಿವೈಡರ್ ಗೆ ಡಿಕ್ಕಿ ಹೊಡೆದ ಪ್ರಕರಣ: ಚಿಕಿತ್ಸೆ ಫಲಿಸದೆ ಕಾಲೇಜು ವಿದ್ಯಾರ್ಥಿ ಸಾವು

ಬೆಳ್ತಂಗಡಿ: ಉಜಿರೆಯ ಕಾಲೇಜು ರಸ್ತೆಯ ಬಳಿ ಚಲಿಸುತ್ತಿದ್ದಾಗ ಬೈಕ್ ನಿಯಂತ್ರಣ ಕಳೆದುಕೊಂಡು ಡಿವೈಡರ್ ಗೆ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಗಂಭೀರ ಗಾಯಗೊಂಡು ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಉಜಿರೆಯ ಎಸ್.ಡಿ.ಎಮ್ ಡಿಪ್ಲೊಮಾ ವಿದ್ಯಾರ್ಥಿ ಕಲ್ಮಂಜ ಗ್ರಾಮದ ಕರಿಯನೆಲ ಆನಂದ ಗೌಡರ ಪುತ್ರ ದಿಕ್ಷೀತ್ (20ವ) ಅಪಘಾತದಲ್ಲಿ ಮೃತಪಟ್ಟ ಯುವಕನಾಗಿದ್ದಾರೆ. ನ.23ರಂದು ಕಾಲೇಜಿನಲ್ಲಿ ಕಾರ್ಯಕ್ರಮವಿದ್ದ ಕಾರಣ ವಿದ್ಯಾರ್ಥಿಯು ಮಧ್ಯಾಹ್ನ ಊಟ ಮಾಡಿ ವಾಪಸ್ ಬರುವಾಗ ಬೈಕಿನ ಸ್ಟ್ಯಾಂಡ್ ತೆಗೆಯದೆ ಚಲಾಯಿಸಿಕೊಂಡು ಬಂದ ಪರಿಣಾಮ ನಿಯಂತ್ರಣ ಕಳೆದುಕೊಂಡ ಬೈಕ್ ರಸ್ತೆಯ ಡಿವೈಡರ್ ಗೆ ಡಿಕ್ಕಿ ಹೊಡೆದಿದ್ದು, ಯುವಕನ ತಲೆಗೆ ಗಂಭೀರ ಗಾಯವಾಗಿದ್ದು, ಆತನನ್ನು ಕೂಡಲೇ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ ವೇಳೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

Related posts

ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿ ಗೌರವಾರ್ಪಣೆ

Suddi Udaya

ಜ.8 ರಿಂದ ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವರ ಬ್ರಹ್ಮಕಲಶೋತ್ಸವ ಸಂಭ್ರಮ: ಬ್ರಹ್ಮಕಲಶೋತ್ಸವ ಕಾರ್ಯಾಲಯ ಉದ್ಘಾಟನೆ

Suddi Udaya

ಮೇ 17: ಶಾಸಕ ಹರೀಶ್ ಪೂಂಜರ ಸಹಕಾರದಲ್ಲಿ ಉಜಿರೆಯಲ್ಲಿ ಸಂಭ್ರಮದ ಕೇರಳ ಸಾಂಪ್ರದಾಯಿಕ “ವಿಷುಕಣಿ” ಆಚರಣೆ:ಕೇರಳದ ಸಾಂಪ್ರದಾಯಿಕ ಶೈಲಿಯ ಊಟೋಪಚಾರ,ಕೇರಳ ಚೆಂಡೆ ಪ್ರದರ್ಶನ,ಪೂಕಳಂ, ಅಂತರರಾಜ್ಯ ಕಲಾವಿದರಿಂದ ಸಾಂಸ್ಕೃತಿಕ ವೈಭವ

Suddi Udaya

ತಾಲೂಕು ಹಬ್ಬಗಳ ಆಚರಣೆ ಸಮಿತಿಯಿಂದ ಡಾ|| ಬಿ.ಆರ್.ಅಂಬೇಡ್ಕರ್ ಜನ್ಮದಿನಾಚರಣೆ

Suddi Udaya

ಎಸ್‌ಡಿಎಂ ಪಾಲಿಟೆಕ್ನಿಕ್‌ನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಯುವ ರೆಡ್ ಕ್ರಾಸ್ ಘಟಕದ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

Suddi Udaya

ವೇಣೂರು ಯುವ ಸೇವಾ ಸಂಗಮ ಸೇವಾ ಟ್ರಸ್ಟ್ ವತಿಯಿಂದ ಬೆಸ್ಟ್ ಶಾಸಕ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಗೌರವಾರ್ಪಣೆ

Suddi Udaya
error: Content is protected !!