September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಉಜಿರೆ: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಜನ್ಮದಿನ ಆಚರಣೆ

ಉಜಿರೆ: “ಪೂಜ್ಯರು ನಡೆದು ಬಂದ ದಾರಿ ನಮಗೆ ಆದರ್ಶವಾಗಿವೆ. ನಮ್ಮ ಜೀವನಕ್ಕೆ ಅವರ ಆದರ್ಶಗಳು ದಾರಿದೀಪವಾಗಲಿ” ಎಂದು ಎಸ್. ಡಿ. ಎಮ್ ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ಸೋಮಶೇಖರ್ ಬಿ ಶೆಟ್ಟಿ ಹೇಳಿದರು.

ಇವರು ನ.25 ರಂದು ಎಸ್.ಡಿ. ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಉಜಿರೆ ಇಲ್ಲಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರ 76ನೇ ಜನ್ಮ ದಿನದ ಸಂಭ್ರಮಾಚಾರಣೆಯಲ್ಲಿ ಪಾಲ್ಗೊಂಡು ಮಾತನಾಡಿದರು.

ಶಾಲಾ ವಿದ್ಯಾರ್ಥಿಗಳು ಪೂಜ್ಯರಿಗೆ ಜನ್ಮ ದಿನದ ಶುಭಾಶಯ ಪತ್ರಗಳು, ಸ್ವ ರಚಿತ ಗಾಯನ, ಚಿತ್ರಗಳ ಉಡುಗೊರೆಯನ್ನು ಮಾಡಿದರು. ಶಾಲಾ ವತಿಯಿಂದ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಸ್ಪರ್ಧೆಯನ್ನು ಆಯೋಜಿಸಿ ಬಹುಮಾನ ವಿತರಿಸಲಾಯಿತು. 

ವೇದಿಕೆಯಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಮನಮೋಹನ್ ನಾಯಕ್ ಕೆ ಜಿ ಉಪಸ್ಥಿತರಿದ್ದರು. ಶಿಕ್ಷಕಿ ನೀತು ಪ್ರಸಾದ್ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಜ್ಞಾನ ಪೀಠ ಪುರಸ್ಕೃತರು: ಉಪನ್ಯಾಸ ಮಾಲೆ ಕಾರ್ಯಕ್ರಮದ ಉದ್ಘಾಟನೆ

Suddi Udaya

ಕಳೆಂಜ ಗ್ರಾ.ಪಂ.ನಲ್ಲಿ 78ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಅಳದಂಗಡಿ: ಹಿಂದೂ ಹೃದಯ ಸಂಗಮ ಸಮಾವೇಶದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮೂಡುಬಿದಿರೆ ಎಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕಳೆಂಜ: ನಡುಜಾರ್ ಸ.ಕಿ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

SKSSF ಮದ್ದಡ್ಕ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!