April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಜನ್ಮದಿನದ ಅಂಗವಾಗಿ ಸ್ವಚ್ಛತಾ ಅಭಿಯಾನ

ಉಜಿರೆ : ಪ್ರತಿಯೊಬ್ಬರಲ್ಲೂ ಸ್ವಚ್ಛತೆ ಅರಿವು ಮುಖ್ಯ , ಈ ದಿಶೆಯಲ್ಲಿ ವಿದ್ಯಾರ್ಥಿಗಳು ಇತರರಿಗೆ ಮಾದರಿಯಾಗಬೇಕು. ಈ ಮೂಲಕ ಸ್ವಸ್ಥ ಸಮಾಜ ನಿರ್ಮಾಣ ಸಾಧ್ಯ ಎಂದು
ಉಜಿರೆ ವಾಣಿಜ್ಯ ಹಾಗೂ ಕೈಗಾರಿಕಾ ಸಂಘದ ಅಧ್ಯಕ್ಷರಾದ ಅರವಿಂದ ಕಾರಂತ್ ಹೇಳಿದರು.


ಇವರು ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ಎಸ್ ಡಿ ಎಂ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಡಾ. ವೀರೇಂದ್ರ ಹೆಗ್ಗಡೆ ಅವರ ಜನ್ಮದಿನದ ಅಂಗವಾಗಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಮತ್ತು ಉಜಿರೆ ವಾಣಿಜ್ಯ ಮತ್ತು ಕೈಗಾರಿಕಾ ಸಂಘಗಳ ಸಹಯೋಗದಲ್ಲಿ ನಡೆದ ಉಜಿರೆಯ ಸ್ವಚ್ಛತಾ ಅಭಿಯಾನವನ್ನು ಉದ್ಘಾಟಿಸಿ ಮಾತನಾಡಿದರು.


ಪ್ರಾಚಾರ್ಯ ಪ್ರಮೋದ್ ಕುಮಾರ್ ಅವರು ಅಧ್ಯಕ್ಷತೆ ವಹಿಸಿ ವಿದ್ಯಾರ್ಥಿಗಳಲ್ಲಿ ಮೊದಲಾಗಿ ಸ್ವಚ್ಛತೆ ಅರಿವು ಇರಬೇಕು. ತನ್ಮೂಲಕ ನಾವು ಇತರರಲ್ಲಿ ಸ್ವಚ್ಛತೆಯ ಜಾಗೃತಿ ಮೂಡಿಸಲು ಸಾಧ್ಯ ಎಂದರು.

ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಬೇಬಿ , ಮನಃಶಾಸ್ತ್ರ ವಿಭಾಗದ ಮುಖ್ಯಸ್ಥೆ ಶ್ಯಾಮಿಲ , ಯೋಜನಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್ , ಸಹ ಯೋಜನಾಧಿಕಾರಿ ಪದ್ಮಶ್ರೀ ರಕ್ಷಿತ್ , ನಾಯಕಿ ದಕ್ಷಾ ಉಪಸ್ಥಿತರಿದ್ದರು.
ಸ್ವಯಂ ಸೇವಕಿ ಹರ್ಷಿತಾ ನಿರೂಪಿಸಿ ವಂದಿಸಿದರು.

Related posts

ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ಘಟಕ ಹಾಗೂ ಅರಣ್ಯ ಅಧಿಕಾರಿಗಳಿಂದ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಗಿಡ ನಾಟಿ ಕಾರ್ಯಕ್ರಮ

Suddi Udaya

ನವ ವಿವಾಹಿತ, ಕಂಪನಿ ಉದ್ಯೋಗಿ, ನಾಲ್ಕೂರಿನ ಯುವಕ ಮೈಸೂರಲ್ಲಿ ಆತ್ಮಹತ್ಯೆ

Suddi Udaya

ಫೆ.13-22: ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಉಜಿರೆ ಎಸ್.ಡಿ.ಎಮ್ ಪ.ಪೂ. ಕಾಲೇಜಿನ ಸಂಸ್ಕೃತ ಸಂಘದ ಅಧ್ಯಕ್ಷನಾಗಿ ಗುರುದತ್ತ ಮರಾಠೆ ಆಯ್ಕೆ

Suddi Udaya

ಹರೀಶ್ ಪೂಂಜ ನವ ಬೆಳ್ತಂಗಡಿಯ ಹರಿಕಾರ” ಆಲ್ಬಮ್ ಸಾಂಗ್ ಬಿಡುಗಡೆ

Suddi Udaya

ರಾಜ್ಯಮಟ್ಟದ ಮುಕ್ತ ಕರಾಟೆ ಚಾಂಪಿಯನ್ಶಿಪ್ ಸ್ಪರ್ಧೆ: ಶಿಹಾನ್ ಅಬ್ದುಲ್ ರೆಹಮಾನ್ ರವರ ನೇತೃತ್ವದ ಉಜಿರೆ ಹಾಗೂ ಬೆಳ್ತಂಗಡಿ ಕರಾಟೆ ತರಬೇತಿ ಕೇಂದ್ರದ ಮಕ್ಕಳಿಗೆ ಹಲವು ಪ್ರಶಸ್ತಿ

Suddi Udaya
error: Content is protected !!