24.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ಭಜನಾ ಮಂಡಳಿಯ 46ನೇ ವರ್ಷದ ಭಜನಾ ಸಪ್ತಾಹ

ಮಚ್ಚಿನ: ಶ್ರೀ ಅನಂತೇಶ್ವರ ಸ್ವಾಮಿ ಭಜನಾ ಮಂಡಳಿ ಬಳ್ಳಮಂಜ ಇದರ 46ನೇ ವರ್ಷದ ಭಜನಾ ಸಪ್ತಾಹವು ನ.27 ರಂದು ಭಜನೆ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು.

ಧಾರ್ಮಿಕ ಸಭಾ ಕಾರ್ಯಕ್ರಮದ ಧಾರ್ಮಿಕ ಉಪನ್ಯಾಸಕರಾಗಿ ಬಂಟ್ವಾಳ ತಾಲೂಕು ಜನಜಾಗೃತಿ ವೇದಿಕೆಯ ನಿಕಟ ಪೂರ್ವ ಅಧ್ಯಕ್ಷರಾದ ಬಾಲಕೃಷ್ಣ ಆಳ್ವ ಕೊಡಜೆ ಇವರು ಮಾತನಾಡಿ ಮನೆ ಮನೆಯಲ್ಲಿ ನಿರಂತರವಾಗಿ ಭಜನೆ ನಡೆದರೆ, ಆ ಮನೆ ವಿಭಜನೆಯಾಗದು. ಮನೆಯಲ್ಲಿ ಶುಭಕಾರ್ಯಗಳು ನಡೆದಾಗ ಭಜನೆಯನ್ನು ಮಾಡಿದರೆ ಶುಭ ಕಾರ್ಯಕ್ಕೆ ದೇವರ ಅನುಗ್ರಹ ಇರುವುದು ಎಂದರು.

ವೇದಿಕೆಯಲ್ಲಿ ದೇವಾಲಯದ ಅನುವಂಶಿಕ ಆಡಳಿತ ಮೊಕ್ತೇಶರರಾದ ಡಾ| ಹರ್ಷ ಸಂಪಿಗೆತ್ತಾಯ, ಭಜನಾ ಮಂಡಳಿಯ ಅಧ್ಯಕ್ಷರಾದ ಪುಷ್ಪಕ್ ರಾವ್ ಇವರು ಉಪಸ್ಥಿತರಿದ್ದರು.

ಮಂಡಳಿಯ ವಾರ್ಷಿಕ ವರದಿಯನ್ನು ಕಾರ್ಯದರ್ಶಿಗಳಾದ ಯುವರಾಜ್ ಬರಮೇಲು ಮಂಡಿಸಿದರು. ಬಾಲಕೃಷ್ಣ ಬಿ ಸ್ವಾಗತಿಸಿ, ಯತೀಶ್ ರೈ ಅವರು ವಂದಿಸಿದರು. ಹರ್ಷ ಬಳ್ಳಮಂಜ ಕಾರ್ಯಕ್ರಮ ನಿರೂಪಿಸಿದರು. ನಂತರ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳಿಂದ ನೃತ್ಯ ವೈವಿಧ್ಯ ನಡೆಯಿತು.

ದೇವರಿಗೆ ಭಜನೆ ಸೇವೆ ರಂಗಪೂಜೆ, ದೀಪೋತ್ಸವ ದೊಂದಿಗೆ ಭಜನಾ ಮಂಗಳೋತ್ಸವ ನಡೆಯಿತು.

Related posts

ಉಜಿರೆ ಬೆನಕ ಆಸ್ಪತ್ರೆಗೆ ವಿಧಾನಸಭೆಯ ಸ್ಪೀಕರ್ ಯು. ಟಿ ಖಾದರ್ ಭೇಟಿ

Suddi Udaya

ಚಂದ್ರಯಾನ -3 ಯಶಸ್ವಿಗಾಗಿ ಕಳೆಂಜ ಶ್ರೀ ಸದಾಶಿವೇಶ್ವರ ದೇವರ ಸನ್ನಿಧಿಯಲ್ಲಿ ವಿಶೇಷ ಪ್ರಾರ್ಥನೆ

Suddi Udaya

ಕುಕ್ಕೇಡಿ:ಕೋಟಿ ಚೆನ್ನಯ ಸೇವಾ ಸಂಘದಿಂದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya

ಕಕ್ಕಿಂಜೆ: ಬೀಟಿಗೆ ಹಯಾತುಲ್ ಇಸ್ಲಾಂ ಮದರಸದ ವಾರ್ಷಿಕ ಮಹಾಸಭೆ: ಸಮಿತಿ ರಚನೆ

Suddi Udaya

ಪತ್ನಿ – ಮಗಳಿಗೆ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾದ ಆರೋಪಿ ಬಂಧನ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya
error: Content is protected !!