23.8 C
ಪುತ್ತೂರು, ಬೆಳ್ತಂಗಡಿ
May 20, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಕಕ್ಕಿಂಜೆಯ ಮನೆಯ ಶೆಡ್ ನಲ್ಲಿ ನಿಲ್ಲಿಸಿದ್ದ ಇನೋವಾ ಕಾರು ಕಳ್ಳತನ ಪ್ರಕರಣ: ನಾಲ್ವರನ್ನು ಬಂಧಿಸಿದ ಧಮ೯ಸ್ಥಳ ಪೊಲೀಸರು

ಬೆಳ್ತಂಗಡಿ: ಕಕ್ಕಿಂಜೆಯ ಮನೆಯ ಶೆಡ್ ನಲ್ಲಿ ನಿಲ್ಲಿಸಿದ್ದ ಇನೋವಾ ಕಾರನ್ನು ಕಳ್ಳತನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ನಾಲ್ವರನ್ನು ಧಮ೯ಸ್ಥಳ ಪೊಲೀಸರು ಬಂಧಿಸಿದ್ದಾರೆ.

ಕಿನ್ನಿಗೋಳಿ ತಾಳಿಪ್ಪಡಿ ಗ್ರಾಮದ ಉಮಾ ಅಜಯ್ ಶೆಟ್ಟಿ (32ವ) ,ಬೆಳ್ತಂಗಡಿ ತಾಲೂಕಿನ ಸೋಣಂದೂರು ಗ್ರಾಮದ ಗಾಣದಬೆಟ್ಟು ಸೂರಜ್ ಶೆಟ್ಟಿ(23ವ), ಬೆಳ್ತಂಗಡಿ ತಾಲೂಕಿನ ಇಳಂತಿಲ ಗ್ರಾಮದ ಎನ್ಮಾಡಿ ನಿವಾಸಿ ಮಂಜುನಾಥ ಪೂಜಾರಿ(30ವ), ಬಂಟ್ವಾಳ ತಾಲೂಕಿನ ಶಂಭೂರು ಗ್ರಾಮದ ಪರೆಕಲ್ ನಿವಾಸಿಕಿಶೋರ್. ಟಿ (32ವ) ಬಂಧಿತರು.

ಬೆಳ್ತಂಗಡಿ ತಾಲೂಕು ಚಾರ್ಮಾಡಿ ಗ್ರಾಮದ ಕಕ್ಕಿಂಜೆ ಎಂಬಲ್ಲಿ ನವೆಂಬರ್ 9 ರಂದು ರಾತ್ರಿ 10 ಗಂಟೆ ಸಮಯಕ್ಕೆ ಇಸಾಕ್ ಎಂಬವರ ಅಕ್ಕನ ಮಗ ನೌಫಲ್ ಎಂಬವರು ತಮ್ಮ ಕಾರ್ ಶೆಡ್ಡಿನಲ್ಲಿ ನಿಲ್ಲಿಸಿದ್ದ ಇನ್ನೋವಾ ಕಾರನ್ನು ನೌಫಾಲ್ ನ ಗೆಳೆಯ ಸೈಪುದ್ದಿನ್ ಎಂಬಾತನ ಗೆಳೆಯರಾದ ಸೂರಜ್ ಶೆಟ್ಟಿ ಮತ್ತು ಅಜಯ್ ಶೆಟ್ಟಿಯವರು ಬಾಡಿಗೆಗೆ ನೀಡುವಂತೆ ಕೇಳಿದಾಗ ನೀಡದೇ ಇದ್ದುದ್ದರಿಂದ ಸದ್ರಿ ಕಾರನ್ನು ಸೂರಜ್ ಶೆಟ್ಟಿ ಮತ್ತು ಅಜಯ್ ಶೆಟ್ಟಿ ಯವರು ಕಳವು ಮಾಡಿ ತೆಗೆದುಕೊಂಡು ಹೋಗಿರುವ ಬಗ್ಗೆ ಸಂಶಯ ವ್ಯಕ್ತಪಡಿಸಿ ಪೊಲೀಸರಿಗೆ ದೂರು ನೀಡಲಾಗಿತ್ತು. ಈ ಬಗ್ಗೆ ತನಿಖೆ ಕೈಗೊಂಡ ತಂಡ ನ.24 ರಂದು ಕಳ್ಳತನವಾದ ಇನೋವಾ ಕಾರು ಸಮೇತ ಪ್ರಕರಣದ ನಾಲ್ಕು ಜನ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಆರೋಪಿಗಳನ್ನು ಇದೀಗ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಅವರಿಗೆ ಮುಂದಿನ 14 ದಿನಗಳವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ. ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ರಿಷ್ಯಂತ್.ಸಿ.ಬಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಧರ್ಮಪ್ಪ ಎಂ.ಎನ್ ರವರ ನಿರ್ದೇಶನದಂತೆ ಬಂಟ್ವಾಳ ಡಿ.ವೈಎಸ್.ಪಿ ಪ್ರತಾಪ್ ಸಿಂಗ್ ಥೋರಾಟ್ ರವರ ಸೂಚನೆಯಂತೆ ಬೆಳ್ತಂಗಡಿ ವೃತ್ತ ನಿರೀಕ್ಷಕ ನಾಗೇಶ್ ಕದ್ರಿಯವರ ಮಾರ್ಗದರ್ಶನದಲ್ಲಿ ಧರ್ಮಸ್ಥಳ ಪೊಲೀಸ್ ಠಾಣಾ ಸಬ್ ಇನ್ಸೆಕ್ಟರ್ ಅನೀಲ್ ಕುಮಾರ್.ಡಿ ಮತ್ತು ಸಬ್ ಇಸ್ಪೆಕ್ಟರ್ ಸಮರ್ಥ ರವೀಂದ್ರ ಗಾಣಿಗೇರ ಹಾಗೂ ಸಿಬ್ಬಂದಿ ಎ.ಎಸ್.ಐ ಗಳಾದ ಸಾಮ್ಯುವೆಲ್ ಮತ್ತು ಪೌಲೋಸ್ ಹಾಗೂ ಸಿಬ್ಬಂದಿ ರಾಜೇಶ್.ಎನ್, ಪ್ರಶಾಂತ್, ಮಂಜುನಾಥ್, ಮಲ್ಲಿಕಾರ್ಜುನ್ ಎಂಬವರು ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

Related posts

ಉಜಿರೆ: ಶ್ರೀ ದುರ್ಗಾ ಟೆಕ್ಸ್ಟ್ ಟೈಲ್ಸ್ ನಲ್ಲಿ ಫೆಸ್ಟಿವಲ್ ಮೆಗಾ ಡಿಸ್ಕೌಂಟ್ ಆಫರ್

Suddi Udaya

ಬಳಂಜ ಬೊಂಟ್ರೋಟ್ಟುಗುತ್ತು ದೈವಸ್ಥಾನದಲ್ಲಿ ವಾರ್ಷಿಕ ಪ್ರತಿಷ್ಠಾ ವರ್ಧಂತಿ ನೇಮೋತ್ಸವ, ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ: ಕುತ್ಯಾರು ರಸ್ತೆಯಲ್ಲಿ ಗಾಳಿ ಮಳೆಗೆ ವಿದ್ಯುತ್ ತಂತಿ ಮೇಲೆ ಬಿದ್ದ ಮರ

Suddi Udaya

ವೇಣೂರು ಯುವ ಸೇವಾ ಸಂಗಮ ಸೇವಾ ಟ್ರಸ್ಟ್ ನ ಆಮಂತ್ರಣ ಬಿಡುಗಡೆ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಿಂದ ವೈದ್ಯಕೀಯ ಚಿಕಿತ್ಸಾ ನೆರವು

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ. ಪ್ರಾ. ಶಾಲೆಯಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya
error: Content is protected !!